ಮಸೂದ್ಗೆ ಕಿಡ್ನಿ ವೈಫಲ್ಯ; ಸೇನಾ ಆಸ್ಪತ್ರೆಯಲ್ಲೇ ಚಿಕಿತ್ಸೆ
Team Udayavani, Mar 3, 2019, 12:30 AM IST
ಉಗ್ರರನ್ನು ಪೋಷಿಸುತ್ತಿಲ್ಲ ಎಂದು ಹೇಳುತ್ತಾ ಜಾಗತಿಕ ಸಮುದಾಯದ ಕಣ್ಣಿಗೆ ಮಣ್ಣೆರಚುತ್ತಿರುವ ಪಾಕಿಸ್ಥಾನವು, ಈಗ ಜೈಶ್ ಉಗ್ರ ಸಂಘಟನೆ ಸಂಸ್ಥಾಪಕ ಮಸೂದ್ ಅಜರ್ನನ್ನು ಸೇನಾ ಆಸ್ಪತ್ರೆಯಲ್ಲೇ ಇಟ್ಟು ಚಿಕಿತ್ಸೆ ನೀಡುತ್ತಿರುವ ವಿಚಾರ ತಿಳಿದುಬಂದಿದೆ. ಮಸೂದ್ ಅಜರ್ಗೆ ಕಿಡ್ನಿ ವೈಫಲ್ಯ ಉಂಟಾಗಿದ್ದು, ರಾವಲ್ಪಿಂಡಿಯಲ್ಲಿರುವ ಪಾಕಿಸ್ಥಾನ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪಾಕಿಸ್ಥಾನ ಸರಕಾರದ ಅಧಿಕಾರಿಗಳೇ ತಿಳಿಸಿದ್ದಾರೆ.
ಇತ್ತೀಚೆಗೆ, ಪಾಕಿಸ್ಥಾನದ ವಿದೇಶಾಂಗ ಸಚಿವ ಖುರೇಶಿ ಅವರು, ಮಸೂದ್ ಪಾಕಿಸ್ಥಾನದಲ್ಲೇ ಇದ್ದಾನೆ ಹಾಗೂ ಆತನ ಆರೋಗ್ಯ ಸ್ಥಿತಿ ಸರಿಯಿಲ್ಲ ಎಂದು ಹೇಳಿದ ಬೆನ್ನಲ್ಲೇ ಈ ಮಾಹಿತಿ ಹೊರಬಿದ್ದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸೇನಾಧಿಕಾರಿ ಯೊಬ್ಬರು, “ಮಸೂದ್ನ ವೈದ್ಯಕೀಯ ದಾಖಲೆಗಳ ಪ್ರಕಾರ, ಆತ ಕಿಡ್ನಿ ವೈಫಲ್ಯಕ್ಕೆ ತುತ್ತಾಗಿರುವುದು ಕಂಡುಬಂದಿದೆ. ನಿಯಮಿತವಾಗಿ ಡಯಾಲಿಸಿಸ್ ಮಾಡಲಾಗುತ್ತಿದೆ’ ಎಂದಿದ್ದಾರೆ. ಗುರುವಾರ, ಮಸೂದ್ ಪಾಕಿಸ್ಥಾನದಲ್ಲೇ ಇರುವುದರ ಬಗ್ಗೆ ಮಾಧ್ಯಮಗಳ ಮುಂದೆ ಬಾಯಿಬಿಟ್ಟಿದ್ದ ಖುರೇಷಿ, “ಮಸೂದ್ ಅನಾರೋಗ್ಯಕ್ಕೆ ತುತ್ತಾಗಿ ರುವ ಕಾರಣ, ಮನೆಯಿಂದ ಕದಲಲೂ ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ’ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.