ಭ್ರಷ್ಟಾಚಾರ ಪ್ರಕರಣ; ರಾಜಸ್ಥಾನ ಪ್ರಥಮ, ಬಿಹಾರ ದ್ವಿತೀಯ ; ನಮಗೆ ಎಷ್ಟನೇ ಸ್ಥಾನ ಗೊತ್ತೇ?


Team Udayavani, Dec 4, 2019, 10:04 PM IST

Corruption-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ದೇಶದಲ್ಲಿ ಭ್ರಷ್ಟಾಚಾರವನ್ನು ಬೇರು ಸಮೇತ ಕಿತ್ತು ಹಾಕಲು ಸರಕಾರ ಮತ್ತು ಸರಕಾರತೇರ ಸಂಸ್ಥೆಗಳು ಪ್ರಯತ್ನಿಸುತ್ತಿವೆ. ಆದರೆ ಅವುಗಳು ಯಶಸ್ವಿಯಾಗುತ್ತಿಲ್ಲ ಎಂಬ ಆರೋಪಗಳು ಜನ ಸಾಮಾನ್ಯರದ್ದು. ಇದೀಗ ಈ ವರ್ಷದ ಸಾಲಿನ ಟಾಪ್ ಎಂಟು ಭ್ರಷ್ಟ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದೆ.

ರಾಜಸ್ಥಾನ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ ಒಂದು ಕಾಲದಲ್ಲಿ ಜಂಗಲ್ ರಾಜ್ ಎಂದೇ ಕರೆಯಿಸಿಕೊಳ್ಳುತ್ತಿದ್ದ ಬಿಹಾರ ಎರಡನೇ ಸ್ಥಾನದಲ್ಲಿದೆ. ನಮ್ಮ ಕರ್ನಾಟಕ ಈ ಪಟ್ಟಿಯಲ್ಲಿ ಏಳನೇ ಸ್ಥಾನವನ್ನು ಪಡೆದಿರುವುದು ಸಮಾಧಾನಕರ ವಿಷಯವಾಗಿದ್ದರೂ ಟಾಪ್ ಎಂಟರ ಪಟ್ಟಿಯಿಂದ ಹೊರಬಿದ್ದಿಲ್ಲ ಎನ್ನುವುದು ಬೇಸರದ ಸಂಗತಿಯಾಗಿದೆ. ಟ್ರಾನ್ಸ್ ಪೆರೆನ್ಸಿ ಇಂಟರ್ ನ್ಯಾಶನಲ್ ಇಂಡಿಯಾ ಸಂಸ್ಥೆ ನಡೆರುವ ಅಧ್ಯಯನದಿಂದ ಈ ಮಾಹಿತಿ ಲಭ್ಯವಾಗಿದೆ.

ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ರಾಜಸ್ಥಾನದಲ್ಲಿ ಶೇ. 78ರಷ್ಟು ಜನ ಸರಕಾರಿ ಕೆಲಸಗಳನ್ನು ಮಾಡಿಸಿಕೊಳ್ಳಲು ಲಂಚ ಕೊಡುತ್ತಾರೆ. ವಿವಿಧ ರಾಜ್ಯಗಳ ಸುಮಾರು 1,90,000 ಜನರ ಪ್ರತಿಕ್ರಿಯೆಗಳನ್ನು ಪಡೆದುಕೊಂಡು ಈ ಸಮೀಕ್ಷೆಯನ್ನು ನಡೆಸಲಾಗಿದೆ. ಕರ್ನಾಟಕದಲ್ಲಿ ಶೇ. 63ರಷ್ಟು ಜನರು ರಾಜ್ಯದಲ್ಲಿ ತಮ್ಮ ಪ್ರತೀ ಕೆಲಸ ಮಾಡಿಸಿಕೊಳ್ಳಲು ಲಂಚ ಕೊಡುತ್ತಾರೆ. ಕೇವಲ ಶೇ. 9ರಷ್ಟು ಜನ ಮಾತ್ರ ಲಂಚ ಕೊಡದೇ ಕೆಲಸ ಮಾಡಿಸಿಕೊಂದ್ದಾರೆ ಉಳಿದಂತೆ ಒಂದೆರಡು ಬಾರಿ ಲಂಚ ಕೊಟ್ಟಿರುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಿದೆ ಎಂಬ ಮಾಹಿತಿ ಈ ಸಮೀಕ್ಷೆಯಿಂದ ಬಯಲಾಗಿದೆ.

ಈ ಪಟ್ಟಿಯಲ್ಲಿ ಟಾಪ್ 8 ರಲ್ಲಿ ಗುರುತಿಸಿಕೊಂಡಿರುವ ಇತರ ರಾಜ್ಯಗಳ ವಿವರ ಕೆಳಗಿದೆ.

ಬಿಹಾರ

ಉತ್ತರ ಭಾರತದ ರಾಜ್ಯಗಳಲ್ಲಿ ಒಂದಾಗಿರುವ ಬಿಹಾರದಲ್ಲಿ ಶೇ. 75ರಷ್ಟು ಜನರು ತಮ್ಮ ಕೆಲಸ ಮಾಡಿಸಿಕೊಳ್ಳಲು ಲಂಚದ ಮೊರೆ ಹೋಗುತ್ತಾರೆ. ಈ ರಾಜ್ಯ ಹಲವು ವರ್ಷಗಳಿಂದ ಭ್ರಷ್ಟಾಚಾರದ ಪಟ್ಟಿಯಲ್ಲಿ ಸ್ಥಾನ ಪಡೆಯುತ್ತಾ ಬಂದಿದೆ. ಇಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಭ್ರಷ್ಟಾಚಾರ ಪಿಡುಗು ಮಾತ್ರ ನಿವಾರಣೆ ಆಗುತ್ತಿಲ್ಲ ಎಂಬುದೇ ಕಳವಳಕಾರಿ ವಿಚಾರವಾಗಿದೆ.

ಜಾರ್ಖಂಡ್
ಗಾತ್ರದಲ್ಲಿ ಸಣ್ಣ ರಾಜ್ಯವಾದರೂ ಜಾರ್ಖಂಡ್ ಭ್ರಷ್ಟಾಚಾರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಈ ರಾಜ್ಯದಲ್ಲಿ ಶೇ. 74ರಷ್ಟು ಜನ ತಮ್ಮ ಕೆಲಸ ಮಾಡಿಸಿಕೊಳ್ಳಲು ಲಂಚ ಕೊಡುತ್ತಾರೆ. ಶೇ. 13ರಷ್ಟು ಮಂದಿ ಮಾತ್ರ ಯಾವುದೇ ಆಮಿಷಕ್ಕೆ ಒಳಗಾಗದೇ ತಮ್ಮ ಕೆಲಸವನ್ನು ಮಾಡಿಸಿಕೊಳ್ಳುತ್ತಾರೆ.

ಉತ್ತರ ಪ್ರದೇಶ
ದೇಶದ ಅತೀ ದೊಡ್ಡ ರಾಜ್ಯ ಉತ್ತರ ಪ್ರದೇಶ ಈ ಪಟ್ಟಿಯಲ್ಲಿ 4ನೇ ಸ್ಥಾನವನ್ನು ಪಡೆದುಕೊಂಡಿದೆ. ರಾಜ್ಯದಲ್ಲಿ ಸಹ ಶೇ. 74 ಜನ ಲಂಚ ನೀಡಿಯೇ ತಮ್ಮ ಕೆಲಸ ಕಾರ್ಯಗಳು ಆಗುವಂತೆ ನೋಡಿಕೊಳ್ಳುತ್ತಾರೆ. ಇದರಲ್ಲಿ ಶೇ. 17ರಷ್ಟು ಜನರು ತಾವು 2-3 ಬಾರಿ ಮಾತ್ರ ಲಂಚ ಕೊಟ್ಟು ಕೆಲಸ ಮಾಡಿಸಿಕೊಂಡಿದ್ದೇವೆ ಎಂದು ಹೇಳಿರುವುದು ಈ ವರದಿಯಲ್ಲಿ ಉಲ್ಲೇಖಗೊಂಡಿದೆ.

ತೆಲಂಗಾಣ
ದಕ್ಷಿಣ ಭಾರತದ ಹೊಸ ರಾಜ್ಯ ತೆಲಂಗಾಣ ಐದನೇ ಸ್ಥಾನದಲ್ಲಿದೆ. ಮೊದಲ ಐದು ಸ್ಥಾನದಲ್ಲಿರುವ ದಕ್ಷಿಣ ಭಾರತದ ರಾಜ್ಯ ಪೈಕಿಯಲ್ಲಿನ ಮೊದಲ ರಾಜ್ಯವಾಗಿದೆ. ಈ ರಾಜ್ಯದಲ್ಲಿ ಶೇ. 67ರಷ್ಟು ಜನ ಲಂಚಕ್ಕೆ ಒಳಗಾಗಿದ್ದಾರೆ. ಇದರಲ್ಲಿ ಶೇ. 56ರಷ್ಟು ಜನ ನಾವು ಪ್ರತಿ ಸಲವೂ ಲಂಚ ನೀಡುತ್ತೇವೆ ಎಂದು ಘೋಷಿಸಿಕೊಂಡಿದ್ದಾರೆ. ಉಳಿದ 11ರಷ್ಟು ಮಂದಿ 2-3 ಬಾರಿ ಲಂಚ ನೀಡಿದವರು. ಇವರು ತಮ್ಮ ಕೆಲಸ ಆಗದೇ ಇರುವ ಕಾರಣ ಲಂಚ ನೀಡಬೇಕಾದ ಅನಿವಾರ್ಯತೆ ಇದೆ.

ಪಂಜಾಬ್
ಭ್ರಷ್ಟಾಚಾರ ಪಟ್ಟಿಯಲ್ಲಿ ಕೃಷಿ ಸಮೃದ್ಧ ಈ ರಾಜ್ಯ ಆರನೇ ಸ್ಥಾನದಲ್ಲಿದೆ. ಈ ರಾಜ್ಯದಲ್ಲಿ ಶೇ. 63ರಷ್ಟು ಮಂದಿ ತಮ್ಮ ಕೆಲಸ ಮಾಡಿಸಿಕೊಳ್ಳಲು ಲಂಚ ನೀಡುತ್ತಾರೆ. ಇವರಲ್ಲಿ ಶೇ. 35ರಷ್ಟು ಮಂದಿ ಹಲವು ಬಾರಿ ಲಂಚ ನೀಡಿದವರಿದ್ದು, 27 ಶೇ. ಜನ ಮಾತ್ರ 2-3 ಬಾರಿ ಲಂಚ ನೀಡಿದ್ದಾರೆ.

ಕರ್ನಾಟಕ
ನಮ್ಮ ರಾಜ್ಯದಲ್ಲಿ ಶೇ. 63ರಷ್ಟು ಮಂದಿ ಲಂಚ ನೀಡುತ್ತಾರೆ. ಅವರಲ್ಲಿ ಶೇ. 35ರಷ್ಟು ಜನ ಬಹಳಷ್ಟು ಸಂದರ್ಭ ಲಂಚದ ಕಿರುಕುಳಕ್ಕೆ ಒಳಗಾಗಿ ಭ್ರಷ್ಟಚಾರವನ್ನು ತಮಗೆ ಅರಿವಲ್ಲದಂತೆ ಪೋಷಿಸುತ್ತಾ ಬಂದಿದ್ದಾರೆ. ಇನ್ನು ಶೇ. 8ರಷ್ಟು ಮಂದಿ ಮಾತ್ರ 3-4 ಬಾರಿ ಲಂಚ ನೀಡಿ ಕೆಲಸ ಮಾಡಿಸಿಕೊಳ್ಳುವ ಅನಿವಾರ್ಯತೆಗೆ ಒಳಗಾಗಿದ್ದಾರೆ ಎಂದು ಸಮೀಕ್ಷೆ ಹೇಳುತ್ತಿದೆ.

ತಮಿಳುನಾಡು
ಎಂಟನೇ ಮತ್ತು ಕೊನೆಯ ಸ್ಥಾನದಲ್ಲಿ ನಮ್ಮ ನೆರೆಯ ರಾಜ್ಯ ತಮಿಳುನಾಡು ಇದೆ. ಅಲ್ಲಿನ ಶೇ. 62ರಷ್ಟು ಮಂದಿ ಲಂಚ ನೀಡಿದ್ದಾರೆ. ಅವರಲ್ಲಿ ಶೇ. 35ರಷ್ಟು ಮಂದಿ ಬಹಳಷ್ಟು ಸಂದರ್ಭ ಲಂಚ ನೀಡಿದ್ದು, ಶೇ. 8ರಷ್ಟು ಜನ ಒಂದೆರಡು ಬಾರಿ ಲಂಚ ನೀಡಿದ್ದಾರೆ.

ಇನ್ನು ಈ ಪಟ್ಟಿಯಲ್ಲಿರದ ರಾಜ್ಯಗಳಲ್ಲಿ ಭ್ರಷ್ಟಾಚಾರ ಪ್ರಕರಣಗಳು ಕಡಿಮೆ ಪ್ರಮಾಣದಲ್ಲಿ ಇದೆಯೇ ಹೊರತು ಸಂಪೂರ್ಣವಾಗಿ ನಿವಾರಣೆಯಾಗಿದೆ ಎಂದು ಅರ್ಥವಲ್ಲ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-jyo

Asian Weightlifting: ಜೋಶ್ನಾ ನೂತನ ದಾಖಲೆ

1-bcc

U-19 ವನಿತಾ ಏಷ್ಯಾ ಕಪ್‌: ಫೈನಲ್‌ಗೆ ಭಾರತ

1-J-PP

Pro Kabaddi: ಜೈಪುರ್‌ 12ನೇ ವಿಜಯ

1-bangla

T20;ಮೂರೂ ಪಂದ್ಯ ಗೆದ್ದ ಬಾಂಗ್ಲಾ: ವಿಂಡೀಸಿಗೆ ವೈಟ್‌ವಾಶ್‌

1-pak

ODI; ತವರಲ್ಲೇ ಎಡವಿದ ದಕ್ಷಿಣ ಆಫ್ರಿಕಾ: ಸರಣಿ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.