ಮುಂಗಾರು: ಶೇ. 77ರಷ್ಟು ಮಳೆ ಕೊರತೆ
Team Udayavani, Jul 1, 2019, 5:17 AM IST
ಅಸ್ಸಾಂನಲ್ಲಿ ಭಾರೀ ಮಳೆಯಿಂದಾಗಿ ಗ್ರಾಮಗಳು ಜಲಾವೃತಗೊಂಡಿದ್ದು, ತಾಯಿಯೊಬ್ಬಳು ತನ್ನ ಮಗುವಿನೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದ ದೃಶ್ಯ.
ಹೊಸದಿಲ್ಲಿ: ಜೂನ್ ಮೊದಲ ವಾರದಿಂದ ಆರಂಭವಾಗಿದ್ದ ಈ ಬಾರಿಯ ಮುಂಗಾರಿನಿಂದಾಗಿ ಜೂನ್ ಅಂತ್ಯದವರೆಗೆ ಒಟ್ಟಾರೆ ಶೇ. 33ರಷ್ಟು ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಆದರೆ, ಇಲಾಖೆ ಗುರುತಿಸಿರುವ ಮುಂಗಾರು ವ್ಯಾಪ್ತಿಯ ಪ್ರದೇಶಗಳಲ್ಲಿ ನಿರೀಕ್ಷಿಸಲಾಗಿದ್ದ ಮಳೆಯ ಪ್ರಮಾಣಕ್ಕೆ ಹೋಲಿಸಿದರೆ ಶೇ. 78ರಷ್ಟು ಕೊರತೆ ಉಂಟಾಗಿದೆ ಎಂದು ಐಎಂಡಿ ಹೇಳಿದೆ.
ಆದರೆ, ಇದರ ಬೆನ್ನಿಗೇ ಆಶಾದಾಯಕ ಮಾಹಿತಿ ಹಂಚಿಕೊಂಡಿರುವ ಐಎಂಡಿ ಹೆಚ್ಚುವರಿ ನಿರ್ದೇಶಕ ಮೃತ್ಯುಂಜಯ್ ಮಹಾಪಾತ್ರ, ಜುಲೈ ಮೊದಲ ವಾರದಲ್ಲಿ ಮುಂಗಾರು ಮಾರುತುಗಳು ಪ್ರಬಲವಾಗಲಿವೆ. ಜತೆಗೆ, ಬಂಗಾಲ ಕೊಲ್ಲಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತದಿಂದಾಗಿ ಒಡಿಶಾ, ರಾಜಸ್ಥಾನ ಸಹಿತ ಮಧ್ಯಭಾರತದಲ್ಲಿ ಉತ್ತಮ ಮಳೆಯಾಗಲಿದೆ ಎಂದಿದ್ದಾರೆ.
ಇನ್ನು, ಖಾಸಗಿ ಹವಾಮಾನ ಸಂಸ್ಥೆಯಾದ “ಸ್ಕೈ ಮೇಟ್’ನ ವ್ಯವಸ್ಥಾಪಕ ನಿರ್ದೇಶಕ ಜತಿನ್ ಸಿಂಗ್ ಕೂಡ, ಜೂ. 30ರಿಂದ ಜು. 15ರ ಅವಧಿಯಲ್ಲಿ ಮುಂಗಾರು ಮಾರುತಗಳು ಪ್ರಬಲಗೊಳ್ಳುತ್ತವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.