ಕೆಲವು ದಿನ ಒಟ್ಟಿಗಿದ್ದರೆ ಅದು ಲಿವ್ ಇನ್ ರಿಲೇಶನ್‌ಶಿಪ್ ಅಲ್ಲ: ಹೈಕೋರ್ಟ್
Team Udayavani, Dec 17, 2021, 7:40 AM IST
ಚಂಡೀಗಢ: ಕೆಲವು ದಿನಗಳ ಕಾಲ ಒಟ್ಟಿಗೆ ಬದುಕಿದಾಕ್ಷಣ ಅದನ್ನು ಲಿವ್-ಇನ್-ರಿಲೇಶನ್‌ಶಿಪ್ ಎಂದು ವಾದಿಸಲಾಗುವುದಿಲ್ಲ ಎಂದು ಪಂಜಾಬ್ ಮತ್ತು ಹರಿಯಾಣ ಹೈ ಕೋರ್ಟ್ ಅಭಿಪ್ರಾಯಪಟ್ಟಿದೆ.
20 ವರ್ಷದ ಯುವಕ ಮತ್ತು 18 ವರ್ಷದ ಯುವತಿ, ಮನೆಯವರಿಂದ ರಕ್ಷಣೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿರುವ ನ್ಯಾಯಾಲಯ, ಅರ್ಜಿ ತಿರಸ್ಕರಿಸಿದ್ದು, ಅವರಿಗೆ 25 ಸಾವಿರ ರೂ. ದಂಡ ವಿಧಿಸಿದೆ.
ದೀರ್ಘ ಕಾಲಾವಧಿಯಲ್ಲಿ ಯುವಕ ಯುವತಿ ಇಬ್ಬರೂ ಜವಾಬ್ದಾರಿ ಹಂಚಿಕೊಂಡು, ಸಹಬಾಳ್ವೆಯೊಂದಿಗೆ ಬದುಕಿದರೆ ಮಾತ್ರವೇ ಅದು ದಾಂಪತ್ಯಕ್ಕೆ ಸರಿಹೊಂದುವ ಲಿವ್-ಇನ್-ರಿಲೇಶನ್‌ಶಿಪ್ ಆಗುತ್ತದೆ ಎಂದು ನ್ಯಾಯಾಲಯ ಹೇಳಿದೆ.
ಅರ್ಜಿದಾರ ಜೋಡಿಯ ಪ್ರೀತಿಗೆ ಯುವತಿಯ ಮನೆಯವರ ಒಪ್ಪಿಗೆ ಇಲ್ಲದ ಹಿನ್ನೆಲೆಯಲ್ಲಿ ಲಿವ್-ಇನ್-ರಿಲೇಶನ್‌ಶಿಪ್‌ನಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.