ಸ್ವಚ್ಛತೆಗೆ ಮೋದಿ “ಪತ್ರ’ದ ಕರೆ
Team Udayavani, Sep 19, 2017, 7:55 AM IST
ನವದೆಹಲಿ: ಈಗಾಗಲೇ ದೇಶದಲ್ಲಿ “ಸ್ವಚ್ಛತೆಯೇ ಸೇವೆ’ ಅಭಿಯಾನಕ್ಕೆ ಚಾಲನೆ ಸಿಕ್ಕಿದೆ. ಇದೀಗ ಸ್ವಚ್ಛ ಭಾರತ ಅಭಿಯಾನಕ್ಕೆ “ತಾರಾ ಮೆರಗು’ ಸಿಗಲಿರುವ ಸುದ್ದಿಯೊಂದು ಹೊರಬಿದ್ದಿದೆ.
ಪ್ರಧಾನಿ ಮೋದಿ ಅವರ ಸ್ವತ್ಛ ಭಾರತ ಯೋಜನೆಗೆ 3 ವರ್ಷಗಳು ತುಂಬಿವೆ. ಆದರೆ ಅಭಿಯಾನ ನಿರೀಕ್ಷಿಸಿದ ಮಟ್ಟಿಗೆ ಯಶಸ್ವಿಯಾಗಿಲ್ಲ. ಹೀಗಾಗಿ ಸಿನಿಮಾ, ಕ್ರೀಡೆ, ಕೈಗಾರಿಕೆ ಸೇರಿದಂತೆ ದೇಶದ ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ಪ್ರತಿಷ್ಠಿತ ಹಾಗೂ ಪ್ರಭಾವಿ ಸೆಲೆಬ್ರಿಟಿಗಳಿಗೆ ಪತ್ರ ಬರೆದಿರುವ ಪ್ರಧಾನಿ ಮೋದಿ, “ಸ್ವಚ್ಛತಾ ಹೀ ಸೇವಾ’ (ಸ್ವಚ್ಛತೆಯೇ ಸೇವೆ) ಅಭಿಯಾನವನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.
ಈ ಕುರಿತು ಸೆಲೆಬ್ರಿಟಿಗಳಿಗೆ ಚಿಕ್ಕದಾಗಿ, ಚೊಕ್ಕವಾಗಿ ಮೋದಿ ಪತ್ರ ಬರೆದಿದ್ದಾರೆ. ಸ್ವತ್ಛತೆ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಹೃದಯಕ್ಕೆ ಹತ್ತಿರವಾಗಿದ್ದ ಆಶಯವಾಗಿತ್ತು ಎಂಬುದು ಈ ಪತ್ರದ ಸಾರವಾಗಿದೆ. “ಪೀಳಿಗೆಯಿಂದ ಪೀಳಿಗೆಗೆ ದೇಶದ ಜನರ ಪ್ರೇರಕ ಶಕ್ತಿಯಾಗಿರುವ ಮಹಾತ್ಮಾ ಗಾಂಧಿಯವರು ಹೇಳಿರುವಂತೆ ಸ್ವಚ್ಛತೆ ಬಗ್ಗೆ ನಾವು ಹೊಂದಿರುವ ಬದ್ಧತೆ ಸಮಾಜದ ಬಗ್ಗೆ ನಾವು ಹೊಂದಿರುವ ಭಾವನೆಯನ್ನು ಬಿಂಬಿಸುತ್ತದೆ. ಸಮುದಾಯದ ಪಾಲ್ಗೊಳ್ಳುವಿಕೆಯಿಂದ ಸ್ವತ್ಛ ದೇಶವನ್ನು ನಿರ್ಮಿಸುವ ಕಾರ್ಯದಲ್ಲಿ ಬಾಪು ನಂಬಿಕೆ ಹೊಂದಿದ್ದರು,’ ಎಂದು ಪತ್ರದಲ್ಲಿ ಪ್ರಧಾನಿ ಉಲ್ಲೇಖೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.