14,500 ಶಾಲೆಗಳ ಉನ್ನತಿ; ಶಾಲೆಗಳ ಮೇಲ್ದರ್ಜೆಗೇರಿಸಲು ಪಿಎಂ-ಶ್ರೀ ಯೋಜನೆ
ಶಿಕ್ಷಕರ ದಿನದಂದೇ ಪ್ರಧಾನಿ ಮೋದಿಯಿಂದ ಘೋಷಣೆ
Team Udayavani, Sep 6, 2022, 7:15 AM IST
ನವದೆಹಲಿ: ಪಿಎಂ-ಶ್ರೀ (ಪ್ರಧಾನಮಂತ್ರಿ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ) ಎಂಬ ಹೊಸ ಯೋಜನೆಯಡಿ ದೇಶದ 14,500 ಶಾಲೆಗಳನ್ನು ಉನ್ನತೀಕರಿಸಿ, ಅವುಗಳನ್ನು ಮಾದರಿ ಶಾಲೆಗಳಾಗಿ ರೂಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಶಿಕ್ಷಕರ ದಿನದಂದೇ ಅವರು ಇಂಥದ್ದೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ಸೋಮವಾರ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ, “ರಾಷ್ಟ್ರೀಯ ಶಿಕ್ಷಣ ನೀತಿಯ ಅನ್ವಯ ದೇಶದ 14,500 ಪಿಎಂ-ಶ್ರೀ ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಈ ಶಾಲೆಗಳು ಆಧುನಿಕ, ಪರಿವರ್ತನೆಯ ಮತ್ತು ಸಮಗ್ರ ಶಿಕ್ಷಣವನ್ನು ಒದಗಿಸಲಿವೆ. ಆವಿಷ್ಕಾರ ಆಧರಿತ, ಕಲಿಕಾ ಕೇಂದ್ರಿತ ಬೋಧನೆಗೆ ಹೆಚ್ಚಿನ ಮಹತ್ವ ನೀಡಲಾಗುವುದು.
ಅತ್ಯಾಧುನಿಕ ತಂತ್ರಜ್ಞಾನಗಳು, ಸ್ಮಾರ್ಟ್ ತರಗತಿಗಳು, ಕ್ರೀಡೆ ಸೇರಿದಂತೆ ಹಲವಾರು ಆಧುನಿಕ ಮೂಲಸೌಕರ್ಯ ಗಳನ್ನು ಈ ಮಾದರಿ ಶಾಲೆಗಳಲ್ಲಿ ಕಲ್ಪಿಸಲಾಗುವುದು’ ಎಂದು ಹೇಳಿದ್ದಾರೆ. ಈ ಯೋಜನೆಯು ದೇಶದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲಿದೆ ಎಂದೂ ಅವರು ತಿಳಿಸಿದ್ದಾರೆ.
ಪಿಎಂ-ಶ್ರೀ ಉದ್ದೇಶ?
– ನೂತನ ಶಿಕ್ಷಣ ನೀತಿಯ ಪ್ರಯೋಗಶಾಲೆಗಳಾಗಿ ಇವು ಕಾರ್ಯನಿರ್ವಹಿಸಲಿವೆ
– ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಆವಿಷ್ಕಾರ ಆಧರಿತ, ಕಲಿಕಾ ಕೇಂದ್ರಿತ ಬೋಧನೆ
– ಆಧುನಿಕ ತಂತ್ರಜ್ಞಾನ, ಸ್ಮಾರ್ಟ್ ತರಗತಿ ಮತ್ತಿತರ ಮೂಲಸೌಕರ್ಯ ಒದಗಿಸುವುದು
– ಸಮಾನ, ಎಲ್ಲರನ್ನೊಳಗೊಂಡ, ಆನಂದದಾಯಕ ಪರಿಸರದಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.