ಹಲವು ಕಾಂಗ್ರೆಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ: ಸಿ.ಟಿ.ರವಿ
ಪಕ್ಷದ ವರಿಷ್ಠರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ...
Team Udayavani, Aug 19, 2022, 12:58 PM IST
ಪಣಜಿ: ಗೋವಾ, ಮಹಾರಾಷ್ಟ್ರ, ಕರ್ನಾಟಕ ಮತ್ತು ಹಿಮಾಚಲ ಪ್ರದೇಶದ ಹಲವು ಕಾಂಗ್ರೆಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ, ಈ ಕುರಿತು ಪಕ್ಷದ ವರಿಷ್ಠರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಗೋವಾ ಉಸ್ತುವಾರಿ ಸಿ.ಟಿ.ರವಿ ಹೇಳಿದ್ದಾರೆ.
ಗೋವಾದಲ್ಲಿ ಬಿಜೆಪಿ ಪ್ರಮುಖ ನಾಯಕರ ಮೂರು ದಿನಗಳ ವಸತಿ ತರಬೇತಿ ಗುರುವಾರದಿಂದ ಆರಂಭವಾಗಿದ್ದು, ಶಿಬಿರದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಸೇರಿದಂತೆ ಸಚಿವರು, ಶಾಸಕರು, ಸಮಿತಿ ಮುಖಂಡರು ಭಾಗವಹಿಸಿದ್ದಾರೆ. ಶಿಬಿರದ ಉದ್ಘಾಟನಾ ಸಮಾರಂಭದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿ,ಬಿಜೆಪಿ ಪಕ್ಷದ ರಾಷ್ಟ್ರೀಯ ಕಾರ್ಯಗಳಿಂದಾಗಿ ವಿವಿಧ ರಾಜ್ಯಗಳ ಅನೇಕ ಶಾಸಕರು ನಮ್ಮ ಪಕ್ಷದತ್ತ ಆಕರ್ಷಿತರಾಗುತ್ತಿದ್ದಾರೆ. ಪ್ರಮುಖವಾಗಿ ಗೋವಾ, ಮಹಾರಾಷ್ಟ್ರ, ಕರ್ನಾಟಕ ಮತ್ತು ಹಿಮಾಚಲ ಪ್ರದೇಶದ ಹಲವು ಕಾಂಗ್ರೆಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಈ ಬಗ್ಗೆ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಕೆಲ ದಿನಗಳ ಹಿಂದೆ ಕಾಂಗ್ರೆಸ್‍ನ ಕೆಲ ಶಾಸಕರು ಬಿಜೆಪಿ ಸೇರುವ ಬಗ್ಗೆ ಮಾತನಾಡುತ್ತಿದ್ದರು, ಇದು ಮಿಷನ್ ಕಮಲಕ್ಕೆ ಪುಷ್ಠಿ ನೀಡುತ್ತದೆ. ಇದಲ್ಲದೇ ಶಾಸಕರ ಪಕ್ಷಾಂತರದಿಂದ ಮತ್ತಷ್ಟು ಬಲ ಬರಬಹುದು ಎಂದು ಅಭಿಪ್ರಾಯಪಟ್ಟರು.
ಭಾರತ ವಿಶ್ವಗುರುವಾಗಲು 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಅಗತ್ಯವಿದೆ. ಬಿಜೆಪಿಯ ಉತ್ತಮ ನೀತಿ, ನಾಯಕತ್ವ, ಧ್ಯೇಯೋದ್ದೇಶಗಳಿಂದಾಗಿ ದೇಶಾದ್ಯಂತ ಬಿಜೆಪಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಇದುವರೆಗೆ ಜಾತಿವಾದ ಮತ್ತು ಭ್ರಷ್ಟಾಚಾರವನ್ನು ಬೆಂಬಲಿಸುತ್ತಿದೆ. ಇದೀಗ ಗೋವಾದಲ್ಲಿ ಎರಡೂ ಲೋಕಸಭಾ ಸ್ಥಾನಗಳನ್ನು ಮತ್ತು ದೇಶಾದ್ಯಂತ ಎನ್‍ಡಿಎಗೆ 400 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ನಮ್ಮ ಗುರಿಯಾಗಿದೆ. ಅದರಲ್ಲಿ ನಾವು ಯಶಸ್ವಿಯಾಗುತ್ತೇವೆ ಎಂದು ಸಿ.ಟಿ ರವಿ ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.