ಮುಂಬಯಿ ಬಂದ್ ಕರೆ ಹಿಂಪಡೆದ ಮರಾಠ ಕ್ರಾಂತಿ ಮೋರ್ಚಾ
Team Udayavani, Jul 25, 2018, 4:01 PM IST
ಮುಂಬಯಿ : ಮರಾಠ ಸಮುದಾಯದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಯನ್ನು ಆಗ್ರಹಿಸಿ ಮರಾಠ ಕ್ರಾಂತಿ ಮೋರ್ಚಾ ನೀಡಿದ್ದ ಮುಂಬಯಿ ಬಂದ್ ಕರೆಯನ್ನು ಹಿಂಪಡೆದುಕೊಂಡಿದೆ.
ಮಹಾರಾಷ್ಟ್ರ ಬಂದ್ನ ಎರಡನೇ ದಿನವಾದ ಇಂದು ರೈಲು, ವಾಹನಗಳ ಓಡಾಟ ಹಿಂಸಾತ್ಮಕ ಪ್ರತಿಭಟನೆಯಿಂದಾಗಿ ತೀವ್ರವಾಗಿ ಬಾಧಿತವಾದವು. ಇಂದು ಬೆಳಗ್ಗೆ ದುಷ್ಕರ್ಮಿಗಳು ಮನ್ಖುರ್ದ್ ನಲ್ಲಿ ಕಲ್ಲೆಸೆತ ನಡೆಸಿ ಬಸ್ಸಿಗೆ ಬೆಂಕಿ ಹಚ್ಚಿದರು.
ಕೇಂದ್ರ ಸಚಿವರಾಗಿರುವ ರಿಪಬ್ಲಿಕನ್ ಪಕ್ಷದ ನಾಯಕ ರಾಮದಾಸ ಅಠಾವಳೆ ಅವರು ಪ್ರತಿಭಟನಕಾರರನ್ನು ಬೆಂಬಲಿಸಿದರಾದರೂ ಶಾಂತಿಯುತವಾಗಿ ತಮ್ಮ ಧ್ವನಿ ಎತ್ತುವಂತೆ ಮನವಿ ಮಾಡಿಕೊಂಡರು. ಈಗಿನ ಮೀಸಲಾತಿ ಪ್ರಮಾಣವನ್ನು ಶೇ.50ರಿಂದ ಶೇ.70ಕ್ಕೆ ಏರಿಸಲು ಸಂಸತ್ತಿನಲ್ಲಿ ನಾವು ಕಾನೂನು ರೂಪಿಸಬೇಕಾಗಿದೆ ಎಂದವರು ಪ್ರತಿಭಟನಕಾರರಿಗೆ ಮನವರಿಕೆ ಮಾಡಿದರು.
ಬಾಂದ್ರಾದಲ್ಲಿಂದು ಪ್ರತಿಭಟನಕಾರರು ಅಂಗಡಿದಾರರ ಮುಂದೆ ಕೈಜೋಡಿಸಿ ಬಂದ್ ಮಾಡಿರೆಂದು ವಿನಂತಿಸಿದರು. ಆದರೆ ಮರಾಠಾ ಕ್ರಾಂತಿ ಮೋರ್ಚಾ ಕಾರ್ಯಕರ್ತರು ಕೆಲವೆಡೆ ಬಲವಂತದಿಂದ ಅಂಗಡಿ, ಹೊಟೇಲುಗಳನ್ನು ಮುಚ್ಚಿಸುತ್ತಿದ್ದರು.
ಇಂದು ಬೆಳಗ್ಗಿನ ವರದಿ :
ಇಂದು ಬುಧವಾರ ಎರಡನೇ ದಿನಕ್ಕೆ ಕಾಲಿಟ್ಟಿರುವ ಮರಾಠ ಮೀಸಲಾತಿ ಚಳವಳಿ ಇನ್ನಷ್ಟು ತೀವ್ರತೆಯನ್ನು ಕಂಡಿದೆ. ಇಂದು ಬೆಳಗ್ಗೆ ಮತ್ತೋರ್ವ ಪ್ರತಿಭಟನಕಾರ ಜಗನ್ನಾಥ ಸೋನವಾನೆ ಎಂಬವರು ಮೃತಪಟ್ಟಿರುವುದಾಗಿ ವರದಿಯಾಗಿದೆ.
ಸೋನವಾನೆ ಸಾವನ್ನು ಅನುಸರಿಸಿ ಕೋಪೋದ್ರಿಕ್ತರಾಗಿರುವ ಪ್ರತಿಭಟನಕಾರರು ಮುಂಬಯಿಯಲ್ಲಿ ಮಾತ್ರವಲ್ಲದೆ ಇನ್ನೂ ಹಲವು ಕಡೆಗಳಲ್ಲಿ ರಸ್ತೆಗಳನ್ನು ಬ್ಲಾಕ್ ಮಾಡಿ ವಾಹನಗಳ ಸಂಚಾರವನ್ನು ತಡೆದಿದ್ದಾರೆ.
ಮೊನ್ನೆ ಸೋಮವಾರ ಮೀಸಲಾತಿ ಪ್ರತಿಭಟನಕಾರ ಕಾಕಾಸಾಹೇಬ್ ಶಿಂಧೆ ಔರಂಗಾಬಾದ್ ಸಮೀಪ ಗೋದಾವರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ಮರಾಠ ಸಮುದಾಯದವರು ತಮಗೆ ಸರಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಯನ್ನು ಆಗ್ರಹಿಸಿ ಆಂದೋಲನ ನಡೆಸುತ್ತಿದ್ದಾರೆ.
ಆತ್ಮಾಹುತಿ ಮಾಡಿಕೊಂಡಿರುವ ಕಾಕಾಸಾಹೇಬ್ ಶಿಂಧೆ ಮತ್ತು ಜಗನ್ನಾಥ ಸೋನವಾನೆ ಅವರಿಗೆ ಹುತಾತ್ಮ ಸ್ಥಾನಮಾನ ನೀಡಬೇಕೆಂದೂ ಮರಾಠ ಪ್ರತಿಭಟನಕಾರರು ಆಗ್ರಹಿಸಿದ್ದಾರೆ.
ಮರಾಠ ಕ್ರಾಂತಿ ಸಮಾಜ ಇಂದು ಬುಧವಾರ ಶಾಂತಿಯುತ ಬಂದ್ ಗೆ ಕರೆ ನೀಡಿದೆ. ಪ್ರತಿಭಟನಕಾರರು ಮುಂಬಯಿ ಬಂದ್ ಗೆ ಕರೆ ನೀಡಿದ್ದಾರೆ.
ನಿನ್ನೆಯ ಆಂದೋಲನ ಹಿಂಸೆಗೆ ತಿರುಗಿದ ಪರಿಣಾಮವಾಗಿ ಕಲ್ಲೆಸೆತಕ್ಕೆ ಗುರಿಯಾಗಿ ಓರ್ವ ಕಾನ್ಸ್ಟೆಬಲ್ ಮೃತಪಟ್ಟು ಇತರ 9 ಮಂದಿ ಪೊಲೀಸರು ಗಾಯಗೊಂಡಿದ್ದರು. ಮೂವರು ಪ್ರತಿಭಟನಕಾರರು ಆತ್ಮಹತ್ಯೆಗೆ ಯತ್ನಿಸಿದ್ದರು. ಪೊಲೀಸ್ ಮತ್ತು ಇತರ ಅನೇಕ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
HMPV ಸೋಂಕಿಗೆ ಆತಂಕ ಬೇಡ: ಐಸಿಎಂಆರ್
Mahakumbh 2025; ವಕ್ಫ್ ಮಂಡಳಿಗೆ ಸೇರಿದ ಜಾಗದಲ್ಲಿ ಕುಂಭಮೇಳ: ಮೌಲ್ವಿ ವಿವಾದ
ಆಸೀಸ್ ರೀತಿ ಸಾಮಾಜಿಕ ಜಾಲತಾಣ ಬಳಕೆ ಬ್ಯಾನ್ ಮಾಡಿಲ್ಲ: ಐಟಿ ಕಾರ್ಯದರ್ಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.