“ನಮ್ಮಲ್ಲೂ ಅಳಿಸುವ ಹಕ್ಕಿರಲಿ’

ರಿವೆಂಜ್‌ ಪೋರ್ನ್ ಗೆ ಕಡಿವಾಣ ಹಾಕುವ ಉದ್ದೇಶ

Team Udayavani, Nov 25, 2020, 6:02 AM IST

revange

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಇದೇ ಮೊದಲ ಬಾರಿಗೆ ದೇಶದ ನ್ಯಾಯಾಲಯವೊಂದು ಸಾಮಾಜಿಕ ಜಾಲತಾಣ­ಗಳ ಬಳಕೆದಾರರ “ಉಪೇಕ್ಷೀಸಲ್ಪಡುವ ಹಕ್ಕು’ ಕುರಿತು ಪ್ರಸ್ತಾಪಿಸಿದ್ದು, ದೇಶದಲ್ಲಿ ರಿವೆಂಜ್‌ ಪೋರ್ನ್(ಪ್ರತೀಕಾರ ತೀರಿಸಲು ಅಶ್ಲೀಲ ಚಿತ್ರಗಳನ್ನು ಬಳಸಿ ಹೆಣ್ಣಿನ ಘನತೆಗೆ ಧಕ್ಕೆ ತರುವುದು) ವಿರುದ್ಧ ಹೋರಾಡಬೇಕೆಂದರೆ ಇಂಥದ್ದೊಂದು ಹಕ್ಕಿನ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ.

ಭಗ್ನ ಪ್ರೇಮಿಗಳು ಅಥವಾ ಕಿಡಿಗೇಡಿಗಳು ತಾವು ಹೆಣ್ಣುಮಕ್ಕಳೊಂದಿಗೆ ಸಲುಗೆಯಿಂದಿದ್ದಾಗ ತೆಗೆದಿರುವ ಫೋಟೋ ಅಥವಾ ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡಿ ಪ್ರತೀಕಾರ ತೀರಿಸುವಂಥ ಘಟನೆಗಳು ನಡೆಯುತ್ತಲೇ ಇವೆ. ಇಂಥವುಗಳ ಬಲಿಪಶುಗಳಾದ ಹೆಣ್ಣುಮಕ್ಕಳಿಗೆ ಪರಿಹಾರ ಒದಗಿಸುವಂಥ ಸೂಕ್ತ ಕಾನೂನು ನಮ್ಮಲ್ಲಿಲ್ಲ ಎಂದೂ ಕೋರ್ಟ್‌ ಹೇಳಿದೆ.

ಪ್ರಕರಣವೊಂದಕ್ಕೆ ಸಂಬಂಧಿಸಿ ತೀರ್ಪು ನೀಡುವ ವೇಳೆ ಒರಿಸ್ಸಾ ಹೈಕೋರ್ಟ್‌ನ ನ್ಯಾ| ಎಸ್‌.ಕೆ. ಪಾಣಿಗ್ರಹಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬಹುತೇಕ ಪ್ರಕರಣಗಳಲ್ಲಿ, ಅವರ ಒಪ್ಪಿಗೆಯ ಮೇರೆಗೆ ತೆಗೆದ ಫೋಟೋ­ಗಳು, ವೀಡಿಯೋಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತದೆ. ಇಂಥ ಪ್ರತೀಕಾ ರದ ಕ್ರಮಗಳ ವಿರುದ್ಧ ಕಠಿನ ಕಾನೂನಿನ ಅಗತ್ಯವಿದೆ ಎಂದು ನ್ಯಾ|ಪಾಣಿಗ್ರಹಿ ಹೇಳಿದ್ದಾರೆ.

ಯುರೋಪ್‌ ಮಾದರಿ ಕಾನೂನು
ಯುರೋಪ್‌ನ ಡಿಜಿಟಲ್‌ ಖಾಸಗಿತನ ಕಾನೂನಿನಲ್ಲಿ “ಉಪೇಕ್ಷಿಸಲ್ಪಡುವ ಹಕ್ಕು’ ಬಗ್ಗೆ ಉಲ್ಲೇಖವಿದೆ. ಇದು ಮಹಿಳೆಯರಿಗೆ ತಮ್ಮ ಕುರಿತಾದ ಖಾಸಗಿ ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಿಂದ ಅಳಿಸಿ ಹಾಕುವ ಹಕ್ಕು. ಒಂದು ಬಾರಿ ಜಾಲತಾಣ­ಗಳಲ್ಲಿ ವೀಡಿಯೋ ಅಪ್‌ಲೋಡ್‌ ಆದರೆ, ಕೂಡಲೇ ಅದು ಲಕ್ಷಾಂತರ ಮಂದಿಯ ಮೊಬೈಲ್‌ಗ‌ಳಲ್ಲಿ ಹರಿದಾಡತೊಡಗು­ತ್ತವೆ.

ಫೇಸ್‌ಬುಕ್‌ ಸರ್ವರ್‌ಗಳಿಂದ ಅಂಥ ವೀಡಿಯೋ ಅಳಿಸಿ­ಹಾಕುವುದು ಹೇಗೆ, ಅದಕ್ಕೆ ಯಾರನ್ನು ಸಂಪರ್ಕಿ­ಸಬೇಕು ಎಂಬುದು ಸಂತ್ರಸ್ತರಿಗೂ ಗೊತ್ತಿರುವುದಿಲ್ಲ. ಹೀಗಾಗಿ, ಅದನ್ನು ಅಳಿಸಿಹಾಕುವ ನಿಟ್ಟಿನಲ್ಲಿ ಭಾರತದಲ್ಲಿ ಕಾನೂನು ಜಾರಿಯಾಗುವುದು ಅಗತ್ಯ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಟಾಪ್ ನ್ಯೂಸ್

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

1-qeqeqe

HMPV ಸೋಂಕಿಗೆ ಆತಂಕ ಬೇಡ: ಐಸಿಎಂಆರ್‌

1-kumb

Mahakumbh 2025; ವಕ್ಫ್ ಮಂಡಳಿಗೆ ಸೇರಿದ ಜಾಗದಲ್ಲಿ ಕುಂಭಮೇಳ: ಮೌಲ್ವಿ ವಿವಾದ

mob

ಆಸೀಸ್‌ ರೀತಿ ಸಾಮಾಜಿಕ ಜಾಲತಾಣ ಬಳಕೆ ಬ್ಯಾನ್‌ ಮಾಡಿಲ್ಲ: ಐಟಿ ಕಾರ್ಯದರ್ಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.