MP CM ; ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಡಾ. ಮೋಹನ್ ಯಾದವ್ ಆಯ್ಕೆ
Team Udayavani, Dec 11, 2023, 4:44 PM IST
ಭೋಪಾಲ್: ಮಧ್ಯಪ್ರದೇಶ ಮುಖ್ಯಮಂತ್ರಿಯನ್ನಾಗಿ ಡಾ. ಮೋಹನ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ.
58 ರ ಹರೆಯದ ಡಾ. ಮೋಹನ್ ಯಾದವ್ ಅವರು ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ವಿಧಾನಸಭೆಯ ಸದಸ್ಯರಾಗಿದ್ದಾರೆ.2013 ರಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.2020 ರಿಂದ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಸರಕಾರದಲ್ಲಿ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.
ನೂತನವಾಗಿ ಆಯ್ಕೆಯಾದ ಬಿಜೆಪಿ ಶಾಸಕರು ಸೋಮವಾರ ಸಭೆ ನಡೆಸಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಿದರು.
ನವೆಂಬರ್ 17 ರಂದು ನಡೆದ ಚುನಾವಣೆಯಲ್ಲಿ 230 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 163 ಸ್ಥಾನಗಳನ್ನು ಗೆಲ್ಲುವ ಮೂಲಕ ಮಧ್ಯಪ್ರದೇಶದಲ್ಲಿ ಅಧಿಕಾರವನ್ನು ಉಳಿಸಿಕೊಂಡಿತ್ತು. ಕಾಂಗ್ರೆಸ್ 66 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಚುನಾವಣೆಗೂ ಮುನ್ನ ಬಿಜೆಪಿ ಯಾರನ್ನೂ ಮುಖ್ಯಮಂತ್ರಿಯ ಅಭ್ಯರ್ಥಿಯನ್ನಾಗಿ ಬಿಂಬಿಸಿರಲಿಲ್ಲ. ಶಿವರಾಜ್ ಸಿಂಗ್ ಚೌಹಾಣ್ ಅವರು ಮುಖ್ಯಮಂತ್ರಿಯಾಗಿದ್ದರೂ ಇಡೀ ಚುನಾವಣೆಯ ಪ್ರಚಾರವು ಪ್ರಧಾನಿ ಮೋದಿಯವರ ನಾಯಕತ್ವದ ಮೇಲೆ ಆಧಾರಿತವಾಗಿತ್ತು.
ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಕೋರ್ ಗ್ರೂಪ್ ಸಭೆ ನಡೆಸಲಾಯಿತು. ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಹೆಸರನ್ನು ಅಂಗೀಕರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.