ಎಂಬಿಬಿಎಸ್‌ ನೆಕ್ಸ್ಟ್ ಗೆ ಕರ್ನಾಟಕ ಸಹಿತ 9 ರಾಜ್ಯಗಳ ವಿರೋಧ


Team Udayavani, Apr 17, 2017, 9:57 AM IST

17-BIG-6.jpg

ಹೊಸದಿಲ್ಲಿ: ಎಂಬಿಬಿಎಸ್‌ ಕೋರ್ಸ್‌ ಮುಗಿಸಿದ ಅನಂತರ “ಡಾಕ್ಟರ್‌’ ಸ್ಥಾನಮಾನ ಪಡೆ ಯಲು ರಾಷ್ಟ್ರೀಯ ನಿರ್ಗಮನ ಪರೀಕ್ಷೆ (ನೆಕ್ಸ್ಟ್ )ಯಲ್ಲಿ ಉತ್ತೀರ್ಣಗೊಳ್ಳುವುದನ್ನು ಕಡ್ಡಾಯಗೊಳಿ ಸುವ ಕೇಂದ್ರ ಸರಕಾರದ ಪ್ರಸ್ತಾವಕ್ಕೆ ಕರ್ನಾಟಕ ಸಹಿತ ಹಲವು ರಾಜ್ಯಗಳು ವಿರೋಧ ವ್ಯಕ್ತಪಡಿಸಿವೆ.

ಮಾಹಿತಿ ಹಕ್ಕು ಕಾಯ್ದೆಯಡಿ ಕೋರಿರುವ ಪ್ರಶ್ನೆ ಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಉತ್ತರದಿಂದ ಈ ಮಾಹಿತಿ ಸಿಕ್ಕಿದೆ. ಝಾರ್ಖಂಡ್‌, ಮಹಾರಾಷ್ಟ್ರ, ಬಿಹಾರ, ಕೇರಳ ಸಹಿತ 12 ರಾಜ್ಯಗಳು ಹಾಗೂ 4 ಕೇಂದ್ರಾಡಳಿತ ಪ್ರದೇಶಗಳು ಈ ಪ್ರಸ್ತಾವ ವನ್ನು ಬೆಂಬಲಿಸಿವೆ. ಆದರೆ, ಕರ್ನಾಟಕ, ಆಂಧ್ರ, ಗೋವಾ ಸಹಿತ 9 ರಾಜ್ಯಗಳು ಪರೀಕ್ಷೆಯನ್ನು ವಿರೋಧಿಸಿವೆ ಎಂದು ಸಚಿವಾಲಯ ತಿಳಿಸಿದೆ.

ಏನಿದು ನೆಕ್ಸ್ಟ್?: ಈ ವರೆಗೆ ಐದೂವರೆ ವರ್ಷಗಳ ಎಂಬಿಬಿಎಸ್‌ ಕೋರ್ಸ್‌ ಪೂರ್ಣಗೊಳಿಸಿದರೆ ಆತ “ಡಾಕ್ಟರ್‌’ ಆಗುತ್ತಿದ್ದ. ಆದರೆ ಕೇಂದ್ರ ಆರೋಗ್ಯ ಸಚಿವಾಲಯವು 2016ರ ಡಿ.29ರಂದು ಸಿದ್ಧಪಡಿಸಿರುವ ಭಾರತೀಯ ವೈದ್ಯಕೀಯ ಮಂಡಳಿ (ತಿದ್ದುಪಡಿ) ಮಸೂದೆ 2016ರ ಕರಡು ಹೇಳುವಂತೆ, ವಿದ್ಯಾರ್ಥಿಗಳು ಎಂಬಿಬಿಎಸ್‌ ಮುಗಿಸಿದ ಅನಂತರ, ವೈದ್ಯನಾಗಬೇಕೆಂದರೆ ನ್ಯಾಷನಲ್‌ ಎಕ್ಸಿಟ್‌ ಟೆಸ್ಟ್‌ (ನೆಕ್ಸ್ಟ್ ) ಎಂಬ ಪರೀಕ್ಷೆ ಬರೆದು ಅದರಲ್ಲಿ ಉತ್ತೀರ್ಣರಾಗಬೇಕು.

ಪರೀಕ್ಷೆ ಬರೆಯಬೇಕಾದ್ದು ಯಾರು?
ಕೇವಲ ಸರಕಾರಿ ಮಾತ್ರವಲ್ಲ ಖಾಸಗಿ ಕಾಲೇಜುಗಳಲ್ಲಿ ಎಂಬಿಬಿಎಸ್‌ ಮುಗಿಸಿದವರೂ  ಈ  ಪರೀಕ್ಷೆ  ಬರೆಯಬೇಕು. ಈ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳ ಆಧಾರದಲ್ಲಿ ಆಯಾ ವೈದ್ಯಕೀಯ ಕಾಲೇಜುಗಳಿಗೆ ದರ್ಜೆಗಳನ್ನು ನೀಡಲಾಗುತ್ತದೆ. ಪ್ರತಿ ಕಾಲೇಜು ವಿದ್ಯಾರ್ಥಿಗಳ ಫ‌ಲಿತಾಂಶವನ್ನೂ ಬಹಿರಂಗಗೊಳಿಸಲಾಗುತ್ತದೆ.

ಕೋಟಾ ಮಾಹಿತಿ
ಎಲ್ಲ ಸರಕಾರಿ ವೈದ್ಯ ಕಾಲೇಜುಗಳಲ್ಲಿ ಶೇ.50ರಷ್ಟು ಸೀಟುಗಳನ್ನು ಸರಕಾರ/ ಕೇಂದ್ರಾಡಳಿತ ಪ್ರದೇಶಗಳ ವೈದ್ಯಕೀಯ ಅಧಿಕಾರಿಗಳಿಗೆ ಮೀಸಲಿಡಬೇಕು. ಯಾವ ಅಧಿಕಾರಿಯು ಕುಗ್ರಾಮ ಅಥವಾ ಕಷ್ಟಕರ ಪ್ರದೇಶದಲ್ಲಿ ಸೇವೆ ಸಲ್ಲಿಸಿದ್ದಾರೋ ಅವರಷ್ಟೇ ಕೋಟಾ ಪಡೆಯಲು ಅರ್ಹರಾಗಿರುತ್ತಾರೆ ಎನ್ನುತ್ತದೆ ಮಸೂದೆ.

ವಿರೋಧಿಸುವವರ ವಾದವೇನು?
ಭಾರತದಲ್ಲಿ ಎಂಬಿಬಿಎಸ್‌ ಎನ್ನುವುದೇ ಅತೀ ಕಷ್ಟದ ಕೋರ್ಸ್‌. ಪರೀಕ್ಷೆಗಳಂತೂ ಕಬ್ಬಿಣದ ಕಡಲೆ. ಪ್ರತಿಭಾ ವಂತರಷ್ಟೇ ಪಾಸಾಗಿ ಈ ಕೋರ್ಸ್‌ಗೆ ಸೇರುತ್ತಾರೆ. ಹೀಗಿರುವಾಗ ಮತ್ತೂಮ್ಮೆ ಅವರನ್ನು ಪರೀಕ್ಷೆಗೊಳ ಪಡಿಸಬೇಕು ಎನ್ನುವ ವಾದ ಸರಿಯಲ್ಲ.
ಇದು ವೈದ್ಯಕೀಯವಾಗಿ ಪದವೀಧರನಾದ ವ್ಯಕ್ತಿಗೆ ವೈದ್ಯನಾಗಿ ಕೆಲಸ ಮಾಡಲು ಅವಕಾಶ ನಿರಾಕರಿಸಿದಂತೆ ಹಾಗೂ ದೌರ್ಜನ್ಯ ಎಸಗಿದಂತೆ. ಈ ಪರೀಕ್ಷೆಯು ಭಾರತದಲ್ಲಿ ಎಂಬಿಬಿಎಸ್‌ ಪದವೀಧರರ ಸಂಖ್ಯೆಯನ್ನು ಇನ್ನಷ್ಟು  ಕಡಿಮೆ ಮಾಡುತ್ತದೆ.

ನೆಕ್ಸ್ಟ್ ಜಾರಿಯಾದರೆ, ಭಾರತದಲ್ಲಿ ಅಥವಾ ವಿದೇಶಗಳಲ್ಲಿ  ಪಡೆಯುವ ವೈದ್ಯ ಪದವಿಗೆ ಅಂಥ ವ್ಯತ್ಯಾಸ ವೇನೂ ಇರುವುದಿಲ್ಲ. ಹಾಗಾಗಿ ಹೆಚ್ಚಿನವರು ವಿದೇಶ ವನ್ನೇ ಆಯ್ಕೆ ಮಾಡಿಕೊಳ್ಳಬಹುದು.

ನೆಕ್ಸ್ಟ್ನಲ್ಲಿ ಪಾಸಾಗದವರು ನಿರುದ್ಯೋಗಿಗಳಾಗುತ್ತಾರೆ. ಖಾಸಗಿ ಆಸ್ಪತ್ರೆಗಳು ಅವರನ್ನು ಕಡಿಮೆ ವೇತನ ಕೊಟ್ಟು  ತಾರತಮ್ಯ ಮಾಡುವ ಸಾಧ್ಯತೆಯಿರುತ್ತದೆ.

ರಾಷ್ಟ್ರೀಯ ನಿರ್ಗಮನ ಪರೀಕ್ಷೆಯನ್ನು  ಕರ್ನಾಟಕ ವಿರೋಧಿಸಿದೆ ಎಂಬ ಬಗ್ಗೆ  ಹೆಚ್ಚಿನ ಮಾಹಿತಿ ಇಲ್ಲ. ಕೇಂದ್ರ ಜಾರಿಗೊಳಿಸಿದರೆ ಅದಕ್ಕೆ ವಿರೋಧ ವ್ಯಕ್ತಪಡಿಸುವ ಪ್ರಶ್ನೆ ಉದ್ಭವಿಸಲ್ಲ.
ಡಾ| ಶರಣಪ್ರಕಾಶ್‌ ಪಾಟೀಲ್‌, ವೈದ್ಯಕೀಯ ಶಿಕ್ಷಣ ಸಚಿವ

ಟಾಪ್ ನ್ಯೂಸ್

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.