6 ವರ್ಷದ ಬಾಲೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆಗೈದ ದುರುಳರು: ಇಬ್ಬರ ಬಂಧನ
Team Udayavani, Oct 23, 2020, 8:40 PM IST
ಪಂಜಾಬ್: 6 ವರ್ಷದ ಪುಟ್ಟ ಬಾಲೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆಗೈದ ದುಷ್ಕರ್ಮಿಗಳು ಬಳಿಕ ಶವಕ್ಕೆ ಬೆಂಕಿ ಹಚ್ಚಿ ಸುಟ್ಟ ದಾರುಣ ಘಟನೆ ಪಂಜಾಬ್ ನ ಹೋಶಿಯಾರ್ ಪುರದಲ್ಲಿ ನಡೆದಿದೆ.
ಹೋಶಿಯಾರ್ ಪುರ ಜಿಲ್ಲೆಯಲ್ಲಿನ ಆರೋಪಿಗಳ ಮನೆಯಲ್ಲಿದ್ದ ಅರ್ಧ ಸುಟ್ಟ ಶವವನ್ನು ವಶಕ್ಕೆ ಪಡೆಯಲಾಗಿದೆ. ಅಕ್ಟೋಬರ್ 21 ರಂದು ಈ ಘಟನೆ ನಡೆದಿತ್ತು ಎಂದು ವರದಿಯಾಗಿದೆ.
ಗುರ್‌ಪ್ರೀತ್ ಎಂಬಾತ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದು ಅಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ಥೆಯ ತಂದೆ ಆರೋಪಿಸಿದ್ದಾರೆ. ಮಾತ್ರವಲ್ಲದೆ ಆರೋಪಿಯು, ಸುರ್ಜಿತ್ ಸಿಂಗ್ ಎಂಬ ವೃದ್ಧನ ಮೊಮ್ಮಗನಾಗಿದ್ದು, ಇಬ್ಬರೂ ಸೇರಿಕೊಂಡು ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿ ಕೊಂದು ದೇಹವನ್ನು ಸುಟ್ಟುಹಾಕಿದ್ದಾರೆ ಎಂದು ವಲಸೆ ಕಾರ್ಮಿಕನಾದ ಬಾಲಕಿ ತಂದೆ ದೂರಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈಗಾಗಲೇ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ದಿನಕರ್ ಗುಪ್ತಾ ಅವರಿಗೆ ನಿರ್ದೇಶನ ನೀಡಿದ್ದಾರೆ. ಹೋಶಿಯಾರ್‌ಪುರದಲ್ಲಿ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದಿರುವುದು ಅತ್ಯಂತ ದುಃಖಕರ ಮತ್ತು ಆಘಾತಕಾರಿ ಘಟನೆ ಎಂದು ಮುಖ್ಯಮಂತ್ರಿ ಶುಕ್ರವಾರ ಟ್ವೀಟ್‌ನಲ್ಲಿ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.