ಮುಂದಿನ ವಾರವೇ ಅಗ್ನಿಪಥ ? ಸೇನೆಯ 3 ವಿಭಾಗ ಮುಖ್ಯಸ್ಥರ ಸುಳಿವು : ವಯೋಮಿತಿ ಏರಿಕೆಗೆ ಸಮರ್ಥನೆ
Team Udayavani, Jun 18, 2022, 7:00 AM IST
ಹೊಸದಿಲ್ಲಿ: ಅಗ್ನಿಪಥ ಯೋಜನೆಯ ಬಗ್ಗೆ ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆಗಳು ಮುಂದುವರಿದಿರುವಂತೆಯೇ, ಭೂಸೇನೆ, ನೌಕಾಪಡೆ, ಭಾರತೀಯ ವಾಯುಪಡೆ ಮುಂದಿನ ವಾರದಿಂದ ಹೊಸ ಯೋಜನೆಯ ಅನ್ವಯ ನೇಮಕ ಪ್ರಕ್ರಿಯೆ ಮಾಡಲಿವೆ. ಈ ಬಗ್ಗೆ ಸೇನಾ ಪಡೆಯ ಮೂರು ವಿಭಾಗಗಳ ಮುಖ್ಯಸ್ಥರು ಶುಕ್ರವಾರ ಮಾಹಿತಿ ನೀಡಿದ್ದಾರೆ.
ಜತೆಗೆ ಅಗ್ನಿಪಥ ಯೋಜನೆಗೆ ಭೂಸೇನಾ ಮುಖ್ಯಸ್ಥ ಜ| ಮನೋಜ್ ಪಾಂಡೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್.ಹರಿಕುಮಾರ್, ಐಎಎಫ್ ಮುಖ್ಯಸ್ಥ ಏರ್‌ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಮತ್ತೊಮ್ಮೆ ಸಮರ್ಥನೆ ನೀಡಿದ್ದಾರೆ.
ಭೂಸೇನಾ ಮುಖ್ಯಸ್ಥ ಜ| ಮನೋಜ್ ಪಾಂಡೆ ಮಾತನಾಡಿ ಮುಂದಿನ 2 ದಿನಗಳಲ್ಲಿ ನೇಮಕ ಪ್ರಕ್ರಿಯೆ ಶುರುವಾಗಲಿದೆ ಎಂದಿದ್ದಾರೆ. ಸೇನೆಗೆ ಸೇರ್ಪಡೆ ಮಾಡುವ ಆರಂಭಿಕ ವಯೋಮಿತಿ ಯನ್ನು 21ರಿಂದ 23ಕ್ಕೆ ಏರಿಕೆ ಮಾಡಿದ್ದು ಹೆಚ್ಚಿನ ಯುವಕರಿಗೆ ಅನುಕೂಲ ಮಾಡಿಕೊಡಲಿದೆ. ಕೊರೊನಾ ಕಾರಣದಿಂದಾಗಿ 2 ವರ್ಷಗಳಿಂದ ಸೇನೆಗೆ ನೇಮಕ ಮಾಡಲು ಸಾಧ್ಯವಾಗಿರಲಿಲ್ಲ ಎಂದಿದ್ದಾರೆ. ಹೀಗಾಗಿ ಒಂದು ಬಾರಿಗೆ ವಯೋಮಿತಿ ಏರಿಕೆ ಮಾಡಲು ಕೇಂದ್ರ ಸರಕಾರ ನಿರ್ಧಾರ ಮಾಡಿದೆ ಎಂದು ಜ| ಪಾಂಡೆ ಹೇಳಿದ್ದಾರೆ.
ಬದಲಾವಣೆಗೆ ಕಾರಣ: ದೇಶದ ಸೇನಾ ಇತಿಹಾಸದಲ್ಲಿಯೇ ಇದೊಂದು ಭಾರೀ ಬದಲಾವಣೆಗೆ ಕಾರಣವಾಗಲಿದೆ ಎಂದಿ ದ್ದಾರೆ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್.ಹರಿಕುಮಾರ್. ಯೋಜನೆಯ ಬಗ್ಗೆ ತಪ್ಪು ಮಾಹಿತಿ ಯುವಕರಿಗೆ ಸಿಕ್ಕಿದೆ. ಹೀಗಾಗಿ, ಅವರು ಪ್ರತಿಭಟನೆಗೆ ಇಳಿದಿದ್ದಾರೆ ಎಂದು ಹೇಳಿದ್ದಾರೆ. ನೌಕಾಪಡೆಯ ಹಿರಿಯ ಅಧಿಕಾರಿಗಳ ಪ್ರಕಾರ ಶೀಘ್ರ ಹೊಸ ವ್ಯವಸ್ಥೆಯ ನೇಮಕ ಪ್ರಕ್ರಿಯೆ ಶುರುವಾಗಲಿದೆ.
ಜೂ. 24ರಂದು ಶುರು: ಆರಂಭಿಕ ವಯೋಮಿತಿ ಹೆಚ್ಚಳವನ್ನು ಐಎಎಫ್ ಮುಖ್ಯಸ್ಥ ಏರ್‌ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಸಮರ್ಥಿಸಿಕೊಂಡಿದ್ದಾರೆ. ಇದರಿಂದಾಗಿ ಹೆಚ್ಚಿನ ಸಂಖ್ಯೆಯ ಯುವಜನರಿಗೆ ನೆರವಾಗಲಿದೆ ಎಂದಿದ್ದಾರೆ. ಅದಕ್ಕೆ ಪೂರವಾಗಿ ಜೂ. 24ರಂದು ನೇಮಕ ಪ್ರಕ್ರಿಯೆ ಶುರುವಾಗಲಿದೆ ಎಂದು ಹೇಳಿದ್ದಾರೆ.
ಮುಂದಿನ ವರ್ಷಕ್ಕೆ?: ಸೇನೆಯ ಮೂರು ವಿಭಾಗಗಳು ಕೂಡಲೇ ಪ್ರಕ್ರಿಯೆ ಶುರು ಮಾಡಿ, ಆಯ್ಕೆ ಪ್ರಕ್ರಿಯೆ ಮುಕ್ತಾಯ ಗೊಳಿಸಿದರೆ, ಅಗ್ನಿಪಥ ಯೋಜನೆಯ ವ್ಯಾಪ್ತಿಯಲ್ಲಿ ನೂತನ ಯೋಧರನ್ನು ಮುಂದಿನ ವರ್ಷದ ಜೂನ್‌ನಲ್ಲಿ ಸೇವೆಗೆ ಸೇರ್ಪಡೆ ಮಾಡಿಕೊಳ್ಳುವ ಸಾಧ್ಯತೆಗಳಿವೆ.
“ಬಸ್, ರೈಲುಗಳಿಗೆ ಬೆಂಕಿ ಹಚ್ಚುವವರು ಬೇಡ’
ಬಸ್, ರೈಲುಗಳಿಗೆ ಬೆಂಕಿ ಹಚ್ಚುವವರು, ಗೂಂಡಾ ಕೃತ್ಯಗಳಲ್ಲಿ ತೊಡಗಿರುವವರು ಸೇನೆ ಸೇರಲು ಅರ್ಹರಲ್ಲ- ಹೀಗೆಂದು ನಿವೃತ್ತ ಸೇನಾ ಮುಖ್ಯಸ್ಥ ಜ| ವಿ.ಪಿ.ಮಲಿಕ್ ಅಭಿಪ್ರಾಯಪಟ್ಟಿದ್ದಾರೆ. ಭಾರತೀಯ ಸೇನೆ ಎನ್ನುವುದು ಒಂದು ಸ್ವಯಂ ಪ್ರೇರಣೆಯಿಂದ ಕರ್ತವ್ಯಕ್ಕೆ ಸೇರಲು ಇರುವ ಸಂಸ್ಥೆ ಎಂದು ಹೇಳಿದ್ದಾರೆ. ದೇಶವನ್ನು ರಕ್ಷಿಸಲು ಮತ್ತು ಅದಕ್ಕಾಗಿ ಹೋರಾಟ ಮಾಡುವವರನ್ನು ಮಾತ್ರ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಬಸ್, ರೈಲುಗಳಿಗೆ ಬೆಂಕಿ ಹಚ್ಚುವವರನ್ನು ಸೇನೆಗೆ ಸೇರಿಸಿಕೊಳ್ಳಲಾಗುವುದಿಲ್ಲ ಎಂದಿದ್ದಾರೆ. ನಾಲ್ಕು ವರ್ಷಗಳ ಬಳಿಕ ಸೇನೆಯ ಉದ್ಯೋಗದ ಬಳಿಕ ಅವರನ್ನು ಪೊಲೀಸ್ ಪಡೆಗಳಿಗೆ, ಖಾಸಗಿ ವಲಯದಲ್ಲಿ ಸೇರಿಕೊಳ್ಳಲು ಅವಕಾಶ ಇದೆ ಎಂದು ಹೇಳಿದ್ದಾರೆ. ತಾಂತ್ರಿಕ ಕೌಶಲ ಇರುವವರ ನೇಮಕಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಅದಕ್ಕಾಗಿಯೇ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುವವರನ್ನು ನೇಮಿಸಲು ಗುರಿ ಹಾಕಿಕೊಳ್ಳಲಾಗಿದೆ ಎಂದರು ನಿವೃತ್ತ ಭೂಸೇನಾ ಮುಖ್ಯಸ್ಥ.
ಟ್ವಿಟರ್‌ನಲ್ಲಿ ಕೈ ಸಂಸದರ ಹೋರಾಟ
ಅಗ್ನಿಪಥ ವಿಚಾರಕ್ಕಾಗಿ ಕಾಂಗ್ರೆಸ್‌ನ ಇಬ್ಬರು ಸಂಸದರು ಟ್ವಿಟರ್‌ನಲ್ಲಿ ಜಗಳ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಕೇಂದ್ರದ ತೀರ್ಮಾನ ಸಮರ್ಥಿಸಿ ಸುದ್ದಿ ವಾಹಿನಿಯ ಚರ್ಚೆಯಲ್ಲಿ ಮಾತನಾಡಿದ್ದರು. ಅದಕ್ಕೆ ಟ್ವೀಟ್ ಮಾಡಿದ ಸಂಸದ ಸಪ್ತಗಿರಿ ಶಂಕರ್ ಉಲಾಕಾ “ಸರಕಾರದ ನಿರ್ಧಾರದ ಬಗ್ಗೆ ಕಾಂಗ್ರೆಸ್‌ನಲ್ಲಿ ಸಂಬಂಧಿತರು ಪಕ್ಷದ ನಿಲುವು ಪ್ರಕಟಿಸಿದ್ದಾರೆ. ಕಾಂಗ್ರೆಸಿಗ ಎನ್ನು ವುದರ ಬದಲು ಕೇವಲ ಮನೀಶ್ ತಿವಾರಿ ಎಂದಿದ್ದರೆ ಸಾಕಾಗಿತ್ತು ಎಂದು ಬರೆದಿದ್ದಾರೆ. ಅದಕ್ಕೆ ತಿರುಗೇಟು ನೀಡಿದ ತಿವಾರಿ “ಉಲಾಕಾಜಿ ನೀವು ಸಣ್ಣವರಾಗಿದ್ದಾಗಲೇ ನಾನು ಕಾಂಗ್ರೆಸ್‌ನಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದೆ’ ಎಂದು ಬರೆದುಕೊಂಡಿದ್ದಾರೆ.
ವಯೋಮಿತಿ ಏರಿಕೆ ಸಮರ್ಥನೆ
ವಯೋಮಿತಿ ಏರಿಕೆಯನ್ನು ಬಿಜೆಪಿ ಸಮರ್ಥಿಸಿಕೊಂಡಿದೆ. ದೇಶದ ಸೇವೆ ಮಾಡಲು ಯುವ ಜನರಿಗೆ ಇದೊಂದು ಸುವರ್ಣ ಅವಕಾಶ ಎಂದು ಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಸರಕಾರದ ನಿರ್ಧಾ ರವನ್ನು ಸಮರ್ಥಿಸಿದ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಯುವಕರ ಕಳವಳ ಅರ್ಥ ಮಾಡಿಕೊಂಡಿದ್ದಾರೆ. ಅವರ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದೇ ಅವರು ಬಯಸು ತ್ತಿದ್ದಾರೆ ಎಂದರು. ಹಲವಾರು ಕೇಂದ್ರ ಸಚಿವರು ಮತ್ತು ಬಿಜೆಪಿಯ ಮುಖಂಡರು ವಯೋಮಿತಿಯನ್ನು ಸಮರ್ಥಿಸಿ ಪ್ರತಿಕ್ರಿಯೆ ನೀಡಿದ್ದಾರೆ.
ವಯೋಮಿತಿ ಏರಿಕೆ ಸಮರ್ಥನೆ
ವಯೋಮಿತಿ ಏರಿಕೆಯನ್ನು ಬಿಜೆಪಿ ಸಮರ್ಥಿಸಿಕೊಂಡಿದೆ. ದೇಶದ ಸೇವೆ ಮಾಡಲು ಯುವ ಜನರಿಗೆ ಇದೊಂದು ಸುವರ್ಣ ಅವಕಾಶ ಎಂದು ಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಸರಕಾರದ ನಿರ್ಧಾ ರವನ್ನು ಸಮರ್ಥಿಸಿದ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಯುವಕರ ಕಳವಳ ಅರ್ಥ ಮಾಡಿಕೊಂಡಿದ್ದಾರೆ. ಅವರ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದೇ ಅವರು ಬಯಸು ತ್ತಿದ್ದಾರೆ ಎಂದರು. ಹಲವಾರು ಕೇಂದ್ರ ಸಚಿವರು ಮತ್ತು ಬಿಜೆಪಿಯ ಮುಖಂಡರು ವಯೋಮಿತಿಯನ್ನು ಸಮರ್ಥಿಸಿ ಪ್ರತಿಕ್ರಿಯೆ ನೀಡಿದ್ದಾರೆ.
ಕೂಡಲೇ ಯೋಜನೆ ಹಿಂಪಡೆಯಿರಿ
ಹೊಸದಿಲ್ಲಿ: ಅಗ್ನಿಪಥ್ ಯೋಜನೆಯ ವಿರುದ್ಧ ರಾಜ್ಯಗಳಲ್ಲಿ ಪ್ರತಿಭಟನೆಗಳು ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಪಕ್ಷ ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳ ಮುಖಂಡರು ಅದನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಿಯಾಂಕಾ ಗಾಂಧಿ, ಟ್ವೀಟ್ ಮಾಡಿ “ಅಗ್ನಿಪಥ್ ಎಂಬ ಹೊಸ ಸೇನಾ ನೇಮಕಾತಿ ಯೋಜನೆಯನ್ನು ಜಾರಿ ಗೊಳಿಸಿದ 24 ಗಂಟೆಗಳಲ್ಲೇ ಆ ಯೋಜನೆಯ ನಿಯಮಗಳಿಗೆ ತಿದ್ದುಪಡಿ ತರಲಾಗಿದೆ. ಇದು ಈ ಯೋಜನೆಯನ್ನು ಅತೀ ಅವಸರದಲ್ಲಿ ಜಾರಿಗೊಳಿಸಿದ್ದಕ್ಕೆ ಸಾಕ್ಷಿಯಾಗಿದೆ. ನರೇಂದ್ರ ಮೋದಿಯವರೇ, ಈ ಯೋಜನೆಯನ್ನು ತತ್‌ಕ್ಷಣವೇ ಹಿಂಪಡೆಯಿರಿ. ವಾಯು ಪಡೆಯಲ್ಲಿ ಬಹುದಿನಗಳಿಂದ ಖಾಲಿಯಿರುವ ಹುದ್ದೆಗಳಿಗೆ ಪರೀಕ್ಷೆ ನಡೆಸಿ, ಆಯ್ಕೆಯಾದ ಅರ್ಹರ ಫಲಿತಾಂಶ ಪ್ರಕಟಿಸಿ’ ಎಂದು ಆಗ್ರಹಿಸಿದ್ದಾರೆ.
ದೇಶಕ್ಕೆ ಮಾರಕ: ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಪ್ರತಿಕ್ರಿಯಿಸಿ, ಅಗ್ನಿಪಥ್ ಘೋಷಣೆ ಯಿಂದ ಸಮಾಜದ ಮೇಲಾಗುವ ದುಷ್ಪರಿಣಾಮವನ್ನು ಗ್ರಹಿಸುವಲ್ಲಿ ಕೇಂದ್ರ ದಿವ್ಯ ನಿರ್ಲಕ್ಷ್ಯ ತೋರಿದೆ. ಇಂಥ ಯೋಜನೆಗಳನ್ನು ಜಾರಿಗೊಳಿಸುವುದು ದೇಶಕ್ಕೆ ಮಾರಕವಾಗುತ್ತದೆ ಎಂದಿದ್ದಾರೆ.
ಪ್ರಧಾನಿ ಮೋದಿಯವರಿಗೆ ದೇಶದ ಜನರ ಕಷ್ಟ ಮತ್ತು ಅವರಿಗೆ ಏನು ಬೇಕು ಎಂಬುದು ಗೊತ್ತಾಗುತ್ತಿಲ್ಲ. ಪ್ರಧಾನಿಯವರಿಗೆ ಅವರ ಸ್ನೇಹಿತರ ಮಾತು ಬಿಟ್ಟು ಬೇರೇನೂ ಕೇಳುತ್ತಿಲ್ಲ.
-ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.