Pakistan ಶೃಂಗಸಭೆಗೆ ಮೋದಿಗೆ ಆಹ್ವಾನ: ಹೋಗೋದು ಡೌಟು
Team Udayavani, Aug 26, 2024, 6:30 AM IST
ಹೊಸದಿಲ್ಲಿ: ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಸಭೆಯಲ್ಲಿ ಪಾಲ್ಗೊಳ್ಳಲು ಪಾಕಿಸ್ಥಾನ ಸರಕಾರವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿದೆ. ಅಕ್ಟೋಬರ್ 15ರಿಂದ 16ರ ವರೆಗೆ ನಡೆಯಲಿರುವ ಈ ಸಭೆಗೆ ಪ್ರಧಾನಿ ಮೋದಿ ಅವರು ಗೈರು ಹಾಜರಾಗುವ ಸಾಧ್ಯತೆಗಳೇ ಹೆಚ್ಚು ಎನ್ನಲಾಗುತ್ತಿದೆ.
ಸರಕಾರಗಳ ಮುಖ್ಯಸ್ಥರ ಸಮಿತಿ(ಸಿಎಚ್‌ಜಿ) ಸಭೆಯಾಗಿರುವ ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರು ಹೋಗುವುದಿಲ್ಲ ಎಂಬುದು ಬಹುತೇಕ ನಿಶ್ಚಿತ. ಆದರೆ ಪಾಕಿಸ್ಥಾನಕ್ಕೆ ತಮ್ಮ ಪ್ರತಿನಿಧಿಯನ್ನು ಕಳುಹಿಸುತ್ತಾರೆಯೇ ಕಾದು ನೋಡಬೇಕು ಎನ್ನುತ್ತಿದ್ದಾರೆ ತಜ್ಞರು. ಪ್ರಸಕ್ತ ಸಾಲಿನ ಶಾಂಘೈ ಸಹಕಾರ ಸಂಘಟನೆಯ ಸಿಎಚ್‌ಜಿ ಸಭೆಯ ಆತಿಥ್ಯವನ್ನು ಪಾಕಿಸ್ಥಾನವು ವಹಿಸಿಕೊಂಡಿದೆ. ಕಜಕಿಸ್ಥಾನ ಹೊರತು ಪಡಿಸಿ, ಶಾಂಘೈ ಸಹಕಾರ ಸಂಘಟನೆಯ ಸಭೆಗಳಲ್ಲಿ ಮೋದಿ ಭಾಗವಹಿಸುತ್ತಾ ಬಂದಿದ್ದಾರೆ. ಸರಕಾರಗಳ ಮುಖ್ಯಸ್ಥರು ಭಾಗವಹಿಸಲು ಸಾಧ್ಯವಾಗದಿದ್ದರೆ ಅವರು ತಮ್ಮ ಪ್ರತಿನಿಧಿಯನ್ನು ನಾಮನಿರ್ದೇಶನ ಮಾಡಲು ಅವಕಾಶವಿದೆ. ಬಿಷೆRàಕ್‌ನಲ್ಲಿ ಕಳೆದ ವರ್ಷದ ನಡೆದ ಸಭೆಯಲ್ಲಿ ಮೋದಿ ಅವರ ಬದಲಾಗಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.