ಸಂಸತ್ತಿನ ಮಳೆಗಾಲದ ಅಧಿವೇಶನ ಜು.17ರಿಂದ ಆ.11ರ ವರೆಗೆ
Team Udayavani, Jun 24, 2017, 12:26 PM IST
ಹೊಸದಿಲ್ಲಿ : ಸಂಸತ್ತಿನ ಮಳೆಗಾಲದ ಅಧಿವೇಶನವು ಜುಲೈ 17ರಂದು ಆರಂಭಗೊಂಡು ಆಗಸ್ಟ್ 11ರ ವರೆಗೆ ನಡೆಯಲಿದೆ. ಜುಲೈ 17ರಂದು ರಾಷ್ಟ್ರಪತಿ ಚುನಾವಣೆಗೆ ಮತದಾನ ನಡೆಯಲಿದೆ.
ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಜು.17ರಿಂದ ಆ.11ರ ವರೆಗೆ ಮುಂಗಾರು ಅಧಿವೇಶನ ನಡೆಸಬೇಕೆಂದು ಶಿಫಾರಸು ಮಾಡಿದೆ ಎಂದು ಸಮಿತಿಯ ಮೂಲಗಳು ತಿಳಿಸಿವೆ.
ನಿನ್ನೆ ಶುಕ್ರವಾರ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ ಕೋವಿಂದ ಅವರು ನಾಮಪತ್ರ ಸಲ್ಲಿಸಿದ ಬಳಿಕ ಸಿಸಿಪಿಎ ಸಭೆಯನ್ನು ಗೃಹ ಸಚಿವ ರಾಜನಾಥ ಸಿಂಗ್ ಅವರು ನಡೆಸಿ, ಸಂಸತ್ತಿನ ಮುಂಗಾರು ಅಧಿವೇಶನದ ವೇಳಾಪಟ್ಟಿಯನ್ನು ಅಂತಿಮಗೊಳಿಸಿದರು.
ಅಗಲಿದ ಲೋಕಸಭಾ ಸದಸ್ಯ. ಬಾಲಿವುಡ್ ನಟ ವಿನೋದ್ ಖನ್ನಾ ಮತ್ತು ರಾಜ್ಯಸಭಾ ಸದಸ್ಯೆ ಪಲ್ಲವಿ ರೆಡ್ಡಿ ಅವರಿಗೆ ಶ್ರದ್ಧಾಂಜಲಿ ಕೋರಲಾಗುವುದರಿಂದ ಮುಂಗಾರು ಅಧಿವೇಶನದ ಮೊದಲ ದಿನದ ಕಲಾಪ ನಡೆಯುವುದಿಲ್ಲ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.