ನ್ಯಾಯಾಲಯದ ಮೇಲೆ ವಿಶ್ವಾಸವಿಡಿ ರಾಮಮಂದಿರ ಕುರಿತು ಮೋದಿ ನುಡಿ
Team Udayavani, Sep 20, 2019, 5:01 AM IST
ನಾಸಿಕ್: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಗುರುವಾರ ನಡೆದ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ವಿಚಾರ ವನ್ನು ಪ್ರಸ್ತಾವಿಸಿದ್ದು, “ರಾಮಮಂದಿರ ವಿವಾದದ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ನಡೆಯುತ್ತಿದೆ. ನ್ಯಾಯಾಲಯದ ಮೇಲೆ ವಿಶ್ವಾಸವಿಡಿ’ ಎಂದಿದ್ದಾರೆ.
ಮಿತ್ರಪಕ್ಷ ಶಿವಸೇನೆಯ ಹೆಸರೆತ್ತದೇ ಆ ಪಕ್ಷದ ನಾಯಕರ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ ಅವರು, “ರಾಮಮಂದಿರದ ವಿಚಾರದಲ್ಲಿ ಕೆಲವು ದೊಡ್ಡ ಬಾಯಿಯವರ ಹೇಳಿಕೆಗಳನ್ನು ಗಮನಿಸಿದರೆ ನನಗೆ ಆಶ್ಚರ್ಯವಾಗುತ್ತದೆ. ಇವರೆಲ್ಲ ಎಲ್ಲಿಂದ ಬಂದರು? ದೇಶದ ಪ್ರತಿಯೊಬ್ಬರೂ ಸರ್ವೋಚ್ಚ ನ್ಯಾಯಾಲಯವನ್ನು ಗೌರವಿ ಸುತ್ತಾರೆ. ಈಗ ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸುತ್ತಿದೆ. “ದೊಡ್ಡ ದಾಗಿ ಮಾತನಾಡುವ ವ್ಯಕ್ತಿ’ಗಳಿಗೆ ನಾನು ಕೈಮುಗಿದು ಕೇಳಿಕೊಳ್ಳುವುದಿಷ್ಟೆ- ದಯ ವಿಟ್ಟು ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಯಿಡಿ’ ಎಂದಿದ್ದಾರೆ. ಸೋಮವಾರ ವಷ್ಟೇ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದ ಕಾನೂನು ತರುವ ದಿಟ್ಟ ನಿರ್ಧಾರವನ್ನು ಕೇಂದ್ರ ಸರಕಾರ ಕೈಗೊಳ್ಳಲಿ ಎಂದು ಹೇಳಿದ್ದರು.
100 ದೇಶಗಳಿಗೆ ರಫ್ತು: ರಾಷ್ಟ್ರೀಯ ಭದ್ರತೆ ವಿಚಾರವನ್ನು ಹಿಂದಿನ ಯುಪಿಎ ಸರಕಾರ ಗಂಭೀರವಾಗಿ ಪರಿಗಣಿಸಿಯೇ ಇಲ್ಲ ಎಂದೂ ಆರೋಪಿಸಿರುವ ಪ್ರಧಾನಿ ಮೋದಿ, ಭದ್ರತಾ ಪಡೆಗಳು 2009ರಲ್ಲಿ 1.86 ಲಕ್ಷ ಬುಲೆಟ್ ಪ್ರೂಫ್ ಜಾಕೆಟ್‌ಗಳನ್ನು ನೀಡುವಂತೆ ಬೇಡಿಕೆಯಿಟ್ಟಿದ್ದವು. ಆದರೆ, ಕಾಂಗ್ರೆಸ್ ನೇತೃತ್ವದ ಸರಕಾರ ಅದಕ್ಕೆ ಕಿವಿಗೊಡಲೇ ಇಲ್ಲ. ಆದರೆ, ನಮ್ಮ ಸರಕಾರ ಅಧಿಕಾರಕ್ಕೆ ಬಂದ ಅನಂತರ, ಭದ್ರತಾ ಪಡೆಗಳ ಬೇಡಿಕೆಯನ್ನು ಈಡೇರಿಸಿದ್ದು ಮಾತ್ರವಲ್ಲ, ಈಗ ನಮ್ಮ ದೇಶದಲ್ಲೇ ತಯಾರಾದ ಬುಲೆಟ್ ಪ್ರೂಫ್ ಜಾಕೆಟ್‌ಗಳನ್ನು 100ರಷ್ಟು ದೇಶಗಳಿಗೆ ರಫ್ತು ಮಾಡಲಾಗುತ್ತಿದೆ ಎಂದಿದ್ದಾರೆ.
ಇದೇ ವೇಳೆ, ಇತ್ತೀಚೆಗೆ 50 ಕೋಟಿ ಜಾನುವಾರುಗಳಿಗೆ ಲಸಿಕೆ ನೀಡುವ ಕಾರ್ಯಕ್ರಮವನ್ನು ರಾಜಕೀಯ ನಡೆ ಎಂದು ಟೀಕಿಸಿದ್ದವರಿಗೆ ತಿರುಗೇಟು ನೀಡಿದ ಮೋದಿ, “ಜಾನುವಾರುಗಳೇನೂ ವೋಟು ಹಾಕಲ್ಲ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
MUST WATCH
ಹೊಸ ಸೇರ್ಪಡೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.