ದೌರ್ಜನ್ಯ ತಡೆ ಹೊಸ ಕಾಯ್ದೆಗೆ ಸಂಪುಟ ಅಸ್ತು


Team Udayavani, Aug 2, 2018, 6:00 AM IST

18.jpg

ಹೊಸದಿಲ್ಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ವಿರೋಧಿ ಕಾಯ್ದೆಯನ್ನು ಬಲಪಡಿಸುವ ಸಂಬಂಧ ರೂಪಿಸಲಾಗಿರುವ ಹೊಸ ಮಸೂದೆಗೆ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿದೆ. ಈ ಮೂಲಕ ದಲಿತ ಸಂಘಟನೆಗಳ ಆಕ್ರೋಶ ತಣಿಸುವ ಕೆಲಸ ಮಾಡಿದೆ. ಆದರೆ ಆ. 9ರ ಭಾರತ ಬಂದ್‌ ಕರೆ ವಾಪಸ್‌ ತೆಗೆದುಕೊಳ್ಳಲಾಗುತ್ತದೆಯೇ ಎಂಬುದು ಇನ್ನೂ ಖಚಿತವಾಗಿಲ್ಲ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸುಪ್ರೀಂ ತೀರ್ಪಿನ ಅನಂತರ ಎಸ್‌ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಲ್ಲಿನ ಕೆಲವು ಅಂಶಗಳು ನಿಸ್ಸಾರಗೊಂಡಿದ್ದು, ಇವು ಗಳನ್ನು ಮತ್ತೆ ಕಾಯ್ದೆಯೊಳಗೆ ಸೇರಿಸಲು ಹೊಸ ಮಸೂದೆ ರಚಿಸಲಾಗಿದೆ. ಈ ಮಸೂದೆಯನ್ನು ಸದ್ಯ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲೇ ಮಂಡಿಸಲು ನಿರ್ಧರಿಸಲಾಗಿದೆ. ಇದರಂತೆ ಎಸ್‌ಸಿ/ಎಸ್ಟಿ ದೌರ್ಜನ್ಯ ವಿರೋಧಿ ಕಾಯ್ದೆಯಡಿ ಪ್ರಕರಣ ಎದುರಿಸುತ್ತಿರುವವರಿಗೆ “ಯಾವುದೇ ಕೋರ್ಟ್‌ನ ಆದೇಶದ ಹೊರತಾಗಿಯೂ’ ನಿರೀಕ್ಷಣ ಜಾಮೀನು ಅವಕಾಶ ಇರುವುದಿಲ್ಲ. ಅಲ್ಲದೆ ದೌರ್ಜನ್ಯ ಎಸಗಿ ದವರ ವಿರುದ್ಧ ಅಪರಾಧ ಪ್ರಕರಣ ದಾಖಲಿಸಲು ಯಾರ ಒಪ್ಪಿಗೆಯೂ ಬೇಕಾಗಿಲ್ಲ ಮತ್ತು ಪ್ರಾಥಮಿಕ ತನಿಖೆಯೂ ಅಗತ್ಯವಿಲ್ಲ ಎಂಬ ಅಂಶ ಸೇರಿಸಲಾಗಿದೆ.

ಕಳೆದ ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್‌ನ ನ್ಯಾ| ಆದರ್ಶ ಕುಮಾರ್‌ ಗೋಯಲ್‌ ಮತ್ತು ನ್ಯಾ| ಯು. ಯು. ಲಲಿತ್‌ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, ಎಸ್‌ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಅಧಿಕಾರಿಗಳ ವಿರುದ್ಧ ದೂರು ಬಂದ ಕೂಡಲೇ ಬಂಧಿಸಕೂಡದು ಎಂಬ ತೀರ್ಪು ನೀಡಿತ್ತು. ಇದು ದೇಶಾದ್ಯಂತ ದಲಿತ ಸಂಘಟನೆಗಳ ಆಕ್ರೋಶಕ್ಕೂ ಕಾರಣವಾಗಿ ಪ್ರತಿಭಟನೆ ನಡೆದಿತ್ತು. ಜತೆಗೆ ಹೋರಾಟದ ಸಂದರ್ಭದಲ್ಲಿ ಭಾರೀ ಹಿಂಸಾಚಾರವೂ ನಡೆದು ಉತ್ತರ ಭಾರತದಲ್ಲೇ 9 ಮಂದಿ ಸಾವಿಗೀಡಾಗಿದ್ದರು. 

ಇದಷ್ಟೇ ಅಲ್ಲ, ಈ ಕಾಯ್ದೆಯ ಕಠಿನ ಅಂಶಗಳನ್ನು ಪುನಃ ಸೇರಿಸುವಂತೆ ಕೇಂದ್ರ ಸಚಿವರಾದ ರಾಮ್‌ ವಿಲಾಸ್‌ ಪಾಸ್ವಾನ್‌ ಮತ್ತು ರಾಮದಾಸ್‌ ಅಠಾವಳೆ ಅವರ ಎಲ್‌ಜೆಪಿ, ಆರ್‌ಪಿಐ  ಪಕ್ಷಗಳು ಒತ್ತಾಯಿಸಿದ್ದವು. ಜತೆಗೆ ಸ್ವತಃ ಬಿಜೆಪಿಯಲ್ಲಿನ ದಲಿತ ಸಮುದಾಯದ ಸಂಸದರೂ ಈ ಬಗ್ಗೆ ಒತ್ತಡ ತಂದಿದ್ದರು. ಜತೆಗೆ ಆ.9ರಂದು ಭಾರತ್‌ ಬಂದ್‌ಗೆ ದಲಿತ ಸಂಘಟನೆಗಳು ಕರೆ ನೀಡಿದ್ದವು.

ರಾಜನಾಥ್‌ ನೇತೃತ್ವದಲ್ಲಿ ಸಮಿತಿ: ದಲಿತ ಸಂಘಟನೆಗಳ ಕೋಪ ಹೆಚ್ಚಾದ ಮತ್ತು ಸರಕಾರದ ಒಳಗೇ ಹೆಚ್ಚಿನ ಒತ್ತಡ ಕೇಳಿ ಬಂದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಗೃಹ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದಲ್ಲಿ ಸಚಿವರ ಸಮಿತಿ ನೇಮಕ ಮಾಡಿತ್ತು. ಈ ಸಮಿತಿ ಅಧ್ಯಯನ ನಡೆಸಿ ಈಗ ಹೊಸ ಅಂಶಗಳನ್ನು ಸೇರಿಸಿದೆ.

ಭಾರತ್‌ ಬಂದ್‌ ಕಥೆ ಏನು?
ದೇಶದ ಹಲವಾರು ದಲಿತ ಸಂಘ ಟನೆಗಳು ಈ ಕಾಯ್ದೆಯನ್ನು ನಿಸ್ಸಾರ ಗೊಳಿಸಿರುವುದನ್ನು ವಿರೋಧಿಸಿ ಆ.9ಕ್ಕೆ ದೇಶವ್ಯಾಪಿ ಭಾರತ್‌ ಬಂದ್‌ ನಡೆಸಲು ಕರೆ ನೀಡಿವೆ. ಈಗ ಕೇಂದ್ರ ಸರಕಾರ ಹೊಸ ಮಸೂದೆ ರೂಪಿಸಿರುವುದರಿಂದ ಪಾಸ್ವಾನ್‌ ಅವರ ಎಲ್‌ಜೆಪಿ ಕರೆ ನೀಡಿದ್ದ ಬಂದ್‌ ಸಂಭ್ರಮಾಚರಣೆಯಾಗಿ ಬದಲಾಗಲಿದೆ. ಆದರೆ ಉಳಿದ ದಲಿತ ಸಂಘಟನೆಗಳು ಯಾವ ನಿರ್ಧಾರ ತೆಗೆದುಕೊಳ್ಳಲಿವೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ.

ಇದೊಂದು ಐತಿಹಾಸಿಕ ದಿನ. ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್‌ ಸಭೆಯಲ್ಲಿ ಹೊಸ ಮಸೂದೆಗೆ ನಿರ್ಧರಿಸಲಾಗಿದೆ. ಪಕ್ಷ ಕರೆ ನೀಡಿದ್ದ ಆ.9ರ ಬಂದ್‌ ಅನ್ನು ಸಂಭ್ರಮಾಚರಣೆ ದಿನವನ್ನಾಗಿ ಪರಿವರ್ತಿಸುತ್ತೇವೆ. ಅಗತ್ಯಬಿದ್ದರೆ ಈ ಕಾಯ್ದೆಯನ್ನು ಇನ್ನಷ್ಟು ಬಲಪಡಿಸಿ ಎಂದೂ ಮೋದಿ ಹೇಳಿದ್ದಾರೆ.
- ರಾಮ್‌ ವಿಲಾಸ್‌ ಪಾಸ್ವಾನ್‌, ಕೇಂದ್ರ ಸಚಿವ

ಟಾಪ್ ನ್ಯೂಸ್

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.