ಮೋದಿ ಸಪ್ತಸೂತ್ರ: ಕನಸುಗಳನ್ನು ಬಿಚ್ಚಿಟ್ಟ ಪ್ರಧಾನಿ ಮೋದಿ
Team Udayavani, Jun 16, 2019, 5:30 AM IST
ನವದೆಹಲಿ: ”ಭಾರತದ ಆರ್ಥಿಕತೆಯನ್ನು 2024ರ ಹೊತ್ತಿಗೆ 350 ಲಕ್ಷ ಕೋಟಿ ರೂ. (5 ಟ್ರಿಲಿಯನ್ ಡಾಲರ್)ಗಳಿಗೆ ಮುಟ್ಟಿಸುವುದು ದೊಡ್ಡ ಸವಾಲಿನ ಕೆಲಸ. ಆದರೆ, ಅದು ಅಸಾಧ್ಯವೇನಲ್ಲ.”
ಇದು ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿತ್ವ ಹಾಗೂ ಮಹತ್ವಾಕಾಂಕ್ಷೆಯ ಮಾತು.
ಶನಿವಾರ, ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾಗಿದ್ದ ನೀತಿ ಆಯೋಗದ ಮಹತ್ವದ 5ನೇ ಆಡಳಿತ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ತಮ್ಮ ಸರ್ಕಾರದ ಗುರಿಗಳು ಹಾಗೂ ಭವ್ಯ ಭಾರತವನ್ನು ಕಟ್ಟಲು ತಾವು ಹೊಂದಿರುವ ಕನಸುಗಳನ್ನು ಬಿಚ್ಚಿಟ್ಟ ಅವರು, ಅದಕ್ಕೆ ಸೂಕ್ತ ಮಾರ್ಗಸೂಚಿಗಳನ್ನು ನೀಡಿದರು.
ತಮ್ಮ ಸರ್ಕಾರದ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್’ ಮೂಲಮಂತ್ರವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ನೀತಿ ಆಯೋಗ ಸೇರಿದಂತೆ ಎಲ್ಲಾ ರಾಜ್ಯ ಸರ್ಕಾರಗಳು ಈ ಸಾಧನೆ ಸಾಕಾರಕ್ಕೆ ಸಹಾಯ ಮಾಡಬೇಕೆಂದು ಮನವಿ ಮಾಡಿದರು. ಜತೆಗೆ, ದೇಶದ ನಾಗರಿಕರೆಲ್ಲರೂ ಪರಸ್ಪರ ಕೈಜೋಡಿಸಿದಲ್ಲಿ ದೇಶದಲ್ಲಿನ ಬಡತನ, ನಿರುದ್ಯೋಗ, ಬರ, ನೆರೆ, ಮಾಲಿನ್ಯ, ಭ್ರಷ್ಟಾಚಾರ ಹಾಗೂ ಹಿಂಸಾಚಾರದಂಥ ಪಿಡುಗುಗಳನ್ನು ನಿರ್ಮೂಲನೆ ಮಾಡಬಹುದು ಎಂದು ಆಶಿಸಿದರು.
ಅಂದಹಾಗೆ, ಕೇಂದ್ರದಲ್ಲಿ ಮೋದಿ ಸರ್ಕಾರ ಪುನಃ ಅಧಿಕಾರಕ್ಕೆ ಬಂದ ನಂತರ ನಡೆದ ನೀತಿ ಆಯೋಗದ ಮೊದಲ ಸಭೆ ಇದು.
ಮೂವರು ಸಿಎಂಗಳು ಗೈರು: ನೀತಿ ಆಯೋಗದ ಸಭೆಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಹಾಗೂ ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಗೈರಾಗಿದ್ದರು. ಬಿಡುವಿಲ್ಲದ ಕಾರ್ಯಕ್ರಮಗಳಿಂದಾಗಿ ಚಂದ್ರಶೇಖರ್ ಗೈರಾಗಿದ್ದರು. ಅಮರಿಂದರ್ ಆರೋಗ್ಯ ಸರಿಯಿಲ್ಲದ ಕಾರಣ ಪ್ರತಿನಿಧಿ ಕಳುಹಿಸಿದ್ದರು. ಮಮತಾ ಅವರು ನೀತಿ ಆಯೋಗಕ್ಕೆ ಅಧಿಕಾರ ತೆಗೆದುಕೊಳ್ಳುವ ಶಕ್ತಿಯೇ ಇಲ್ಲ ಎಂದು ಹೇಳಿ ಗೈರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ಮುಂದುವರಿದ ಕರಡಿಗಳ ಹಾವಳಿ; ಸ್ಥಳೀಯರಲ್ಲಿ ತೀವ್ರ ಆತಂಕ
New Year:ಹೊಸ ವರುಷ-ಹೊಸ ಹರುಷ 2025:ಕಾಲಚಕ್ರ ಮತ್ತೆ ತಿರುಗಿದೆ…ಹೊಸತು ಕಾಯುತ್ತಿದೆ!
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.