ಹೊಳಪು ಕಳೆದುಕೊಳ್ಳದ ಮೋದಿ ಮೋಡಿ


Team Udayavani, May 25, 2019, 6:10 AM IST

holapu

ಮಣಿಪಾಲ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರ ಪ್ರಚಾರ ವೈಖರಿಗೆ ಜನ ಮನಸೋತಿರುವುದು ಮತ್ತೂಮ್ಮೆ ಸಾಬೀತಾಗಿದೆ.
ಸಾಮಾನ್ಯವಾಗಿ ರಾಜಕೀಯ ಪರಿಭಾಷೆಯಲ್ಲಿ ಹೇಳುವ ಮಾತಿದೆ. “ಸಮಾವೇಶಗಳಲ್ಲಿ ಸೇರೋ ಜನ ನೋಡಿಕೊಂಡು ಮತಗಳನ್ನು ಲೆಕ್ಕ ಹಾಕಬಾರದು. ಸಮಾವೇಶದಲ್ಲಿ ಬಂದ ಸಂಖ್ಯೆಯೆಲ್ಲ ಮತಗಳಾಗಿ ಪರಿವರ್ತಿತವಾಗುವುದಿಲ್ಲ. ಸಮಾವೇಶಕ್ಕೆ ಬರೋರೇ ಬೇರೆ. ಮತ ಹಾಕೋರೇ ಬೇರೆ’ ಎಂಬುದಕ್ಕೆ ತದ್ವಿರುದ್ಧವಾದ ರೀತಿ ಮೋದಿಯವರ ರ್ಯಾಲಿಗಳು ಎಂಬುದು ಸ್ಪಷ್ಟವಾಗಿದೆ.

114 ರಲ್ಲಿ ಯಶಸ್ವಿ
ಈ ಬಾರಿಯ ಚುನಾವಣೆಯಲ್ಲಿ ಮೋದಿ ಅವರು ಒಟ್ಟು 142 ಲೋಕಸಭಾ ಕ್ಷೇತ್ರಗಳಲ್ಲಿ ರ್ಯಾಲಿಗಳಲ್ಲಿ ಭಾಗವಹಿಸಿ ಭಾಷಣ ಮಾಡಿದ್ದರು. ಬಹುತೇಕ ರ್ಯಾಲಿಗಳಲ್ಲಿ ಕಿಕ್ಕಿರಿದ ಜನಸ್ತೋಮವಿತ್ತು. ಉದಾ ಹರಣೆಗೆ ಮಂಗಳೂರಿನಲ್ಲಿ ಲಕ್ಷಾಂತರ ಮಂದಿ ಸೇರಿದ್ದರು. ಇದರೊಂದಿಗೆ ಕೆಲವೆಡೆ ರೋಡ್‌ ಷೋಗಳನ್ನೂ ನಡೆಸಿದ್ದರು. ಆದಕ್ಕೂ ಸೇರಿದ ಜನರ ಲೆಕ್ಕ ದೊಡ್ಡದು. ವಿಶೇಷವೆಂದರೆ ಹೀಗೆ ರ್ಯಾಲಿ ಮಾಡಿದ 142 ರಲ್ಲಿ 114 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ.

ಮತ್ತೂಂದು ವಿಶೇಷ ಸಂಗತಿಯೆಂದರೆ, ಈ ರ್ಯಾಲಿಗಳಲ್ಲಿ ಮೂರನೇ ಒಂದರಷ್ಟು ರ್ಯಾಲಿಗಳು ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಲದಲ್ಲಿ ಸಂಘಟಿಸಲಾಗಿತ್ತು. ಈ ಎರಡು ರಾಜ್ಯಗಳಲ್ಲಿ ನಿರೀಕ್ಷೆಗಿಂತಲೂ ಅಧಿಕ ಲೋಕಸಭಾ ಕ್ಷೇತ್ರ ಗಳನ್ನು ಕಮಲ ಪಾಳಯ ತನ್ನ ಬುಟ್ಟಿಗೆ ಸೇರಿಸಿಕೊಂಡಿದೆ. ಉತ್ತರ ಪ್ರದೇಶದಲ್ಲಿ ಹಿಂದಿನ ಬಾರಿ 72 ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ ಆ ಸಂಖ್ಯೆ 62 ಕ್ಕೆ ಇಳಿದಿರಬಹುದು. ಆದರೆ, ಎಸ್‌ಪಿ ಮತ್ತು ಬಿಎಸ್‌ಪಿ ಮೈತ್ರಿ ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಮತ್ತಷ್ಟು ಸಂಖ್ಯೆ ಕಳೆದುಕೊಳ್ಳುವ ಭೀತಿ ಎದುರಿಸಿತ್ತು. ಆದರೆ ಮೋದಿಯವರ ರ್ಯಾಲಿ ಪ್ರಭಾವದಿಂದ ಹೆಚ್ಚಿನ ಡ್ಯಾಮೇಜ್‌ ತಡೆಯುವಲ್ಲಿ ಯಶಸ್ವಿಯಾಯಿತು. ಉತ್ತರ ಪ್ರದೇಶದಲ್ಲಿ ಮೋದಿ ಅವರು 30 ಕ್ಷೇತ್ರಗಳಲ್ಲಿ ರ್ಯಾಲಿ ಮಾಡಿದ್ದು, ಅವುಗಳಲ್ಲಿ 23 ಕ್ಷೇತ್ರಗಳನ್ನು ಬಿಜೆಪಿ ಗೆದ್ದಿದೆ.

ಮಧ್ಯಪ್ರದೇಶ/ ಬಿಹಾರದಲ್ಲಿ ಶೇ. 100
ಮಧ್ಯಪ್ರದೇಶದಲ್ಲಿ ಮೋದಿ ಅವರು 11 ಲೋಕಸಭಾ ಕ್ಷೇತ್ರಗಳಲ್ಲಿ ರ್ಯಾಲಿಗಳನ್ನು ಮಾಡಿದ್ದರು. ಅವುಗಳಲ್ಲಿ ಎಲ್ಲಾ 11 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಸಂಸತ್‌ ಪ್ರವೇಶಿಸಿದ್ದಾರೆ. ಬಿಹಾರದಲ್ಲೂ ಮೋದಿ ಮತ್ತು ನಿತೀಶ್‌ ಪ್ರಚಾರ ನಡೆಸಿದ ಅಷ್ಟೂ ಕ್ಷೇತ್ರಗಳಲ್ಲಿ ಮೈತ್ರಿ ಗೆಲುವಿನ ನಗೆ ಬೀರಿದೆ. ಮೋದಿಯವರು ರ್ಯಾಲಿ ನಡೆಸಿದ ಅಸ್ಸಾಂನ 3, ಗುಜರಾತ್‌ ಮತ್ತು ಮಹಾರಾಷ್ಟ್ರದ 16 ಕ್ಷೇತ್ರಗಳಲ್ಲೂ ಬಿಜೆಪಿ ಜಯ ಸಾಧಿಸಿದೆ. ಇದರೊಂದಿಗೆ ಚತ್ತೀಸ್‌ಗಡ್‌, ಜಾರ್ಖಂಡ್‌ ಪ್ರಾಂತ್ಯಗಳಲ್ಲೂ ಬಿಜೆಪಿಗೆ
ಅಚ್ಚರಿ ಎನ್ನುವಷ್ಟು ಬೆಂಬಲ ಸಿಕ್ಕಿದೆ.

 ಪಶ್ಚಿಮಬಂಗಾಲ ಶೇ. 50
ಮೋದಿ ಅವರು ಪಶ್ಚಿಮ ಬಂಗಾಲದ ಒಟ್ಟು 16 ಕ್ಷೇತ್ರ ಗಳಲ್ಲಿ ಪ್ರಚಾರ ಮಾಡಿದ್ದರು. ಅವುಗಳಲ್ಲಿ 8 ಕ್ಷೇತ್ರ ಗಳಲ್ಲಿ ಬಿಜೆಪಿ ಗೆದ್ದಿದೆ. ಈ ಪೈಕಿ ಒಡಿಸ್ಸಾದಲ್ಲಿ ಮೋದಿ ಪ್ರಚಾರ ನಡೆಸಿದ 8 ಕ್ಷೇತ್ರಗಳ ಪೈಕಿ 5ರಲ್ಲಿ ಬಿಜೆಪಿ ಗೆದ್ದಿದೆ.

ಟಾಪ್ ನ್ಯೂಸ್

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.