ಮಲ್ಪೆಯಿಂದ ನಾಪತ್ತೆಯಾಗಿದ್ದ ಸುವರ್ಣ ತ್ರಿಭುಜ ಬೋಟ್‌ನ ಅವಶೇಷ ಪತ್ತೆ
7 ಮಂದಿ ಮೀನುಗಾರರು ನೀರುಪಾಲಾಗಿರುವ ಸಾಧ್ಯತೆ
Team Udayavani, May 3, 2019, 9:16 AM IST
ಮುಂಬಯಿ : 2018 ರ ಡಿಸೆಂಬರ್ 15 ರಂದು ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿದ್ದ ಸುವರ್ಣ ತ್ರಿಭುಜ ಬೋಟ್‌ನ ಅವಶೇಷಗಳು ಮಹಾರಾಷ್ಟ್ರದ ಮಾಲ್ವಣ್ ಕಡಲ ತೀರದಿಂದ 33 ಕಿ.ಮೀ ದೂರದಲ್ಲಿ ಪತ್ತೆಯಾಗಿವೆ ಎಂದು ಭಾರತೀಯ ನೌಕಾಪಡೆ ತಿಳಿಸಿದೆ.
ನೌಕಾಪಡೆಯ ಹೆಲಿಕ್ಯಾಪ್ಟರ್‌ಗಳು ಮತ್ತು ಹಡಗುಗಳು ನಿರಂತರವಾಗಿ ಶೋಧ ನಡೆಸಿ ಆಳ ಸಮುದ್ರದಲ್ಲಿ ಅವಶೇಷಗಳನ್ನು ಪತ್ತೆ ಹಚ್ಚಿದೆ ಎಂದು ನೌಕಾಪಡೆಯ ವಕ್ತಾರರು ಟ್ವೀಟ್ ಮಾಡಿದ್ದಾರೆ.
ಐಎನ್‌ಎಸ್ ನಿರೀಕ್ಷಕ್ ಮೇ 1 ರಂದು ಕಾರ್ಯಾಚರಣೆಗಿಳಿದ ವೇಳೆ ಅವಶೇಷಗಳನ್ನುಪತ್ತೆ ಹಚ್ಚಿದೆ ಎಂದು ಟ್ವೀಟ್‌ನಲ್ಲಿ ತಿಳಿಸಲಾಗಿದೆ.
60 ಮೀಟರ್ ಆಳದಲ್ಲಿ ಅವಶೇಷಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.
ಬೋಟ್‌ನಲ್ಲಿದ್ದ 7 ಮಂದಿ ಮೀನುಗಾರರು ನೀರು ಪಾಲಾಗಿರುವ ಸಾಧ್ಯತೆಗಳಿದ್ದು, ಇದುವರೆಗೂ ಯಾರೊಬ್ಬರ ಸುಳಿವು ಲಭ್ಯವಾಗಿಲ್ಲ.
Missing Fishing Boat Wreck Found by #IndianNavy – After an intensive search by ships & aircraft since December 2018, #IndianNavy has located the wreck of fishing vessel Suvarna Tribhuja 33 km WSW of the coast of Malvan. The wreck was found by #INSNireekshak on 01 May 19. 1/2 pic.twitter.com/23ZVJ3XfxZ
— SpokespersonNavy (@indiannavy) May 2, 2019
ಬೋಟ್ ನಾಪತ್ತೆಯಾದ ಬಳಿಕ ವ್ಯಾಪಕ ಹುಡುಕಾಟ ನಡೆಸಲಾಗಿದ್ದು, ನಾಪತ್ತೆಯಾದವರನ್ನು ಹುಡುಕಿ ಕೊಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಮೀನುಗಾರರು ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Supreme Court: ಕ್ರೆಡಿಟ್ ಕಾರ್ಡ್ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.