ಮಿ.ಖಾನ್ ನಿಮಗೆ ಭಾರತದ ಮುಸ್ಲಿಮರ ಚಿಂತೆ ಬೇಡ, ನಾವು ಜಿನ್ನಾ ಸಿದ್ದಾಂತವನ್ನು ಒಪ್ಪಿಲ್ಲ !
Team Udayavani, Jan 5, 2020, 9:34 AM IST
ನವದೆಹಲಿ: ನಕಲಿ ವಿಡಿಯೋ ಅಪ್ಲೋಡ್ ಮಾಡಿ ಭಾರತವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಜುಗರಕ್ಕೀಡು ಮಾಡಲು ಯತ್ನಿಸಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ವಾಗ್ದಾಳಿ ನಡೆಸಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಇಮ್ರಾನ್ ಖಾನ್ ಭಾರತದ ಮುಸ್ಲಿಮರ ಬಗ್ಗೆ ಚಿಂತಿಸುವುದಕ್ಕಿಂತ, ಪಾಕಿಸ್ಥಾನದ ಸ್ಥಿತಿಗತಿಗಳ ಬಗ್ಗೆ ಹೆಚ್ಚು ಆಲೋಚಿಸಬೇಕಾಗಿದೆ ಎಂದು ಕಿಡಿಕಾರಿದ್ದಾರೆ.
ಭಾರತದ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ವಿರೊಧಿಸುವ ಬರದಲ್ಲಿ ಇಮ್ರಾನ್ ಖಾನ್, ಪೊಲೀಸರು ವ್ಯಕ್ತಿಯೊಬ್ಬನಿಗೆ ಥಳಿಸುತ್ತಿರುವ ವಿಡಿಯೋ ಒಂದನ್ನು ಅಪ್ಲೋಡ್ ಮಾಡಿ ‘ಮುಸ್ಲಿಮರ ಮೇಲೆ ಭಾರತದ ಪೊಲೀಸರು ದೌರ್ಜನ್ಯ ನೋಡಿ ಎಂದು ಟ್ವೀಟ್ ಮಾಡಿದ್ದರು. ಆದರೇ ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದ ವಿಡಿಯೋ 2013ರ ಮೇ ತಿಂಗಳಿನಲ್ಲಿ ಬಾಂಗ್ಲಾದೇಶದ ರ್ಯಾಪಿಡ್ ಆ್ಯಕ್ಷನ್ ಬೆಟಾಲಿಯನ್ ನಡೆಸಿದ್ದ ಕಾರ್ಯಾಚರಣೆಯಾಗಿತ್ತು. ಈ ಹಿನ್ನಲೆ ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗಿತ್ತು.
ಇಮ್ರಾನ್ ಖಾನ್ ಅವರ ದೇಶದ ಬಗ್ಗೆ ಹೆಚ್ಚು ಚಿಂತಿಸಬೇಕಾಗಿದೆ. ಭಾರತೀಯರು ಜಿನ್ನಾರ ತಪ್ಪು ಸಿದ್ದಾಂತವನ್ನು ತಿರಸ್ಕರಿಸಿದ್ದೇವೆ. ಮಾತ್ರವಲ್ಲದೆ ನಾವು ಹೆಮ್ಮೆಯ ಭಾರತೀಯ ಮುಸ್ಲಿಮರು , ನಾವು ಬದಲಾಗುವುದಿಲ್ಲ ಎಂದು ಅಸಾದುದ್ದೀನ್ ಓವೈಸಿ ತಿಳಿಸಿದ್ದಾರೆ.
ಪ್ರಧಾನಿ ಮೋದಿ ವಿರುದ್ಧವೂ ಕಿಡಿಕಾರಿದ ಓವೈಸಿ, ಎನ್ ಆರ್ ಸಿಯನ್ನು ದೇಶದಾದ್ಯಂತ ಮೋದಿ ಆಡಳಿತ ಅವಧಿಯಲ್ಲಿ ಜಾರಿಗೆ ತರಲಾಗುವುದಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಲು ಕಾಂಗ್ರೆಸ್, ಎಐಎಂಐಎಂ ಸೇರಿದಂತೆ ಇತರ ಪಕ್ಷಗಳೊಂದಿಗೆ ಒಗ್ಗೂಡಬೇಕೆಂದು ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ
Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ
Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.