ಕಲಬುರ್ಗಿ ಹತ್ಯೆ: ಕರ್ನಾಟಕ, ಮಹಾರಾಷ್ಟ್ರಕ್ಕೆ ಸುಪ್ರೀಂ ನೋಟಿಸ್‌

Team Udayavani, Jan 11, 2018, 6:15 AM IST

supreme-court-800.jpg

ನವದೆಹಲಿ: ವಿಚಾರವಾದಿ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಕರ್ನಾಟಕ, ಮಹಾರಾಷ್ಟ್ರ,ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಹಾಗೂ ಸಿಬಿಐಗೆ ನೋಟಿಸ್‌ ಜಾರಿ ಮಾಡಿದೆ.

ವಿಶೇಷ ತನಿಖಾ ದಳ (ಎಸ್‌ಐಟಿ)ದಿಂದ ಪ್ರಕರಣದ ಬಗ್ಗೆ ತನಿಖೆ ನಡೆಸಲು ಆದೇಶ ನೀಡಬೇಕೆಂದು ಕೋರಿ ಕಲಬುರ್ಗಿ ಅವರ ಪತ್ನಿ ಉಮಾ ದೇವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ.ದೀಪಕ್‌ ಮಿಶ್ರಾ ನೇತೃತ್ವದ ಪೀಠ ಈ ಕ್ರಮ ಕೈಗೊಂಡಿದೆ. ಆರು ವಾರಗಳಲ್ಲಿ ಈ ಬಗ್ಗೆ ಉತ್ತರ ನೀಡುವಂತೆ ನ್ಯಾಯಪೀಠ ಆದೇಶಿಸಿದೆ.

ಮಹಾರಾಷ್ಟ್ರ ಮತ್ತು ಕರ್ನಾಟಕ ಸರ್ಕಾರಗಳು ತಮ್ಮ ಪತಿಯ ಹತ್ಯೆ ಬಗ್ಗೆ ನಡೆಸಿದ ತನಿಖೆಯಲ್ಲಿ ತೃಪ್ತಿದಾಯಕವಾಗಿರುವ ಪ್ರಗತಿ ಕಂಡು ಬಂದಿಲ್ಲ.

ಮಹಾರಾಷ್ಟ್ರದಲ್ಲಿ ನಡೆದ ವಿಚಾರವಾದಿಗಳಾದ ನರೇಂದ್ರ ದಾಭೋಲ್ಕರ್‌, ಗೋವಿಂದ ಪಾನ್ಸರೆ ಹತ್ಯೆ ಪ್ರಕರಣಕ್ಕೂ
ಸಾಮ್ಯತೆ ಇದೆ. ಧಾಬೋಲ್ಕರ್‌ ಮತ್ತು ಪಾನ್ಸರೆ ಅವರನ್ನು ಹತ್ಯೆ ಮಾಡಿದ ಪ್ರಕರಣದ ತನಿಖೆ ನಿರೀಕ್ಷಿತ ಪ್ರಗತಿ ಕಂಡಿಲ್ಲ. ಹೀಗಾಗಿ ವಿಶೇಷ ತನಿಖಾ ತಂಡದ ಮೂಲಕ ತಮ್ಮ ಪತಿ ಸಾವಿನ ಬಗ್ಗೆ ತನಿಖೆಯಾಗಬೇಕು ಎಂದು ಉಮಾದೇವಿ ಮನವಿ ಮಾಡಿಕೊಂಡಿದ್ದರು.

2016ರಲ್ಲಿ ಕರ್ನಾಟಕದ ಗೃಹ ಸಚಿವರಾಗಿದ್ದ ಡಾ.ಜಿ.ಪರಮೇಶ್ವರ್‌ ನೀಡಿದ್ದ ಹೇಳಿಕೆಯನ್ನು ಅರ್ಜಿಯಲ್ಲಿ ಉಲ್ಲೇಖೀಸಿರುವ ಉಮಾ ದೇವಿ,”ಪಾನ್ಸರೆ, ದಾಭೋಲ್ಕರ್‌ ಮತ್ತು ಕಲಬುರ್ಗಿ ಹತ್ಯೆ ನಡೆದ ಸ್ಥಳದಿಂದ ವಶಪಡಿಸಿಕೊಳ್ಳಲಾಗಿರುವ ಗುಂಡುಗಳನ್ನು ವಿಧಿ ವಿಜ್ಞಾನ ಪ್ರಯೋಗಕ್ಕೆ ಒಳಪಡಿಸಿದಾಗ ಒಂದೇ ಮಾದರಿಯದ್ದು’ ಎಂಬುದನ್ನು ತಿಳಿಸಿದ್ದಾರೆ. “ಪಾನ್ಸರೆ ಅವರನ್ನು ಹತ್ಯೆ ಮಾಡಿದ ಆಯುಧವನ್ನೇ ಕಲಬುರ್ಗಿ ಪ್ರಕರಣದಲ್ಲಿಯೂ ಬಳಕೆ ಮಾಡಲಾಗಿದೆ. ಹೀಗಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ಪೊಲೀಸರು ಸಮನ್ವಯತೆ ಯಿಂದ ತನಿಖೆ ಮಾಡಬೇಕಾಗಿದೆ. ಅದಕ್ಕೆ ಪೂರಕವಾಗಿ ಸಿಬಿಐ ಮತ್ತು ಎನ್‌ಐಎ ನಡುವೆ ಸಹಕಾರದಿಂದ ತನಿಖೆ ನಡೆಸಬೇಕು’ ಎಂದು ಅರ್ಜಿಯಲ್ಲಿ ಕೋರಿದ್ದಾರೆ.

ಟಾಪ್ ನ್ಯೂಸ್

CM DCM

Cabinet ಸರ್ಜರಿ ಸದ್ಯ ಇಲ್ಲ:ಹೈಕಮಾಂಡ್‌ ಭೇಟಿ ಬಳಿಕ ಸಿಎಂ, ಡಿಸಿಎಂ ಸ್ಪಷ್ಟನೆ

1-ani

Tamil Nadu;ಇಂದು ಅಪ್ಪಳಿಸಲಿದೆ ‘ಫೆಂಗಲ್‌’ ಚಂಡಮಾರುತ!: ಶ್ರೀಲಂಕಾದಲ್ಲಿ 12 ಸಾ*ವು

krishna bhaire

1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್‌ ಹುಕುಂ ಚೀಟಿ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ani

Tamil Nadu;ಇಂದು ಅಪ್ಪಳಿಸಲಿದೆ ‘ಫೆಂಗಲ್‌’ ಚಂಡಮಾರುತ!: ಶ್ರೀಲಂಕಾದಲ್ಲಿ 12 ಸಾ*ವು

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

CM DCM

Cabinet ಸರ್ಜರಿ ಸದ್ಯ ಇಲ್ಲ:ಹೈಕಮಾಂಡ್‌ ಭೇಟಿ ಬಳಿಕ ಸಿಎಂ, ಡಿಸಿಎಂ ಸ್ಪಷ್ಟನೆ

1-ani

Tamil Nadu;ಇಂದು ಅಪ್ಪಳಿಸಲಿದೆ ‘ಫೆಂಗಲ್‌’ ಚಂಡಮಾರುತ!: ಶ್ರೀಲಂಕಾದಲ್ಲಿ 12 ಸಾ*ವು

krishna bhaire

1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್‌ ಹುಕುಂ ಚೀಟಿ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.