ಬಿಷ್ಕೇಕ್‌ನಲ್ಲಿ ಮೋದಿ ಖಾನ್ ಭೇಟಿ ಇಲ್ಲ
Team Udayavani, Jun 7, 2019, 6:15 AM IST
ನವದೆಹಲಿ: ಕಿರ್ಗಿಸ್ತಾನ ರಾಜಧಾನಿ ಬಿಷ್ಕೇಕ್‌ನಲ್ಲಿ 13, 14ರಂದು ನಡೆಯಲಿರುವ ಶಾಂಘೈ ಸಹಕಾರ ಒಕ್ಕೂಟ ಸಭೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕಿಸ್ತಾನ ಪ್ರಧಾನಿ ಇಮ್ರಾನ್‌ಖಾನ್ ನಡುವೆ ದ್ವಿಪಕ್ಷೀಯ ಮಾತುಕತೆ ನಿಗದಿಯಾಗಿಲ್ಲ. ಹೀಗೆಂದು ವಿದೇಶಾಂಗ ಇಲಾಖೆ ವಕ್ತಾರ ರವೀಶ್‌ಕುಮಾರ್ ಗುರುವಾರ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿರುವ ಅಂಶಗಳಲ್ಲಿ ಸತ್ಯಾಂಶವಿಲ್ಲ. ಬಿಷ್ಕೇಕ್‌ನಲ್ಲಿ ನಮ್ಮ ಪ್ರಧಾನಿ ಮತ್ತು ಪಾಕಿಸ್ತಾನದ ಪ್ರಧಾನಿಯವರ ಜತೆಗೆ ದ್ವಿಪಕ್ಷೀಯ ಮಾತುಕತೆ ನಿಗದಿಯಾಗಿಲ್ಲ ಎಂದು ಹೇಳಿದ್ದಾರೆ.
ನವದೆಹಲಿಯಲ್ಲಿ ಪಾಕಿಸ್ತಾನದ ಹೈಕಮಿಷನರ್ ಆಗಿದ್ದ ಸೊಹೈಲ್ ಮೊಹಮ್ಮದ್ ನವದೆಹಲಿಗೆ ಬುಧವಾರ ಖಾಸಗಿ ಭೇಟಿ ನಿಮಿತ್ತ ಆಗಮಿಸಿದ್ದು ಮೋದಿ-ಖಾನ್ ಭೇಟಿ ನಡೆಯಲಿದೆ ಎಂದು ಊಹಾಪೋಹಗಳು ಎದ್ದಿದ್ದವು. ಇದರ ಜತೆಗೆ ಬಿಷ್ಕೇಕ್‌ನಲ್ಲಿ ಪಾಕ್ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ಮತ್ತು ವಿದೇಶಾಂಗ ಸಚಿವೆಯಾಗಿದ್ದ ಸುಷ್ಮಾ ಸ್ವರಾಜ್ ಜತೆಗೆ ಯಾವುದೇ ರೀತಿಯ ಮಾತುಕತೆಗಳು ನಡೆದಿಲ್ಲ ಎಂದು ರವಿಕುಮಾರ್ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.