ರಾಹುಲ್ ದ್ವೇಷದ ದಲ್ಲಾಳಿ: ಸಚಿವ ಗೋಯಲ್, ಇರಾನಿ ಟೀಕಾಸ್ತ್ರ
Team Udayavani, Jul 23, 2018, 3:42 PM IST
ಹೊಸದಿಲ್ಲಿ : ರಾಜಸ್ಥಾನದ ಅಳವಾರ್‌ನಲ್ಲಿ ಈಚೆಗೆ ಗೋ ಕಳ್ಳಸಾಗಣೆಗಾರನೆಂಬ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಚಚ್ಚಿ ಕೊಲ್ಲಲಾದ ಪ್ರಕರಣಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಇನ್ನಿಲ್ಲದ ರೀತಿಯಲ್ಲಿ ವಾಕ್ಸಮರ ನಡೆಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು “ದ್ವೇಷದ ದಲ್ಲಾಳಿ’ ಎಂದು ಕರೆದಿದ್ದಾರೆ.
‘ರಾಜಸ್ಥಾನ ಸರಕಾರ ಗುಂಪು ಹಿಂಸೆಯ ತಪ್ಪುಗಾರರಿಗೆ ಕಠಿನ ಶಿಕ್ಷೆ ನೀಡುವುದಾಗಿ ಹೇಳಿ ಈಗಾಗಲೇ ಚುರುಕಿನ ತನಿಖೆಯನ್ನು ನಡೆಸುತ್ತಿದೆ. ಹಾಗಿದ್ದರೂ ರಾಹುಲ್ ಗಾಂಧಿ ಅವರು ಮೊಸಳೆ ಕಣ್ಣೀರು ಸುರಿಸಿ ಚುನಾವಣಾ ಲಾಭಕ್ಕಾಗಿ ಸಮಾಜವನ್ನು ಒಡೆಯಲು ಯತ್ನಿಸುತ್ತಿದ್ದಾರೆ’ ಎಂದು ಗೋಯಲ್ ಅವರು ಟ್ವಿಟರ್‌ನಲ್ಲಿ ಕಿಡಿಕಾರಿದ್ದಾರೆ.
ಇದೇ ವೇಳೆ ಕೇಂದ್ರ ಸಚಿವೆಯಾಗಿರುವ ಬಿಜೆಪಿ ನಾಯಕಿ ಸ್ಮತಿ ಇರಾನಿ ಅವರು ಕೂಡ ತಮ್ಮ ಟ್ವಿಟರ್ ಖಾತೆಯಲ್ಲಿ “ರಾಹುಲ್ ಗಾಂಧಿ ಅವರು ರಾಜಕೀಯ ಲಾಭಕ್ಕಾಗಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.
“1984ರ ಸಿಕ್ಖ ವಿರೋಧಿ ಹಿಂಸೆಯಲ್ಲಿ ರಾಹುಲ್ ಗಾಂಧಿ ಕುಟುಂಬ ಆ ಘೋರ ಪ್ರಕರಣದ ನೇತೃತ್ವವನ್ನೇ ವಹಿಸಿತ್ತು. ಮಾತ್ರವಲ್ಲದೆ ಭಾಗಲ್ಪುರ ಮತ್ತು ನೆಲ್ಲೀ ಹಾಗೂ ಆ ಬಗೆಯ ಇತರ ಪ್ರಕರಣಗಳಲ್ಲಿ ಕೂಡ ಕಾಂಗ್ರೆಸ್ ಪಕ್ಷ ಹಿಂಸೆಯ ರೂವಾರಿಯಾಗಿತ್ತು. ರಾಹುಲ್ ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಸಮಾಜವನ್ನು ಒಡೆಯುವ ಒಂದೇ ಒಂದು ಅವಕಾಶವನ್ನು ಕೂಡ ಬಿಟ್ಟುಕೊಡುತ್ತಿಲ್ಲ’ ಎಂದು ಇರಾನಿ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.