ಯುಪಿಯಲ್ಲಿ ಬಿಜೆಪಿ ಜಯಕ್ಕೆ ಇವಿಎಂನಲ್ಲಿನ ಗೋಲ್ ಮಾಲ್ ಕಾರಣ! ಮಾಯಾವತಿ
Team Udayavani, Mar 11, 2017, 2:55 PM IST
ಲಕ್ನೋ: ಉತ್ತರಪ್ರದೇಶ ಚುನಾವಣೆಯಲ್ಲಿ ಇವಿಎಂ(ವಿದ್ಯುನ್ಮಾನ ಮತಯಂತ್ರ) ದೋಷದಿಂದಾಗಿ ಭಾರೀ ಗೋಲ್ ಮಾಲ್ ನಡೆದಿದೆ. ಹಾಗಾಗಿ ಯುಪಿ ಫಲಿತಾಂಶವನ್ನು ತಡೆಹಿಡಿಯಬೇಕು ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಆಗ್ರಹಿಸಿದ್ದಾರೆ.
ಉತ್ತರಪ್ರದೇಶದಲ್ಲಿ ಮುಸ್ಲಿಂ ಪ್ರಾಬಲ್ಯ ಇರುವ ಕ್ಷೇತ್ರಗಳಲ್ಲಿಯೂ ಬಿಜೆಪಿ ಜಯಭೇರಿಗಳಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿರುವ ಮಾಯಾವತಿ, ಚುನಾವಣಾ ಫಲಿತಾಂಶ ಆಘಾತ ತಂದಿರುವುದಾಗಿ ಹೇಳಿದರು.
ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಶನಿವಾರ ಲಕ್ನೋದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮಾಯಾವತಿ, ಚುನಾವಣಾ ಆಯೋಗದ ಇವಿಎಂ(ವಿದ್ಯುನ್ಮಾನ ಮತಯಂತ್ರ)ನಲ್ಲಿ ಮೋಸ ಮಾಡಲಾಗಿದೆ ಎಂದು ದೂರಿದರು. ಇವಿಎಂ ನಲ್ಲಿ ಬೇರೆ ಪಕ್ಷಕ್ಕೆ ಮತ ಚಲಾಯಿಸಿದರೂ ಕೂಡಾ ಅದು ಬಿಜೆಪಿಗೆ ಹೋಗಿದ್ದು, ಇದರಿಂದಾಗಿ ಬಿಜೆಪಿಗೆ ಜಯ ಸಿಕ್ಕಿದೆ ಎಂದರು.
ಭಾರತೀಯ ಜನತಾ ಪಕ್ಷ ಪ್ರಜಾಪ್ರಭುತ್ವವನ್ನು ಕೊಲೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಯಾವತಿ, ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲು ಚುನಾವಣಾ ಆಯೋಗವೇ ಕಾರಣ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಬಂಧನ
Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್ ರದ್ದು: ಸುಪ್ರೀಂ ಕೋರ್ಟ್
ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್ ಸರಕಾರ; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ
Kalpeni Island: ಲಕ್ಷದ್ವೀಪದಲ್ಲಿ ಯುರೋಪ್‌ನ ಯುದ್ಧ ನೌಕೆ ಅವಶೇಷ ಪತ್ತೆ!
Aizawl: ಮಿಜೋರಾಂನಲ್ಲಿ ದೇಶದ ಮೊದಲ ಬೀಟಾ ತಲೆಮಾರಿನ ಮಗು ಜನನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.