Modi Cabinet 70 ವರ್ಷ ಮೇಲ್ಮಟ್ಟವರಿಗೆ ಇನ್ನು ಆಯುಷ್ಮಾನ್ ವಿಮೆ; 6 ಕೋಟಿ ಮಂದಿಗೆ ಲಾಭ
ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟ ಅನುಮೋದನೆ;
Team Udayavani, Sep 12, 2024, 7:05 AM IST
ಹೊಸದಿಲ್ಲಿ: ನಾಲ್ಕು ತಿಂಗಳ ಹಿಂದೆ ಘೋಷಿಸಿದಂತೆ ಕೇಂದ್ರ ಸಚಿವ ಸಂಪುಟ 70 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರನ್ನು ಆಯುಷ್ಮಾನ್ ಭಾರತ್ ವಿಮೆ ವ್ಯಾಪ್ತಿಗೆ ಸೇರಿಸಲು ಬುಧವಾರ ಅನುಮೋದನೆ ನೀಡಿದೆ.
ಪ್ರಧಾನಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. 70 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನ ಎಲ್ಲ ಹಿರಿಯ ನಾಗರಿಕರು ತಮ್ಮ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿ ಯನ್ನು ಪರಿಗಣಿಸದೆ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆ (ಎಬಿ ಪಿಎಂ ಜೆಎವೈ) ಪ್ರಯೋಜನ ಪಡೆಯಲು ಅರ್ಹ ರಾಗಿರುತ್ತಾರೆ. ಈ ಹಿರಿಯರಿಗೆ ಹೊಸ ವಿಶಿಷ್ಟ ಕಾರ್ಡ್ ನೀಡಲಾಗು ವುದು ಎಂದು ಕೇಂದ್ರ ತಿಳಿಸಿದೆ.
ಇದರಿಂದ 6 ಕೋಟಿ ಹಿರಿಯ ನಾಗರಿಕರ ಸಹಿತ 4.5 ಕೋಟಿ ಕುಟುಂಬಗಳಿಗೆ ಯೋಜನೆಯ ಲಾಭ ಸಿಗಲಿದೆ.
ಈ ಯೋಜನೆಯಡಿ 5 ಲಕ್ಷ ರೂ. ಆರೋಗ್ಯ ವಿಮೆ ನೀಡಲಾಗುತ್ತದೆ. ಈಗಾಗಲೇ ಆಯುಷ್ಮಾನ್ ಭಾರತ್ ವ್ಯಾಪ್ತಿಗೆ ಒಳಪಡುವ ಕುಟುಂಬಗಳಿಗೆ ಸೇರಿದ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರು ವರ್ಷಕ್ಕೆ 5 ಲಕ್ಷ ರೂ.ವರೆಗೆ ಹೆಚ್ಚುವರಿ ವಿಮೆ ಪಡೆಯಲಿದ್ದಾರೆ. ಇದನ್ನು ಕುಟುಂಬದ ಇತರ ಸದಸ್ಯರೊಂದಿಗೆ ಹಂಚಿಕೊಳ್ಳಲು ಅವಕಾಶವಿಲ್ಲ. ಹಾಗೆಯೇ ಖಾಸಗಿ ಆರೋಗ್ಯ ವಿಮೆ ಅಥವಾ ರಾಜ್ಯ ವಿಮೆಗಳ ಸೌಲಭ್ಯವನ್ನು ಪಡೆಯುತ್ತಿರುವ ಹಿರಿಯ ನಾಗರಿಕರು ಕೂಡ ಆಯುಷ್ಮಾನ್ ಭಾರತ್ ಲಾಭ ಪಡೆಯಲು ಅರ್ಹರಾಗಿರುತ್ತಾರೆ ಎಂದು ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.