ಮಧ್ಯಪ್ರದೇಶ ಸ್ಥಳೀಯ ಚುನಾವಣೆ: ಬಿಜೆಪಿಗೆ ಭರ್ಜರಿ ಜಯ
Team Udayavani, Jul 17, 2022, 10:06 PM IST
ಭೋಪಾಲ್: ಮಧ್ಯಪ್ರದೇಶದ ಸ್ಥಳೀಯ ಸಂಸ್ಥೆಗಳಿಗೆ ಇತ್ತೀಚೆಗೆ ನಡೆದಿದ್ದ ಮೊದಲನೇ ಹಂತದ ಚುನಾವಣೆಯ ಫಲಿತಾಂಶ ಭಾನುವಾರ ಹೊರಬಿದ್ದಿದೆ.
11 ಮುನ್ಸಿಪಾಲ್ ಕಾರ್ಪೋರೇಷನ್ಗಳ ಪೈಕಿ ಬಿಜೆಪಿ ಐದು ಸ್ಥಾನಗಳಲ್ಲಿ ಗೆದ್ದು, ಗೆಲುವಿನ ನಗೆ ಬೀರಿದೆ. ಕಾಂಗ್ರೆಸ್ ಎರಡು ಸ್ಥಾನ ತನ್ನದಾಗಿಸಿಕೊಂಡಿದೆ. ಇದೇ ಮೊದಲ ಬಾರಿ ಆಮ್ ಆದ್ಮಿ ಪಕ್ಷವು ಒಂದು ಸ್ಥಾನದಲ್ಲಿ ಗೆದ್ದಿದೆ. ಆ ಮೂಲಕ ಎಎಪಿಯ ರಾಣಿ ಅಗರ್ವಾಲ್ ಸಿಂಗ್ರೌಲಿ ಕ್ಷೇತ್ರದ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
ಉಳಿದ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದರೆ, ಒಂದರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ಸೋತ ನೋವಿನಲ್ಲೇ ಹೃದಯಾಘಾತ, ಸಾವು:
ಚುನಾವಣೆಯಲ್ಲಿ ಸೋತ ವಿಚಾರ ಕೇಳುತ್ತಿದ್ದಂತೆಯೇ ಅಭ್ಯರ್ಥಿ ಹೃದಯಾಘಾತಕ್ಕೀಡಾಗಿ, ಸಾವನ್ನಪ್ಪಿರುವ ಘಟನೆಯೂ ನಡೆದಿದೆ. ರೇವಾದ ಮುನ್ಸಿಪಾಲ್ ಕೌನ್ಸಿಲ್ನ ಕಾಂಗ್ರೆಸ್ ಅಭ್ಯರ್ಥಿ ಹರಿನಾರಾಯಣ ಗುಪ್ತಾ ಮೃತರು. ಅವರನ್ನು ಪಕ್ಷೇತರ ಅಭ್ಯರ್ಥಿ ಅಖೀಲೇಶ್ ಗುಪ್ತಾ ಅವರು 14 ಮತಗಳಿಂದ ಸೋಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.