GST;ನವೆಂಬರ್‌ನಿಂದ ಔಷಧ, ಆರೋಗ್ಯ ವಿಮೆ ಅಗ್ಗ?
Team Udayavani, Oct 4, 2024, 7:20 AM IST
ಹೊಸದಿಲ್ಲಿ: ಔಷಧ, ಆರೋಗ್ಯ ವಿಮೆ ಸೇರಿೆ ಜನಸಾಮಾನ್ಯರು ಬಳಕೆ ಮಾಡು ತ್ತಿರುವ ಪ್ರಮುಖ ಸರಕು- ಸೇವೆಗಳ ಮೇಲಿನ ಬೆಲೆಗಳು ಶೇ.5 ಇಳಿಕೆ ಯಾಗುವ ಸಾಧ್ಯತೆಗಳಿವೆ. ಸರಕು- ಸೇವೆಗಳ ಮೇಲೆ ವಿಧಿಸಲಾಗಿರುವ ಜಿಎಸ್‌ಟಿಯನ್ನು ಪ್ರಮಾಣ ಪರಿಶೀಲಿ ಸುವ ನಿಟ್ಟಿನಲ್ಲಿ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ ನೇತೃತ್ವದ ಸಚಿವರ ಸಮಿತಿ ಬಗ್ಗೆ ಪರಿಶೀಲಿಸುತ್ತಿದೆ ಎಂದು ತಿಳಿದು ಬಂದಿದೆ.
ಆರೋಗ್ಯ ವಿಮೆ ಮೇಲಿನ ಜಿಎಸ್‌ಟಿಯನ್ನು ಶೇ.18ರಿಂದ ಶೇ.12ಕ್ಕೆ ಇಳಿಕೆ ಮಾಡುವ ಸಾಧ್ಯತೆ ಇದೆ. Term insurance ಗೆ ಶೇ.5ರಷ್ಟು ಜೆಎಸ್‌ಟಿ ವಿಧಿಸಲಾಗುತ್ತದೆ ಎನ್ನಲಾಗಿದೆ. ಟ್ರ್ಯಾಕ್ಟರ್‌ಗಳಿಗೆ ಅವುಗಳ ಸಾಮರ್ಥ್ಯ ಕ್ಕನುಗುಣವಾಗಿ ಶೇ.12 ಅಥವಾ ಶೇ.18ರಷ್ಟು ಜಿಎಸ್‌ಟಿ ವಿಧಿಸಲಾ ಗುತ್ತಿದೆ. ಸಿಗರೆಟ್ ಮತ್ತು ತಂಬಾಕು ಉತ್ಪನ್ನಗಳ ಮೇಲಿನ ಜಿಎಸ್‌ಟಿ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಈ ಬಗ್ಗೆ ಅ.19ರಂದು ಸಚಿವರ ಸಮಿತಿ ಸಭೆ ನಡೆಸಲಿದ್ದು, ಆ ಸಂದರ್ಭದಲ್ಲಿ ತೆರಿಗೆ ಪ್ರಮಾಣ ಇಳಿಕೆ ಮಾಡುವ ಬಗ್ಗೆ ತೀರ್ಮಾನ ಮಾಡುವ ಸಾಧ್ಯತೆಗಳು ಇವೆ ಎಂದು ಹೇಳಲಾಗಿದೆ. ಔಷಧ ಹಾಗೂ ಆರೋಗ್ಯ ವಿಮೆ ಜಿಎಸ್‌ಟಿ ತಗ್ಗಿಸಲು ಒತ್ತಾಯ ಕೇಳಿ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.