ಬಂಧಿತ ಕೃಷ್ಣಮೂರ್ತಿ, ಸಾವಿತ್ರಿ ಜೈಲಿಗೆ
Team Udayavani, Nov 12, 2021, 5:50 AM IST
ತಿರುವನಂತಪುರ: ಇತ್ತೀಚೆಗೆ ಬಂಧನಕ್ಕೊಳಗಾಗಿದ್ದ ಮಾವೋವಾದಿ ನಾಯಕರಾದ ಬಿ.ಜಿ. ಕೃಷ್ಣಮೂರ್ತಿ ಹಾಗೂ ಸಾವಿತ್ರಿ ಅವರನ್ನು ಬುಧವಾರದಂದು ತಾಳತ್ತೆರಿ ಸ್ಥಳೀಯ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದ್ದು, ಅವರನ್ನು ಬಿಗಿಭದ್ರತೆಯೊಂದಿಗೆ ಕೇರಳದ ವಿಯೂರ್ ಜೈಲಿಗೆ ರವಾನಿಸಲಾಗಿದೆ.
ಕೃಷ್ಣಮೂರ್ತಿ ಹಾಗೂ ಕಬನಿ ದಳಂ ಪ್ರಾಂತ್ಯದ ಕಮಾಂಡರ್ ಆಗಿರುವ ರಜಿತ್ ಅಲಿಯಾಸ್ ಸಾವಿತ್ರಿಯನ್ನು ಕಾಸರಗೋಡಿನ ಮಧೂರಿನಲ್ಲಿ ಇತ್ತೀಚೆಗೆ ರಾಷ್ಟ್ರೀಯ ತನಿಖಾ ಆಯೋಗ (ಎನ್‌ಐಎ) ವಶಕ್ಕೆ ಪಡೆದಿತ್ತು. ಬುಧವಾರ ಬೆಳಗ್ಗೆ 10:25ರ ಸುಮಾರಿಗೆ ಅವರನ್ನು ನ್ಯಾಯಾಲಯಕ್ಕೆ ಕರೆತಂದಾಗಲೂ ಭಾರೀ ಭದ್ರತೆ ಕೈಗೊಳ್ಳಲಾಗಿತ್ತು. ಹಲವಾರು ಪೊಲೀಸರು ಮಫ್ತಿಯಲ್ಲಿದ್ದು ಭದ್ರತೆ ಒದಗಿಸಿದರು.
ಇದನ್ನೂ ಓದಿ:ಟಿ20 ವಿಶ್ವಕಪ್: ಪಾಕಿಸ್ಥಾನವನ್ನು ಹೊರದಬ್ಬಿದ ಆಸ್ಟ್ರೇಲಿಯ
ಜನರ ಮಧ್ಯೆಯಿಂದ ನ್ಯಾಯಾಲಯದೊಳಕ್ಕೆ ಕರೆದೊಯ್ಯುವಾಗ ಕೃಷ್ಣ ಮೂರ್ತಿ ಮಾವೋವಾದದ ಪರ ಹಾಗೂ ಬಂಡವಾಳಶಾಹಿ ವ್ಯವಸ್ಥೆ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದ. ಕೃಷ್ಣಮೂರ್ತಿ ಹಾಗೂ ಸಾವಿತ್ರಿ ವಿರುದ್ಧ ಐಪಿಸಿ ಹಾಗೂ ಯುಎಪಿಎ ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಐದು ಪ್ರಕರಣಗಳು ಕೇಳಕ್ಕಮ್‌ನಲ್ಲಿ ಹಾಗೂ ಒಂದು ಪ್ರಕರಣ ಅರಾಲಮ್‌ನಲ್ಲಿ ದಾಖಲಾಗಿವೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.