ಮಿಶನ್ ಶಕ್ತಿ ಭಾಷಣ : ಚುನಾವಣಾ ಆಯೋಗದಿಂದ ಪ್ರಧಾನಿ ಮೋದಿಗೆ ಕ್ಲೀನ್ ಚಿಟ್
Team Udayavani, Mar 29, 2019, 7:27 PM IST
ಹೊಸದಿಲ್ಲಿ : ಮಿಶನ್ ಶಕ್ತಿ ಕುರಿತಾಗಿ ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಟಿವಿ ಮತ್ತು ರೇಡಿಯೋದಲ್ಲಿ ಭಾಷಣ ಮಾಡಿರುವಲ್ಲಿ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ ಮತ್ತು ಆ ಮೂಲಕ ಅದು ಪ್ರಧಾನಿ ಮೋದಿಗೆ ಕ್ಲೀನ್ ಚಿಟ್ ನೀಡಿದೆ.
ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ ಎಲ್ಲಿಯೂ ತಮ್ಮ ಪಕ್ಷವನ್ನು ಉಲ್ಲೇಖೀಸಿಲ್ಲ ಮತ್ತು ತನ್ನ ಪರವಾಗಿ ಮತ ಹಾಕುವಂತೆ ಮತದಾರರನ್ನು ಕೇಳಿಕೊಂಡಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.
ಪ್ರಧಾನಿ ಮೋದಿ ಅವರು ಕಳೆದ ಬುಧವಾರ ದೇಶವನ್ನು ಉದ್ದೇಶಿಸಿ ಟಿವಿ ಮತ್ತು ರೇಡಿಯೋದಲ್ಲಿ ಮಾಡಿದ್ದ ಭಾಷಣದಲ್ಲಿ ಭಾರತವು ಉಪಗ್ರಹ ನಿಗ್ರಹ ಕ್ಷಿಪಣಿಯನ್ನು (ಎ-ಸ್ಯಾಟ್) ಯಶಸ್ವಿಯಾಗಿ ಪರೀಕ್ಷಿಸಿದೆ ಎಂದು ಹೇಳಿದ್ದರಲ್ಲದೆ ಈ ಸಾಧನೆ ಮಾಡಿರುವ ಅಮೆರಿಕ, ರಶ್ಯ ಮತ್ತು ಚೀನದ ಬಳಿಕದಲ್ಲಿ ವಿಶ್ವದ ನಾಲ್ಕನೇ ದೇಶವಾಗಿ ಭಾರತ ಮೂಡಿ ಬಂದಿದ್ದು ಈ ಅಮೋಘ ಸಾಧನೆ ಮಾಡಿರುವ ಭಾರತೀಯ ಬಾಹ್ಯಾಕಾಶ ವಿಜ್ಞಾನಿಗಳು ಅಭಿನಂದನಾರ್ಹರು ಎಂದು ಪ್ರಶಂಸಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.