ಶಾಸಕನ ಕೊಲೆ: ಮುಕುಲ್ ರಾಯ್ ವಿರುದ್ಧ ಕೇಸು
Team Udayavani, Feb 11, 2019, 12:55 AM IST
ಕೋಲ್ಕತಾ: ತೃಣಮೂಲ ಕಾಂಗ್ರೆಸ್ ಶಾಸಕ ಸತ್ಯಜಿತ್ ಬಿಸ್ವಾಸ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ನಾಯಕ ಮುಕುಲ್ ರಾಯ್ ಹಾಗೂ ಇತರೆ ಮೂವರ ವಿರುದ್ಧ ದೂರು ದಾಖಲಾಗಿದೆ. ಈ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಆದರೆ, ತಮ್ಮ ಮೇಲಿನ ಆರೋಪವನ್ನು ಅಲ್ಲಗಳೆದಿರುವ ರಾಯ್, ಟಿಎಂಸಿಯೊಳಗಿನ ಆಂತರಿಕ ಕಚ್ಚಾಟದ ಪರಿಣಾಮವಾಗಿ ಬಿಸ್ವಾಸ್ ಕೊಲೆಯಾಗಿದೆಯೇ ವಿನಾ, ಅದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ನನ್ನ ವಿರುದ್ಧ ಎಫ್ಐಆರ್ ದಾಖಲಿಸಿರುವುದು ಸಂಪೂರ್ಣವಾಗಿ ರಾಜಕೀಯ ಪ್ರೇರಿತ ಕ್ರಮ ಎಂದಿದ್ದಾರೆ.
ಪ್ರಕರಣ ಸಂಬಂಧ ಮಾತನಾಡಿರುವ ಪೊಲೀಸರು, ಶಾಸಕನಿಗೆ ಗುಂಡಿಕ್ಕಲು ಬಳಸಿದ ರಿವಾಲ್ವರ್ ಪತ್ತೆಯಾಗಿದೆ. ಹಿಂಬದಿಯಿಂದ ಬಂದು ಅವರನ್ನು ಕೊಲೆ ಮಾಡಿರುವುದು ನೋಡಿದರೆ, ಇದೊಂದು ವ್ಯವಸ್ಥಿತ ಸಂಚು ಎಂಬುದು ಸ್ಪಷ್ಟವಾಗುತ್ತದೆ ಎಂದಿದ್ದಾರೆ. ಕೃಷ್ಣಗಂಜ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಬಿಸ್ವಾಸ್(41) ಅವರನ್ನು ಶನಿವಾರ ಸಂಜೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
MUST WATCH
ಹೊಸ ಸೇರ್ಪಡೆ
Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.