ಸೇನೆಗೆ ಸೇರಿದ ಹುತಾತ್ಮ ಯೋಧನ ಪತ್ನಿ ಸ್ವಾತಿ
Team Udayavani, Sep 10, 2017, 8:20 AM IST
ಚೆನ್ನೈ: ಇವರು ದೇಶಕ್ಕಾಗಿ ಪ್ರಾಣ ತೆತ್ತ ಪತಿಯನ್ನು ನೆನೆಯುತ್ತಾ, ಕಣ್ಣೀರುಡುತ್ತಾ ಬದುಕು ಸವೆಸಲಿಲ್ಲ. ಬದಲಿಗೆ ಸೇನೆ ಸೇರಿ ದೇಶಾದ್ಯಂತ ಇತರರಿಗೂ ಮಾದರಿಯಾಗಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗೆ ಹೋರಾಡಿ ಹುತಾತ್ಮರಾದ ಕರ್ನಲ್ ಸಂತೋಷ್ ಮಹಾದಿಕ್ ಅವರ ಪತ್ನಿ ಸ್ವಾತಿ ಮಹಾದಿಕ್(38) ಅವರ ದಿಟ್ಟತನದ ಕಥೆಯಿದು. 2 ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡ ಸ್ವಾತಿ, ಈಗ 11 ತಿಂಗಳ ಕಠಿಣ ತರಬೇತಿ ಮುಗಿಸಿ ತಾವೇ ಸ್ವತಃ ಸೈನ್ಯಕ್ಕೆ ಸೇರ್ಪಡೆಯಾಗಿದ್ದಾರೆ.
ಎರಡು ಮಕ್ಕಳ ತಾಯಿಯಾಗಿರುವ ಸ್ವಾತಿ ಮಹಾದಿಕ್ ಶನಿವಾರ ಸೇನಾ ಸಶಸ್ತ್ರ ಪಡೆಯ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಸೇನಾ ಪದಕ ವಿಜೇತ ಪತಿಯ ದಾರಿಯಲ್ಲೇ ನಡೆದ ಸ್ವಾತಿ ಕಳೆದ ಅಕ್ಟೋಬರ್‌ನಲ್ಲಿ ಚೆನ್ನೈನ ಸೇನಾಧಿಕಾರಿಗಳ ತರಬೇತಿ ಅಕಾಡೆಮಿಗೆ ಸೇರಿದ್ದರು. 11 ತಿಂಗಳ ತರಬೇತಿ ಬಳಿಕ ಪುಣೆಯಲ್ಲಿ ಕೆಲಸಕ್ಕೆ ಸೇರಿದ್ದಾರೆ. ಇವರಲ್ಲದೆ, ಕರ್ತವ್ಯದ ವೇಳೆ ಮೃತಪಟ್ಟ ಮತ್ತೂಬ್ಬ ಯೋಧನ ಪತ್ನಿ ನಿಧಿ ದುಬೆ ಎಂಬವರೂ ಶನಿವಾರ ಸೇನೆಗೆ ಸೇರ್ಪಡೆ ಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.