ಮೋದಿ ಸೋಲಿಸಲು ನಾವೇ ಸಾಕು ; ‘ಕೈ’ ಜೊತೆ ಮೈತ್ರಿಯಿಲ್ಲ: ಮಾಯಾವತಿ
Team Udayavani, Mar 12, 2019, 12:14 PM IST
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗಳಿಗಾಗಿ ಉತ್ತರಪ್ರದೇಶದಲ್ಲಿ ತನ್ನ ಬದ್ಧ ರಾಜಕೀಯ ಎದುರಾಳಿ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಹುಜನ ಸಮಾಜ ಪಕ್ಷದ ಅಧಿನಾಯಕಿ ಮಾಯಾವತಿ ಅವರು ಮೋದಿ ನೇತೃತ್ವದ ಎನ್.ಡಿ.ಎ.ಯನ್ನು ಕೇಂದ್ರದಲ್ಲಿ ಪದಚ್ಯುತಗೊಳಿಸಲು ನಮ್ಮ ನಡುವಿನ ಮೈತ್ರಿಯೇ ಸಾಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮತ್ತು ಉತ್ತರಪ್ರದೇಶ ಸೇರಿದಂತೆ ಬೇರಿನ್ಯಾವುದೇ ರಾಜ್ಯದಲ್ಲಿ ಬಿ.ಎಸ್.ಪಿ.ಯು ಕಾಂಗ್ರೆಸ್ ಪಕ್ಷದ ಜೊತೆ ಚುನಾವಣಾ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ನೇತೃತ್ವದಲ್ಲಿ ರೂಪುಗೊಂಡಿರುವ ‘ಮಹಾ ಮೈತ್ರಿ’ಗೆ ಮಾಯಾ ಸಮ್ಮತಿ ಇಲ್ಲವೆಂಬುದು ಮತ್ತೂಮ್ಮೆ ಸ್ಪಷ್ಟವಾಗಿದೆ.
‘ಬಿ.ಎಸ್.ಪಿ. ಮತ್ತು ಎಸ್.ಪಿ. ನಡುವೆ ‘ಪರಸ್ಪರ ಗೌರವ’ ಮತ್ತು ‘ಪ್ರಾಮಾಣಿಕ ಉದ್ದೇಶ’ದಿಂದ ಕೂಡಿದ ಮೈತ್ರಿ ಏರ್ಪಟ್ಟಿದೆ. ಹಾಗಾಗಿ ಉತ್ತರಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷವನ್ನು ಸೋಲಿಸಲು ಈ ನಮ್ಮ ಮೈತ್ರಿಯೇ ಸಾಕು’ ಎಂಬುದು ಮಾಯಾವತಿಯವರ ಆತ್ಮವಿಶ್ವಾಸದ ನುಡಿ. ಉತ್ತರಪ್ರದೇಶ ಹೊರತುಪಡಿಸಿ ಇನ್ನುಳಿದ ರಾಜ್ಯಗಳ ಬಿ.ಎಸ್.ಪಿ. ನಾಯಕರನ್ನುದ್ದೇಶಿಸಿ ಮಾಯಾವತಿಯವರು ಮಾತನಾಡುತ್ತಾ ಈ ಮೈತ್ರಿ ವಿಚಾರವನ್ನು ಸ್ಪಷ್ಟಪಡಿಸಿದರು. ದೇಶದ ವಿವಿಧ ರಾಜ್ಯಗಳಲ್ಲಿ ಹಲವಾರು ಪಕ್ಷಗಳು ಬಿ.ಎಸ್.ಪಿ.ಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಉತ್ಸುಕವಾಗಿವೆ ಆದರೆ ನಮ್ಮ ಪಕ್ಷವು ಚುನಾವಣಾ ಲಾಭಕ್ಕಾಗಿ ಸಿದ್ಧಾಂತಗಳನ್ನು ಬಲಿಕೊಡಲು ಸಿದ್ಧವಿಲ್ಲ ಎಂಬುದನ್ನು ಮಾಯಾವತಿಯವರು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.