Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
ಐಸಿಸಿ ಮಹತ್ವದ ಸಭೆ ನಾಳೆಗೆ ಮುಂದೂಡಿಕೆ..: ಪರಿಹಾರ ಕಂಡುಕೊಳ್ಳಲು ಸಾಧ್ಯವೇ?
Team Udayavani, Nov 29, 2024, 5:56 PM IST
ಹೊಸದಿಲ್ಲಿ: ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲು ಮುಂದಿನ ವರ್ಷ ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ ಎಂದು ಶುಕ್ರವಾರ(ನ29)ವಿದೇಶಾಂಗ ಇಲಾಖೆ ಧೃಡಪಡಿಸಿದೆ.
ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ್ ಜೈಸ್ವಾಲ್, “ಭಾರತೀಯ ಕ್ರಿಕೆಟ್ ತಂಡದ ಬಗ್ಗೆ… ಬಿಸಿಸಿಐ ಹೇಳಿಕೆ ನೀಡಿದೆ… ಅಲ್ಲಿ ಭದ್ರತಾ ಕಾಳಜಿಗಳಿವೆ ಎಂದು ಅವರು ಹೇಳಿದ್ದಾರೆ. ಆದ್ದರಿಂದ ನಮ್ಮ ತಂಡವು ಅಲ್ಲಿಗೆ ಹೋಗುವುದು ಅಸಂಭವವಾಗಿದೆ” ಎಂದು ಹೇಳಿದ್ದಾರೆ.
ಭಾರತೀಯ ಕ್ರಿಕೆಟ್ ತಂಡಕ್ಕೆ ಸಂಬಂಧಿಸಿದಂತೆ ಬಿಸಿಸಿಐ ನಿಲುವು ಪಾಕಿಸ್ಥಾನಕ್ಕೆ ಸಂಬಂಧಿಸಿದಂತೆ ಭಾರತದ ವಿದೇಶಾಂಗ ನೀತಿಯೊಂದಿಗೆ ಹೊಂದಿಕೆಯಾಗುತ್ತದೆ, ಭಯೋತ್ಪಾದನೆ ಮತ್ತು ಕ್ರೀಡೆಗಳು ಜತೆಯಾಗಿ ಹೋಗುವುದಿಲ್ಲ” ಎಂದು ಪುನರುಚ್ಚರಿಸಿದ್ದಾರೆ.
ಸಭೆ ನಾಳೆಗೆ ಮುಂದೂಡಿಕೆ
ಎಲ್ಲಾ ಕಡೆಯಿಂದ ಸಲಹೆಗಳು ಮತ್ತು ಚರ್ಚೆಗಳ ನಂತರ ಚಾಂಪಿಯನ್ಸ್ ಟ್ರೋಫಿಯ ಕುರಿತಾಗಿನ ಐಸಿಸಿ ಮಹತ್ವದ ಸಭೆಯನ್ನು ನಾಳೆಗೆ (ನವೆಂಬರ್ 30ಕ್ಕೆ) ಮುಂದೂಡಲಾಗಿದೆ. ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ವೈಯಕ್ತಿಕವಾಗಿ ನಾಳಿನ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.
ಎಲ್ಲಾ ಸದಸ್ಯ ರಾಷ್ಟ್ರಗಳು ಸಭೆಯಲ್ಲಿರಲಿದ್ದು, ಐಸಿಸಿ ಪ್ರಮುಖ ಟೂರ್ನಿ ಎದುರಾಗಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ
Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ
Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್ ನಿಲ್ದಾಣವೇ ಇಲ್ಲ !
”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್
Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.