Census: ನಾಲ್ಕೈದು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜನಗಣತಿ ಮುಂದಿನ ತಿಂಗಳಿಂದಲೇ ಆರಂಭ?
- 2021ರಲ್ಲೇ ನಡೆಯಬೇಕಿದ್ದ ಕಾರ್ಯ ಕೊರೊನಾದಿಂದ ಮುಂದೂಡಿಕೆ
Team Udayavani, Aug 22, 2024, 7:30 AM IST
ನವದೆಹಲಿ: ನಾಲ್ಕೈದು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜನ ಗಣತಿಯನ್ನು ಭಾರತ ಸರ್ಕಾರವು ಮುಂದಿನ ತಿಂಗಳು ಅಂದರೆ ಸೆಪ್ಟೆಂಬರ್‌ನಲ್ಲಿ ಆರಂಭಿಸುವ ಸಾಧ್ಯತೆಗಳಿವೆ. ಈ ಜನಗಣತಿ ನಡೆಸಲು ಸುಮಾರು 18 ತಿಂಗಳು ಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಪ್ರತಿ 10 ವರ್ಷಗಳಿಗೊಮ್ಮೆ ನಡೆಯುವ ಜನ ಗಣತಿಯನ್ನು 2021ರಲ್ಲಿ ನಡೆಸಬೇಕಿತ್ತು. ಆದರೆ, ಕೋವಿಡ್-19 ಸಾಂಕ್ರಾಮಿಕದಿಂದಾಗಿ ಮುಂದೂಡಲಾಗಿತ್ತು.
ಸರ್ಕಾರವು ತನ್ನ ಕಾರ್ಯಕ್ರಮಗಳಿಗೆ 2011ರ ಜನ ಗಣತಿಯ ಅಂಕಿಸಂಖ್ಯೆಗಳನ್ನೇ ಆಧಾರವಾಗಿ ಬಳಸುತ್ತಿದೆ. ಆದರೆ, ಸರ್ಕಾರದ ಒಳಗಿನ ಮತ್ತು ಹೊರಗಿನ ಆರ್ಥಿಕ ತಜ್ಞರು, ಜನಗಣತಿಗೆ ವಿಳಂಬ ಮಾಡುತ್ತಿರುವುದಕ್ಕಿ ಸರ್ಕಾರವನ್ನು ಟೀಕಿಸಿದ್ದಾರೆ. ಸರಿಯಾದ ಅಂಕಿ ಸಂಖ್ಯೆಗಳ ಕೊರತೆಯಿಂದಾಗಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ ತೊಂದರೆಯಾಗಲಿದೆ. ಅಲ್ಲದೇ, ಆರ್ಥಿಕ ದತ್ತಾಂಶ, ಹಣದುಬ್ಬರ ಮತ್ತು ಉದ್ಯೋಗ ಅಂದಾಜು ಸೇರಿದಂತೆ ಇನ್ನೂ ಅನೇಕ ಅಂಕಿ ಸಂಖ್ಯೆಗಳ ಮಾಹಿತಿ ಕೊರತೆ ಎದುರಾಗಿದೆ. ಜನಗಣತಿಯ ನೇತೃತ್ವವನ್ನು ಕೇಂದ್ರ ಗೃಹ ಇಲಾಖೆ ಹೊತ್ತುಕೊಳ್ಳಲಿದೆ. 2026ರ ಮಾರ್ಚ್‌ನಲ್ಲಿ ಜನಗಣತಿ ವರದಿ ಬಿಡುಗಡೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.