ಮೊರ್ಬಿ ಸೇತುವೆ ಕುಸಿತ ಪ್ರಕರಣದಲ್ಲಿ ಬಿಜೆಪಿ ಸಂಸದನ ಕುಟುಂಬದ 12 ಮಂದಿ ನೀರುಪಾಲು!
Team Udayavani, Oct 31, 2022, 10:07 AM IST
ಮೊರ್ಬಿ: ಗುಜರಾತ್ ನ ಮೊರ್ಬಿ ನಗರದಲ್ಲಿ ಸುಮಾರು 140 ವರ್ಷಗಳಷ್ಟು ಹಳೆಯ, ಕೆಲ ದಿನಗಳ ಹಿಂದಷ್ಟೇ ನವೀಕರಣಗೊಂಡ ತೂಗು ಸೇತುವೆಯೊಂದು ಕುಸಿದು 130 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ರವಿವಾರ ಸಂಜೆ ನಡೆದ ಘಟನೆಯಲ್ಲಿ ಬಿಜೆಪಿ ಸಂಸದರೊಬ್ಬರ ಕುಟುಂಬದ 12 ಮಂದಿ ಅಸುನೀಗಿದ್ದಾರೆ.
ರಾಜ್ಕೋಟ್ ನ ಬಿಜೆಪಿ ಸಂಸದ ಮೋಹನ್ ಭಾಯ್ ಕಲ್ಯಾಣ್ ಜಿ ಕುಂದರಿಯಾ ಅವರ ಹನ್ನೆರಡು ಕುಟುಂಬ ಸದಸ್ಯರು ಪ್ರಾಣ ಕಳೆದುಕೊಂಡಿದ್ದಾರೆ.
“ನಾನು ಐದು ಮಕ್ಕಳು ಸೇರಿದಂತೆ ನನ್ನ ಕುಟುಂಬದ 12 ಸದಸ್ಯರನ್ನು ಕಳೆದುಕೊಂಡಿದ್ದೇನೆ. ನನ್ನ ಸಹೋದರಿಯ ಕುಟುಂಬದಿಂದ ಬಂದ ಸದಸ್ಯರನ್ನು ಕಳೆದುಕೊಂಡಿದ್ದೇನೆ” ಎಂದು ಮೋಹನ್ಭಾಯ್ ಕಲ್ಯಾಣ್ಜಿ ಕುಂದರಿಯಾ ಹೇಳಿದರು.
ಇದನ್ನೂ ಓದಿ:ಬಾಗಿಲು ಹಾಕಿದ್ದ ಮನೆಯೊಳಗೆ ಒಂದೇ ಕುಟುಂಬದ ನಾಲ್ವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ
“ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ಮತ್ತು ಸ್ಥಳೀಯ ಆಡಳಿತವು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಅಪಘಾತದಿಂದ ಬದುಕುಳಿದ ಎಲ್ಲರನ್ನು ರಕ್ಷಿಸಲಾಗಿದೆ. ಮಚ್ಚು ನದಿಯಲ್ಲಿದ್ದವರ ಮೃತದೇಹಗಳನ್ನು ಹೊರತೆಗೆಯಲು ಪ್ರಯತ್ನಗಳು ನಡೆಯುತ್ತಿವೆ. ರಕ್ಷಣಾ ದೋಣಿಗಳು ಸಹ ಸ್ಥಳದಲ್ಲಿವೆ” ಎಂದು ಬಿಜೆಪಿ ಸಂಸದರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.