ಮಿರಾಜ್ ದುರಂತವು ದೇಶೀಯ ತಯಾರಿಕೆಗೆ ಹಿನ್ನಡೆಯಲ್ಲ: ನಿರ್ಮಲಾ
Team Udayavani, Feb 4, 2019, 12:30 AM IST
ಕೊಯಮತ್ತೂರು: “ಬೆಂಗ ಳೂರಿನಲ್ಲಿ ಇತ್ತೀಚೆಗೆ ನಡೆದ ಮಿರಾಜ್-2000 ಜೆಟ್ ದುರಂತವು ದೇಶೀಯ ವಿಮಾನ ತಯಾರಿಕೆಗಾದ ಹಿನ್ನಡೆ ಅಲ್ಲ’ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟಿದ್ದಾರೆ.
ಕೊಯಮತ್ತೂರಿನಲ್ಲಿ ಭಾನುವಾರ ಮಾತನಾಡಿದ ಅವರು, ದೇಶೀಯವಾಗಿ ವಿಮಾನ ತಯಾರಿಕೆಗೆ ಈ ದುರಂತದಿಂದ ಯಾವುದೇ ಹಿನ್ನಡೆಯಾಗಿಲ್ಲ. ಆದರೆ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಇನ್ನಷ್ಟು ಸುಧಾರಣೆ ಆಗಬೇಕಾದ ಅಗತ್ಯವಿದೆ ಎಂದು ಹೇಳಿದ್ದಾರೆ.
ಎಚ್‌ಎಎಲ್ ಸಂಸ್ಥೆಯು ಮೇಲ್ದರ್ಜೆಗೇರಿಸಿದ್ದ ತರಬೇತಿ ವಿಮಾನವು ಪತನಗೊಂಡು ಇಬ್ಬರು ಪೈಲಟ್‌ಗಳು ಸಾವಿಗೀಡಾದ ಬೆನ್ನಲ್ಲೇ ಸಚಿವೆಯಿಂದ ಈ ಹೇಳಿಕೆ ಹೊರಬಿದ್ದಿದೆ. ಇದೇ ವೇಳೆ, ಹಿಂದಿನ ಯುಪಿಎ ಸರಕಾರದ ವಿರುದ್ಧ ಹರಿಹಾಯ್ದ ನಿರ್ಮಲಾ, 10 ವರ್ಷಗಳ ಆಡಳಿತಾವಧಿಯಲ್ಲಿ ಯುಪಿಎ ಸರಕಾರವು ಎಚ್‌ಎಎಲ್ ಆಗಲೀ, ಬಿಇಎಲ್ ಆಗಲೀ, ಯಾವುದೇ ರಕ್ಷಣಾ ಸರ್ಕಾರಿ ಸ್ವಾಮ್ಯದ ಸಂಸ್ಥೆಯನ್ನು ಮೇಲ್ದರ್ಜೆಗೇರಿಸಲು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಅವರು ಈ ನಿಟ್ಟಿನಲ್ಲಿ ಹೆಜ್ಜೆಯಿಟ್ಟಿದ್ದರೆ ಈಗ ಪಿಎಸ್‌ಯುಗಳು ವಿಶ್ವ ದರ್ಜೆಗೇರುತ್ತಿದ್ದವು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
Election: ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.