ಉತ್ತರ ಭಾರತದಲ್ಲಿ ಮುಂಗಾರು ಪ್ರಭಾವ ಇನ್ನೂ ಮುಂದುವರಿಕೆ
Team Udayavani, Sep 15, 2019, 11:00 PM IST
ನವದೆಹಲಿ: ಉತ್ತರ ಭಾರತದಲ್ಲಿ ಇನ್ನೂ ಮುಂಗಾರು ಪ್ರಭಾವ ಕಡಿಮೆಯಾಗುವ ಲಕ್ಷಣ ಗೋಚರಿಸುತ್ತಿಲ್ಲ. ಇನ್ನೂ ಕೆಲವು ದಿನಗಳವರೆಗೆ ರಾಜಸ್ಥಾನ ಸೇರಿದಂತೆ ಗುಜರಾತ್ ಹಾಗೂ ಪಂಜಾಬ್‌ನಲ್ಲಿ ಮುಂಗಾರು ಮಳೆ ಮಾರುತಗಳನ್ನು ತರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಸಾಮಾನ್ಯವಾಗಿ ಸೆ. 1 ರಿಂದ ರಾಜಸ್ಥಾನದಲ್ಲಿ ಮುಂಗಾರು ಮುಕ್ತಾಯ ಪ್ರಾರಂಭವಾಗುತ್ತಿತ್ತು. ಸೆ. 15 ರ ವೇಳೆಗೆ ಮುಂಗಾರು ಮಳೆ ಸಂಪೂರ್ಣವಾಗಿ ಮುಗಿಯುತ್ತಿತ್ತು. ಆದರೆ ಈ ವರ್ಷ ಇನ್ನೂ ಮುಂಗಾರು ಮಳೆ ಅಂತ್ಯವಾಗುವ ಲಕ್ಷಣ ಕಾಣುತ್ತಿಲ್ಲ. ಮಧ್ಯಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದಾಗಿ ಈ ಭಾಗದಲ್ಲಿ ವಾತಾವರಣದಲ್ಲಿ ತೇವಾಂಶ ಹೆಚ್ಚುತ್ತಿದೆ. ಇನ್ನೂ ಐದು ದಿನಗಳವರೆಗೆ ರಾಜಸ್ಥಾನ ಸೇರಿದಂತೆ ಹಲವೆಡೆ ಮಳೆಯಾಗಲಿದೆ.
ಪ್ರವಾಹಕ್ಕೆ ಸಿಲುಕಿದ 350 ವಿದ್ಯಾರ್ಥಿಗಳು: ರಾಜಸ್ಥಾನದ ಚಿತ್ತೋರ್‌ಗಢದ ಶಾಲೆಯೊಂದರಲ್ಲಿ ಶನಿವಾರದಿಂದ 350 ಮಕ್ಕಳು ಮತ್ತು 50 ಶಿಕ್ಷಕರು ಸಿಲುಕಿಕೊಂಡಿದ್ದಾರೆ. ಈ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ರಸ್ತೆ ಸಂಪರ್ಕ ಕಡಿದುಹೋಗಿದೆ. ಹೀಗಾಗಿ ಮಕ್ಕಳಿಗೆ ಆಹಾರ ಮತ್ತು ತುರ್ತು ಸೌಲಭ್ಯವನ್ನು ಸ್ಥಳೀಯರು ಒದಗಿಸುತ್ತಿದ್ದಾರೆ. ರಾಜಸ್ಥಾನದ ಪೂರ್ವ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.