ಉಗ್ರರಿಂದ ಗುಂಡಿನ ದಾಳಿ: ಮೂವರು ಬಿಜೆಪಿ ನಾಯಕರ ಹತ್ಯೆ
Team Udayavani, Oct 30, 2020, 8:09 AM IST
ಶ್ರೀನಗರ: ಉಗ್ರಗಾಮಿಗಳು ಗುಂಡಿನ ದಾಳಿ ನಡೆಸಿ ಮೂವರು ಸ್ಥಳೀಯ ಬಿಜೆಪಿ ನಾಯಕರನ್ನು ಹತ್ಯೆ ಮಾಡಿದ ಘಟನೆ ಜಮ್ಮು ಕಾಶ್ಮೀರದ ಖಾಜಿಗುಂಡ್ ಪ್ರದೇಶದಲ್ಲಿ ಕಳೆದ ರಾತ್ರಿ ನಡೆದಿದೆ.
ಭಾರತೀಯ ಜನತಾ ಪಕ್ಷದ ಸ್ಥಳೀಯ ನಾಯಕರಾದ ಫಿದಾ ಹುಸೇನ್ ಯಾತೋ, ಉಮರ್ ರಂಜಾನ್ ಹಾಜನ್ ಮತ್ತು ಉಮರ್ ರಶೀದ್ ಬೇಗ್ ಎಂಬ ಮೂವರು ಉಗ್ರರ ಗುಂಡಿನ ದಾಳಿಯಲ್ಲಿ ಸಾವೀಗೀಡಾಗಿದ್ದಾರೆ. ಇವರಲ್ಲಿ ಫಿದಾ ಹುಸೇನ್ ಯಾತೋ ಜಿಲ್ಲಾ ಬಿಜೆಪಿ ಕಾರ್ಯದರ್ಶಿಯಾಗಿದ್ದು, ಉಳಿದ ಇಬ್ಬರು ಕಾರ್ಯಕರ್ತರು ಎಂದು ವರದಿಯಾಗಿದೆ.
ಖಾಜಿಗುಂಡ್ ನ ವೈಕೆ ಪೋರಾ ಗ್ರಾಮದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಮೂಲಗಳ ಮಾಹಿತಿಯ ಪ್ರಕಾರ ಈ ಮೂವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಪಲ್ಟಿಯಾದ ಮದುವೆ ಮನೆಯಿಂದ ಬರುತ್ತಿದ್ದ ವ್ಯಾನ್: ಆರು ಮಂದಿ ಸಾವು, ಹಲವರಿಗೆ ಗಾಯ
ಕೂಡಲೇ ಮೂವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಆದರೆ ಪ್ರಯೋಜನವಾಗಲಿಲ್ಲ. ಗುಂಡಿನ ದಾಳಿ ನಡೆಸಿದ ದಾಳಿಕೋರರು ಆಲ್ಟೊ ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ಜಮ್ಮು ಕಾಶ್ಮೀರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪ್ರಕರಣ ದಾಖಲಿಸಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ. ದಾಳಿ ನಡೆದ ಖಾಜಿಗುಂಡ್‌ನ ಈದ್ಗಾ ಸುತ್ತಮುತ್ತಲಿನ ಪ್ರದೇಶವನ್ನು ಭಾರತೀಯ ಸೇನೆಯು ಸುತ್ತುವರೆದಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಗುರುವಾರ ನಡೆದ ದಾಳಿಯನ್ನು ಖಂಡಿಸಿದ್ದಾರೆ. “ನಮ್ಮ ಮೂವರ ಯುವ ಕಾರ್ಯಕರ್ತರ ಹತ್ಯೆಯನ್ನು ನಾನು ಖಂಡಿಸುತ್ತೇನೆ. ಅವರು ಜಮ್ಮು ಕಾಶ್ಮೀರದಲ್ಲಿ ಅತ್ಯುತ್ತಮ ಕೆಲಸ ಮಾಡುವ ಯುವಕರಾಗಿದ್ದರು. ಅವರ ಆತ್ಮಗಳು ಶಾಂತಿಯಿಂದ ವಿಶ್ರಾಂತಿ ಪಡೆಯಲಿ ”ಎಂದು ಪ್ರಧಾನಿ ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
MUST WATCH
ಹೊಸ ಸೇರ್ಪಡೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.