ರಜೆಯಲ್ಲೂ ಬಿಸಿಯೂಟ
Team Udayavani, Oct 28, 2017, 6:05 AM IST
ನವದೆಹಲಿ: ಬರಪೀಡಿತ ಪ್ರದೇಶಗಳಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ರಜಾ ದಿನಗಳಲ್ಲೂ ಶಾಲೆಗಳಲ್ಲಿ ಬಿಸಿಯೂಟ ವ್ಯವಸ್ಥೆ ಕಲ್ಪಿಸಿದ್ದ ಕರ್ನಾಟಕ ಸರ್ಕಾರದ ಮಾದರಿಯಲ್ಲೇ ದೇಶಾದ್ಯಂತ ಎಲ್ಲ ಶಾಲೆಗಳಲ್ಲೂ ರಜಾದಿನಗಳಲ್ಲೂ ಬಿಸಿಯೂಟ ಒದಗಿಸುವ ಕುರಿತು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಚಿಂತನೆ ನಡೆಸಿದೆ.
ಇತ್ತೀಚೆಗೆ ಜಾರ್ಖಂಡದಲ್ಲಿ ಶಾಲೆ ರಜೆ ಇದ್ದುದರಿಂದ ಬಿಸಿಯೂಟ ಲಭ್ಯವಾಗದೇ 11 ವರ್ಷದ ಮಗು ಸಾವನ್ನಪ್ಪಿತ್ತು. ಇದು ತೀವ್ರ ಸಂಚಲನ ಮೂಡಿಸಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಚಿಂತನೆ ನಡೆಸಿದೆ. ರಜಾದಿನಗಳಲ್ಲೂ ಯಾಕೆ ನಾವು ಕಡುಬಡ ಕುಟುಂಬದ ಮಕ್ಕಳಿಗಾಗಿ ಮಧ್ಯಾಹ್ನದ ಬಿಸಿಯೂಟವನ್ನು ಒದಗಿಸಬಾ ರದು ಎಂದು ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ 2013 ಕ್ಕೆ ಸಂಬಂಧಿಸಿದಂತೆ ನವದೆಹಲಿ ಯಲ್ಲಿ ನಡೆದ ಸಮ್ಮೇಳನದಲ್ಲಿ ಶಾಲಾ ಶಿಕ್ಷಣ ಇಲಾಖೆಯ ವಿಶೇಷ ಕಾರ್ಯದರ್ಶಿ ರೀನಾ ರೇ ಪ್ರಶ್ನಿಸಿದ್ದಾರೆ. ಆದರೆ, ಹೆಚ್ಚುವರಿ ಬಿಸಿಯೂಟ ನೀಡುವುದರಿಂದ ಭಾರಿ ಹಣಕಾಸು ಹೊರೆಯೂ ಉಂಟಾಗುತ್ತದೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ.
ಸದ್ಯ 1 ರಿಂದ 8ನೇ ತರಗತಿಯವರೆಗೆ ದೇಶಾದ್ಯಂತ ಎಲ್ಲ ಮಕ್ಕಳಿಗೂ ಮಧ್ಯಾಹ್ನದ ಊಟ ಒದಗಿಸಲಾಗುತ್ತಿದೆ. ಈ ಕಾರ್ಯಕ್ರಮವನ್ನು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಶಾಲಾ ಶಿಕ್ಷಣ ಇಲಾಖೆ ನಿರ್ವಹಿಸುತ್ತದೆ. ಇತ್ತೀಚೆಗೆ ಜಾರ್ಖಂಡದಲ್ಲಿ 11 ವರ್ಷದ ಬಾಲಕಿ ಸಾವನ್ನಪ್ಪಿದಾಗ, ಆಧಾರ್ ಕಾರ್ಡ್ ಲಿಂಕ್ ಮಾಡಿಲ್ಲದ್ದರಿಂದ ಪಡಿತರ ಸಿಗದೇ ಮಗು ಸಾವನ್ನಪ್ಪಿದೆ ಎಂದು ತಾಯಿ ಆರೋಪಿಸಿದ್ದಳು. ಆದರೆ ವಾಸ್ತವವಾಗಿ ಶಾಲೆ ಆ ದಿನಗಳಲ್ಲಿ ರಜೆ ಇದ್ದುದರಿಂದ, ಮಗುವಿಗೆ ಮಧ್ಯಾಹ್ನದ ಊಟ ಲಭ್ಯವಾಗಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ
Mine Tragedy: ಇಂದು ಮತ್ತೆ ಮೂರು ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ
Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ
Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Podcast: ಗಾಂಧೀಜಿ ಎಂದೂ ಟೋಪಿ ಧರಿಸುತ್ತಿರಲಿಲ್ಲ, ಆದರೆ ದೇಶದಲ್ಲಿ “ಗಾಂಧಿ ಟೋಪಿ’ ಜನಜನಿತ!
ಅಂದು ಪ್ರತಾಪ್ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?
New York Time ಟ್ರಾವೆಲ್ 2025 ಲಿಸ್ಟ್; 52 ಸ್ಥಳಗಳ ಪಟ್ಟಿಯಲ್ಲಿ ಅಸ್ಸಾಂಗೆ ನಾಲ್ಕನೇ ಸ್ಥಾನ
Allu Arjun; ಜಾಮೀನು ಷರತ್ತು ಸಡಿಲಿಕೆ: ವಿದೇಶ ಪ್ರಯಾಣಕ್ಕೆ ಕೋರ್ಟ್ ಅನುಮತಿ
VijayHazareTrophy: ಪಡಿಕ್ಕಲ್ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.