ವೈದ್ಯರು ಸತ್ತಿದೆ ಎಂದಿದ್ದ ಮಗು ಬದುಕಿತ್ತು!
Team Udayavani, Dec 2, 2017, 7:00 AM IST
ಹೊಸದಿಲ್ಲಿ: ಬದುಕಿದ್ದ ಮಗುವೊಂದನ್ನು ಸತ್ತಿದೆ ಎಂದು ಹೇಳುವ ಮೂಲಕ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರು ಬೇಜವಾಬ್ದಾರಿಯಾಗಿ ಕರ್ತವ್ಯ ನಿರ್ವಹಿಸಿರುವ ಘಟನೆ ದಿಲ್ಲಿಯಲ್ಲಿ ನಡೆದಿದೆ.
ದಿಲ್ಲಿಯ ಶಾಲಿಮಾರ್ ಬಾಗ್‌ನಲ್ಲಿರುವ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ಹೆರಿಗೆಯಾಗಿದ್ದ ಮಹಿಳೆಯೊಬ್ಬರಿಗೆ ಅವಳಿಗಳು ಜನಿಸಿದ್ದವು. ಆದರೆ, ಎರಡೂ ಅವಳಿಗಳು ಸಾವನ್ನಪ್ಪಿವೆ ಎಂದಿದ್ದ ವೈದ್ಯರು ಆ ಎರಡೂ ಶಿಶುಗಳ ಕಳೇಬರಗಳನ್ನು ಪ್ಲಾಸಿಕ್ ಚೀಲದಲ್ಲಿ ಹಾಕಿ ಹೆತ್ತವರಿಗೆ ಕೊಟ್ಟಿದ್ದರು. ಕಣ್ಣೀರಿಟ್ಟು ಅಂತ್ಯ ಸಂಸ್ಕಾರಕ್ಕಾಗಿ ಕೊಂಡೊಯ್ಯುವಾಗ, ಪ್ಲಾಸ್ಟಿಕ್ ಚೀಲದಲ್ಲಿದ್ದ ಶಿಶುಗಳಲ್ಲೊಂದು ಬದುಕಿರುವುದು ಗಮನಕ್ಕೆ ಬಂದಿತ್ತು!
ತಕ್ಷಣವೇ, ಹತ್ತಿರದಲ್ಲಿದ್ದ ಆಸ್ಪತ್ರೆಯೊಂದಕ್ಕೆ ಎರಡೂ ಮಕ್ಕಳನ್ನು ಕೊಂಡೊಯ್ದಾಗ ಒಂದು ಮಗು ಜೀವಂತವಾಗಿ ರುವುದನ್ನು ಅಲ್ಲಿನ ವೈದ್ಯರು ಖಚಿತಪಡಿಸಿದ್ದಾರೆ. ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಆಸ್ಪತ್ರೆಯ ಆಡಳಿತ ಮಂಡಳಿ, ಪ್ರಕರಣಕ್ಕೆ ಹೆರಿಗೆ ಮಾಡಿದ ವೈದ್ಯರೇ ಕಾರಣ ಎಂದಿದೆ. ಈ ಕುರಿತು ತನಿಖೆಗೂ ಆದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
MUST WATCH
ಹೊಸ ಸೇರ್ಪಡೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.