Farmers Protest: ದೆಹಲಿಯತ್ತ ರೈತರ ಮೆರವಣಿಗೆ… ದೆಹಲಿ-ನೋಯ್ಡಾ ಗಡಿಯಲ್ಲಿ ಟ್ರಾಫಿಕ್ ಜಾಮ್
Team Udayavani, Dec 2, 2024, 12:38 PM IST
ನವದೆಹಲಿ: ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕುರಿತು ಚರ್ಚೆಗೆ ಒತ್ತಾಯಿಸಿ ಪಂಜಾಬ್‌ನ ರೈತರು ಈ ವಾರ ದೆಹಲಿಗೆ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಘೋಷಿಸಿದ್ದು ಇದರ ನಡುವೆ ಭಾರತೀಯ ಕಿಸಾನ್ ಪರಿಷತ್ (BKP) ನೇತೃತ್ವದ ರೈತರ ಮೊದಲ ಗುಂಪು ಇಂದು(ಸೋಮವಾರ) ತಮ್ಮ ಮೆರವಣಿಗೆಯನ್ನು ಪ್ರಾರಂಭಿಸುವುದಾಗಿ ಹೇಳಿಕೊಂಡಿದೆ, ಇನ್ನು ಪ್ರತಿಭಟನಾ ಮೆರವಣಿಗೆ ನಡೆಯುವ ಮೊದಲೇ ನೋಯ್ಡಾ – ದೆಹಲಿ ಗಡಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಭಾರತೀಯ ಕಿಸಾನ್ ಪರಿಷತ್ ಸೋಮವಾರ ದೆಹಲಿಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಉದ್ದೇಶಿಸಿದ್ದು ಈ ನಡುವೆ ಪೊಲೀಸರು ರಸ್ತೆಯಲ್ಲಿ ಬ್ಯಾರಿಕೇಡ್ ಇಟ್ಟು ವಾಹನಗಳನ್ನು ಪರಿಶೀಲನೆ ನಡೆಸಿ ಬಿಡುತ್ತಿರುವುದರಿಂದ ಗಡಿಯಲ್ಲಿ ದೊಡ್ಡ ಮಟ್ಟದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಅಲ್ಲದೆ ಟ್ರಾಫಿಕ್ ಜಾಮ್ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ರೈತರ ಪ್ರತಿಭಟನೆ ಹಿನ್ನೆಲೆ ನೊಯ್ಡಾದಿಂದ ದೆಹಲಿಗೆ ಬರುವ ವಾಹನ ಸವಾರರಿಗೆ ಈಗಾಗಲೇ ಪೊಲೀಸರು ಸಲಹೆ ನೀಡಿದ್ದು ವಾಹನ ಸವಾರರು ಅನಗತ್ಯವಾಗಿ ಈ ಮಾರ್ಗದಲ್ಲಿ ಸಂಚರಿಸದಂತೆ ಸಲಹೆ ನೀಡಿದ್ದು ಅಲ್ಲದೆ ವಾಹನಗಳ ಬದಲಿಗೆ ಮೆಟ್ರೋ ರೈಲುಗಳನ್ನು ಬಳಸುವಂತೆ ಸೂಚನೆ ನೀಡಿದ್ದಾರೆ.
ಪ್ರತಿಭಟನಾ ನಿರತ ರೈತರು ಸೋಮವಾರ ಮಧ್ಯಾಹ್ನ ನೋಯ್ಡಾದ ಮಹಾ ಮಾಯಾ ಮೇಲ್ಸೇತುವೆಯಿಂದ ತಮ್ಮ ಮೆರವಣಿಗೆಯನ್ನು ಪ್ರಾರಂಭಿಸಲಿದ್ದಾರೆ ಎಂದು ಹೇಳಲಾಗಿದ್ದು ಇದನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸರು ಬ್ಯಾರಿಕೇಡ್ ಇಟ್ಟು ವಾಹನಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
#Traffic congestion on #Noida Expressway due to farmers protest. pic.twitter.com/DuFlmc1Ols
— Arun Singh (@arun__singh___) December 2, 2024
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ನೇತೃತ್ವದಲ್ಲಿ ಕಳೆದ ಫೆಬ್ರವರಿ 13 ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿ ಬಿಂದುಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು ರೈತರನ್ನು ದೆಹಲಿಗೆ ಪ್ರವೇಶಿಸದಂತೆ ಭದ್ರತಾ ಪಡೆಗಳಿಂದ ನಿರ್ಬಂಧಿಸಲಾಗಿದೆ. ಡಿಸೆಂಬರ್ 6 ರಿಂದ ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಮೆರವಣಿಗೆ ನಡೆಯಲಿದ್ದು, ಹೆಚ್ಚಿನ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
नोएडा: किसानों के दिल्ली कूच ऐलान का असर…नोएडा कालिंदी कुंज बॉर्डर पर भीषण जाम।@noidapolice @Uppolice @noidatraffic @OfficialBKU pic.twitter.com/ass57MOBgV
— Md Raza (@MdRaza_) December 2, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ
Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.