ತೈಲ, ಕ್ಷಿಪಣಿಯೇ ಚರ್ಚೆ
Team Udayavani, Sep 6, 2018, 6:00 AM IST
ಹೊಸದಿಲ್ಲಿ /ವಾಷಿಂಗ್ಟನ್: ಭಾರತ ಮತ್ತು ಅಮೆರಿಕ ನಡುವೆ ಬಹು ನಿರೀಕ್ಷಿತ 2+2 ಮಾತುಕತೆಗಳು ಗುರುವಾರ ಹೊಸದಿಲ್ಲಿಯಲ್ಲಿ ನಡೆಯಲಿವೆ. ಅಮೆರಿಕದ ವಿದೇಶಾಂಗ ಸಚಿವ ಮೈಕ್ ಆರ್.ಪೊಂಪ್ಯೂ, ಅಲ್ಲಿನ ರಕ್ಷಣಾ ಸಚಿವ ಜೇಮ್ಸ್ ಮ್ಯಾಟಿಸ್ ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮತ್ತು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ನಡುವೆ ಮಾತುಕತೆ ನಡೆಸಲಿದ್ದಾರೆ. ಎರಡೂ ರಾಷ್ಟ್ರಗಳ ನಡುವೆ ಭಾರತ ಇರಾನ್‌ನಿಂದ ತೈಲ ಆಮದು ಮಾಡುವುದು, ರಷ್ಯಾದಿಂದ ಎಸ್-400 ಟ್ರೈಂಫ್ ಕ್ಷಿಪಣಿ ರಕ್ಷಣಾ ವ್ಯವಸ್ಥೆ ಖರೀದಿ, ಇಂಡೋ-ಪೆಸಿಫಿಕ್ ಪ್ರದೇಶದಲ್ಲಿನ ಭದ್ರತೆ, ಉಗ್ರಗಾಮಿ ಚಟುವಟಿಕೆಗಳ ನಿಯಂತ್ರಣಕ್ಕೆ ಸಹಭಾಗಿತ್ವದ ಬಗ್ಗೆ ಪ್ರಮುಖವಾಗಿ ಚರ್ಚೆಗಳಾಗಲಿವೆ.
ವಾಷಿಂಗ್ಟನ್‌ನಲ್ಲಿ ಅಮೆರಿಕದ ರಕ್ಷಣಾ ಸಚಿವ ಜೇಮ್ಸ್ ಮ್ಯಾಟಿಸ್ ಎಸ್-400 ಕ್ಷಿಪಣಿ ಖರೀದಿ ವಿಚಾರ ಪ್ರಮುಖವಾಗಿ ಚರ್ಚೆಗೆ ಬರುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇದರ ಹೊರತಾಗಿಯೂ ಭಾರತ ಅದನ್ನು ಪ್ರಸ್ತಾಪಿಸಿ 2017ರಲ್ಲಿ ಅಮೆರಿಕ ಜಾರಿ ಮಾಡಿದ ರಷ್ಯಾದಿಂದ ಹೊಸತಾಗಿ ರಕ್ಷಣಾ ಒಪ್ಪಂದ ಮಾಡುವ ರಾಷ್ಟ್ರದ ಮೇಲೆ ದಿಗ್ಬಂಧನ ಹೇರುವ ನಿಯಮದಿಂದ ಭಾರತಕ್ಕೆ ವಿನಾಯಿತಿ ಕೊಡಲೇಬೇಕೆಂದು ಒತ್ತಾಯ ಮಾಡಲಿದೆ. ಇದರ ಜತೆಗೆ ನವೆಂಬರ್ ಬಳಿಕ ಇರಾನ್‌ನಿಂದ ಕಚ್ಚಾ ತೈಲ ಸೇರಿದಂತೆ ಯಾವುದೇ ವಹಿವಾಟು ಅದರ ಜತೆಗೆ ನಡೆಸಬಾರದು ಎಂದು ಅಮೆರಿಕ ತಾಕೀತು ಮಾಡಿರುವುದರಿಂದ ಅದೂ ಪ್ರಮುಖವಾಗಿ ಚರ್ಚೆಗೆ ಬರಲಿದೆ.
ಪಾಕಿಸ್ಥಾನ ನಾಯಕರ ಜತೆಗೆ ಪೊಂಪ್ಯೂಭೇಟಿ
ಇಸ್ಲಾಮಾಬಾದ್‌ನಲ್ಲಿ ಅಮೆರಿಕ ವಿದೇಶಾಂಗ ಸಚಿವ ಮೈಕ್ ಪೊಂಪೊÂà ಪಾಕಿಸ್ಥಾನ ಪ್ರಧಾನಿ ಇಮ್ರಾನ್ ಖಾನ್, ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ಜತೆಗೆ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಪಾಕಿಸ್ಥಾನಕ್ಕೆ 2,130 ಕೋಟಿ ರೂ. ರಕ್ಷಣಾ ನೆರವು ರದ್ದು ಮಾಡಿದ್ದೇಕೆ ಎಂದು ವಿವರಿಸಿದರು. ಜತೆಗೆ ಅಮೆರಿಕ-ಪಾಕ್ ನಡುವೆ ಬಾಂಧವ್ಯ ವೃದ್ಧಿಗೆ ಬಗ್ಗೆ ಮಾತುಕತೆ ನಡೆಸಿದ್ದಾರೆ. ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಪಾಕ್ ಜತೆಗಿನ ಸಂಬಂಧ ಹದಗೆಟ್ಟಿದೆ. ಜನವರಿಯಲ್ಲಿ ಎಲ್ಲಾ ರೀತಿಯ ರಕ್ಷಣಾ ನೆರವನ್ನು ಪಾಕ್‌ಗೆ ರದ್ದು ಮಾಡಲಾಗಿತ್ತು.
ಇಂದು ಪ್ರಧಾನಿ ಭೇಟಿ
ಅಮೆರಿಕದ ವಿದೇಶಾಂಗ ಮತ್ತು ರಕ್ಷಣಾ ಸಚಿವರನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಭೇಟಿಯಾಗಲಿದ್ದಾರೆ. ಮುಂದಿನ ವರ್ಷ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಪ್ರವಾಸ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಈ ಭೇಟಿ ಪ್ರಮುಖವಾದದ್ದಾಗಿದೆ. ಭಾರತ ಮತ್ತು ಅಮೆರಿಕ ಮಟ್ಟದಲ್ಲಿ ಇದೊಂದು ದೊಡ್ಡ ಮಟ್ಟದ ಸಭೆ ಇದಾಗಲಿದೆ. ಬ್ಯೂನಸ್ ಐರಿಸ್‌ನಲ್ಲಿ ನ.30-ಡಿ.1ರ ವರೆಗೆ ನಡೆಯುವ ಜಿ-20 ರಾಷ್ಟ್ರಗಳ ಸಮ್ಮೇಳನದಲ್ಲಿ ಪ್ರಧಾನಿ ನರೇಂದ್ರ ಮೋದಿ- ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಮಾತುಕತೆ ನಡೆಯಲಿದೆ. ವಿದೇಶಾಂಗ ಸಚಿವ ಪೊಂಪ್ಯೂ ಇಸ್ಲಾಮಾಬಾದ್‌ಗೆ ತೆರಳಿ ನವದೆಹಲಿಗೆ ಆಗಮಿಸಿದ್ದಾರೆ. ಇನ್ನು ಅಮೆರಿಕ ರಕ್ಷಣಾ ಸಚಿವರು ನೇರವಾಗಿ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.