ವಿಧಿವತ್ತಾದ ಆಚರಣೆಗಳಿಲ್ಲದ ಮ್ಯಾರೇಜ್ ಸರ್ಟಿಫಿಕೆಟ್ ಅಸಿಂಧು: ಮುಂಬೈ ಹೈಕೋರ್ಟ್
Team Udayavani, Apr 23, 2020, 6:15 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮುಂಬಯಿ: ಮದುವೆಯನ್ನು ಸಾಕ್ಷೀಕರಿಸುವ ಯಾವುದೇ ವಿಧಿವತ್ತಾದ ಆಚರಣೆಗಳಿಲ್ಲದೆ ನೀಡಲಾದ ‘ಮ್ಯಾರೇಜ್ ಸರ್ಟಿಫಿಕೆಟ್’ ಅಸಿಂಧು ಎಂದು ಮುಂಬೈ ಹೈಕೋರ್ಟ್ ತಿಳಿಸಿದೆ.
ಥಾಣೆ ನಿವಾಸಿಯೊಬ್ಬರ ‘ಮ್ಯಾರೇಜ್ ಸರ್ಟಿಫಿಕೆಟ್’ಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯ ಈ ತೀರ್ಪು ನೀಡಿದೆ.
ಥಾಣೆ ನಿವಾಸಿಯೊಬ್ಬ ನಾಲ್ಕು ವರ್ಷಗಳ ಹಿಂದೆ ವ್ಯಾಯಾಮ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಸಹೋದ್ಯೋಗಿಯನ್ನು ಪ್ರೀತಿಸುತ್ತಿದ್ದು, ಆಕೆಯ ಮನೆಯಲ್ಲಿ ಈ ಮದುವೆಗೆ ಒಪ್ಪಲಿಲ್ಲ ಎಂಬ ಕಾರಣಕ್ಕೆ 2016ರ ಸೆ.29ರಂದು ಥಾಣೆ ಮುನ್ಸಿಪಲ್ ಕಾರ್ಪೋರೇಷನ್ನಿಂದ ‘ಮ್ಯಾರೇಜ್ ಸರ್ಟಿಫಿಕೆಟ್’ ಪಡೆದುಕೊಂಡಿದ್ದ.
ಸ್ಥಳೀಯ ಮಂಡಳಿಯೊಂದರಲ್ಲಿ 2016ರ ಜು.28ರಂದು ಇವರಿಬ್ಬರಿಗೆ ಮದುವೆಯಾಗಿದೆ ಎಂಬುದಾಗಿ ‘ಸರ್ಟಿಫಿಕೆಟ್ನಲ್ಲಿ’ ಬರೆಯಲಾಗಿತ್ತು. ಇದನ್ನು ಆಕ್ಷೇಪಿಸಿ, ಹುಡುಗಿಯ ಪಾಲಕರು ಠಾಣೆಗೆ ದೂರು ನೀಡಿದ್ದರು.
ಈತ ತಮ್ಮ ಮಗಳನ್ನು ಅಪಹರಿಸಿ, ಬಲವಂತವಾಗಿ ಸಹಿ ಮಾಡಿಸಿಕೊಂಡಿದ್ದಾನೆಂದು ದೂರಿದ್ದರು. 2017ರ ನ.16ರಂದು ಪ್ರಕರಣದ ವಿಚಾರಣೆ ನಡೆಸಿದ ಥಾಣೆ ಕೌಟುಂಬಿಕ ನ್ಯಾಯಾಲಯ, ‘ಮ್ಯಾರೇಜ್ ಸರ್ಟಿಫಿಕೆಟ್’ನ್ನು ಊರ್ಜಿತಗೊಳಿಸಬೇಕೆಂಬ ಈತನ ಮನವಿಯನ್ನು ತಳ್ಳಿಹಾಕಿತ್ತು. ಇದನ್ನು ಪ್ರಶ್ನಿಸಿ ಈತ, ಹೈಕೋರ್ಟ್ ಮೊರೆ ಹೋಗಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.