ಮುಂಬಯಿ:16 ಸೊಮಾಲಿಯನ್ ಕಡಲ್ಗಳ್ಳರಿಗೆ 7ವರ್ಷ ಜೈಲು
Team Udayavani, Aug 9, 2017, 4:48 PM IST
ಮುಂಬಯಿ: 6 ವರ್ಷದ ಹಿಂದೆ ಮೀನುಗಾರಿಕಾ ಬೋಟ್ ಒಂದನ್ನು ಇರಾನ್‌ನಲ್ಲಿ ಅಪಹರಿಸಿ ಇರಾನ್ ಮತ್ತು ಪಾಕಿಸ್ಥಾನದ ಮೀನುಗಾರರನ್ನು ಒತ್ತೆಸೆರೆಯಲ್ಲಿರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಸೆಷನ್ಸ್ ನ್ಯಾಯಾಲಯವೊಂದು 16 ಮಂದಿ ಸೊಮಾಲಿಯನ್ ಕಡಲ್ಗಳ್ಳರಿಗೆ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.
2011ರಲ್ಲಿ ನಡೆದಿದ್ದ ಈ ಪ್ರಕರಣದ ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಧೀಶರಾದ ಜೆ.ಸಿ.ಜಗದಾಳೆ ಅವರು ಒಳಸಂಚು, ಕೊಲೆ ಯತ್ನ, ಅಪಹರಣ ಮತ್ತು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆಯ ವಿವಿಧ ಸೆಕ್ಷನ್‌ಗಳಡಿಯಲ್ಲಿ ಈ 16ಮಂದಿ ಆರೋಪಿಗಳನ್ನು ದೋಷಿಗಳೆಂದು ತೀರ್ಪಿತ್ತರಲ್ಲದೆ ಪ್ರತಿಯೋರ್ವರಿಗೂ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದರು ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ರಂಜಿತ್ ಸಾಂಗ್ಲೆ ತಿಳಿಸಿದರು.
ಅಲ್ಲದೆ ಪ್ರತಿಯೋರ್ವ ದೋಷಿಗೂ ತಲಾ 14,000ರೂ.ಗಳ ದಂಡವನ್ನು ವಿಧಿಸಿದ ನ್ಯಾಯಾಧೀಶರು ಅಪರಾಧಿಗಳು ಜೈಲು ಶಿಕ್ಷೆಯ ಅವಧಿಯನ್ನು ಪೂರ್ಣಗೊಳಿಸಿದ ಬಳಿಕ ಅವರನ್ನು ಸೊಮಾಲಿಯಾಕ್ಕೆ ಗಡೀಪಾರು ಮಾಡುವಂತೆ ಸರಕಾರಕ್ಕೆ ನಿರ್ದೇಶ ನೀಡಿದರು.
ಇದೇ ವೇಳೆ ನ್ಯಾಯಾಧೀಶರು ಒತ್ತೆ ಹಣಕ್ಕಾಗಿ ಅಪಹರಣ, ಕೊಲೆ ಮತ್ತು ಶಸ್ತ್ರಾಸ್ತ್ರ ಕಾಯಿದೆಯಡಿ ಹೊರಿಸಲಾಗಿದ್ದ ಆರೋಪಗಳಿಂದ ಇವರನ್ನು ದೋಷಮುಕ್ತಿಗೊಳಿಸಿತು. 16ಮಂದಿ ಪೈಕಿ ಓರ್ವಾತ ವಿಚಾರಣೆಯ ಸಂದರ್ಭದಲ್ಲಿ ಸಾವನ್ನಪ್ಪಿದ್ದನು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.