Video: ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಶಾಸಕನಿಂದ ಕಪಾಳಮೋಕ್ಷ
Team Udayavani, May 13, 2024, 1:31 PM IST
ಆಂಧ್ರಪ್ರದೇಶ: ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಇಂದು ನಡೆಯುತ್ತಿದ್ದು ಮತದಾರರು ಬೆಳಿಗ್ಗೆಯಿಂದಲೇ ಮತಗಟ್ಟೆಗಳಿಗೆ ಬಂದು ತಮ್ಮ ಅಮೂಲ್ಯವಾದ ಹಕ್ಕನ್ನು ಚಲಾಯಿಸುತ್ತಿದ್ದಾರೆ. ರಾಜ್ಯದೆಲ್ಲೆಡೆ ಶಾಂತಿಯುತವಾಗಿ ಮತದಾನ ಪ್ರಕ್ರಿಯೆ ನಡೆಯುತ್ತಿದ್ದರೆ ಆಂಧ್ರಪ್ರದೇಶದಲ್ಲಿ ಮಾತನಾದ ನಡೆಯುವ ವೇಳೆ ಶಾಸಕರೊಬ್ಬರು ಮತದಾರನಿಗೆ ಕಪಾಳಮೋಕ್ಷ ಮಾಡಿದ ಘಟನೆ ವೈರಲ್ ಆಗಿದೆ.
ಆಂಧ್ರ ಪ್ರದೇಶದ ತೆನಾಲಿ ವಿಧಾನಸಭಾ ಕ್ಷೇತ್ರದಲ್ಲಿ ಘಟನೆ ನಡೆದಿದ್ದು ಇಲ್ಲಿ ಬೆಳಿಗ್ಗೆ ಏಳು ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದರು ಈ ವೇಳೆ ತೆನಾಲಿಯ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಶಾಸಕ ಎ ಶಿವಕುಮಾರ್ ಮತದಾನ ಕೇಂದ್ರಕ್ಕೆ ತಮ್ಮ ಕಾರ್ಯಕರ್ತರ ಜೊತೆ ಮತದಾನ ಮಾಡಲು ಬಂದಿದ್ದಾರೆ ಈ ವೇಳೆ ಅವರು ಸಾಲಿನಲ್ಲಿ ನಿಲ್ಲದೆ ನೇರವಾಗಿ ಕೇಂದ್ರದ ಒಳಗೆ ತೆರಳಿದ್ದಾರೆ ಇದನ್ನು ಕಂಡ ಸಾಲಿನಲ್ಲಿ ನಿಂತ್ತಿದ್ದ ಸಾಮಾನ್ಯ ಮತದಾರನೊಬ್ಬ ಶಾಸಕರಿಗೆ ಸಾಲಿನಲ್ಲಿ ನಿಂತು ಮತ ಹಾಕುವಂತೆ ಹೇಳಿದ್ದಾರೆ ಅಷ್ಟೇ ಇದಕ್ಕೆ ಕೋಪಗೊಂಡ ಶಾಸಕ ನೇರವಾಗಿ ಮತದಾರನ ಬಳಿಗೆ ಬಂದು ಕಪಾಳಮೋಕ್ಷ ಮಾಡಿದ್ದಾರೆ ಈ ವೇಳೆ ಮತದಾರನೂ ಶಾಸಕರ ಕಪಾಳಕ್ಕೆ ಹೊಡೆದಿದ್ದಾರೆ ಅದೇ ವೇಳೆ ಶಾಸಕರ ಜೊತೆಗಿದ್ದ ಇತರ ಕಾರ್ಯಕರ್ತರು ಸಾಮಾನ್ಯ ಮತದಾರನಿಗೆ ಮನಬಂದಂತೆ ಥಳಿಸಿದ್ದಾರೆ ಅಷ್ಟೋತ್ತಿಗಾಗಲೇ ಅಲ್ಲಿದ್ದ ಪೊಲೀಸರು, ಮತದಾನ ಕೇಂದ್ರದ ಸಿಬಂದಿ ಬಂದು ತಡೆದು ಹೊರಕ್ಕೆ ಕಳುಹಿಸಿದ್ದಾರೆ.
ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಶಾಸಕರ ನಡೆಗೆ ಆಕ್ರೋಶ ವ್ಯಕ್ತವಾಗಿದೆ.
Voter who objected to #Guntur District #TenaliMLA #Sivakumar jumping queue, was slapped by him & voter returned in kind; ugly show of political musclepower as the @ysrcp MLA candidate’s henchmen joined attack on voter #BoothViolence #ElectionsWithNDTV #AndhraPradeshElections2024 pic.twitter.com/Z5wK0enrWK
— Uma Sudhir (@umasudhir) May 13, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
MUST WATCH
ಹೊಸ ಸೇರ್ಪಡೆ
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರೆಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.