ವೈನ್ ಆರ್ಡರ್ ಮಾಡಿದ ನಟಿ ಖಾತೆಯಿಂದ 3 ಲಕ್ಷ ಕದ್ದ ಖದೀಮರು
Team Udayavani, Nov 28, 2021, 8:45 PM IST
ಸಾಂದರ್ಭಿಕ ಚಿತ್ರ
ಮುಂಬಯಿ: ವೈನ್ ಬಾಟಲಿಯನ್ನು ಆನ್ಲೈನ್ನಲ್ಲಿ ಆರ್ಡರ್ ಮಾಡಿದ್ದ ಹಿರಿಯ ನಟಿಯೊಬ್ಬರ ಬ್ಯಾಂಕ್ ಖಾತೆಯಿಂದಲೇ ಸೈಬರ್ ಕಳ್ಳರು, 3 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ.
ಮಹಾರಾಷ್ಟ್ರದ ಮುಂಬಯಿಯಲ್ಲಿ ನೆಲೆಸಿರುವ ಹಿಂದಿ ಧಾರಾವಾಹಿಯ ಹಿರಿಯ ನಟಿಯೊಬ್ಬರು ಮದುವೆಯಾಗುತ್ತಿರುವ ಸೋದರಳಿಯನಿಗೆ ಕೊಡಲೆಂದು, ಆನ್ಲೈನ್ನಲ್ಲಿ 4,800 ರೂಪಾಯಿ ಮೌಲ್ಯದ ವೈನ್ ಬಾಟಲಿ ಆರ್ಡರ್ ಮಾಡಿದ್ದರು.
ಆದರೆ ಅದು ಡೆಲಿವರಿಯಾಗದ ಹಿನ್ನೆಲೆಯಲ್ಲಿ ಅಲ್ಲಿದ್ದ ಸಂಖ್ಯೆಗೆ ಕರೆ ಮಾಡಿ, ಹಣವನ್ನು ಮರುಪಾವತಿಸಲು ಕೋರಿದ್ದಾರೆ. ಮರುಪಾವತಿಗೆ ನೀವು ನಮ್ಮ ವೆಬ್ಸೈಟ್ನಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಸೈಬರ್ ಕಳ್ಳರು ಹೇಳಿದ್ದಾರೆ.
ಇದನ್ನೂ ಓದಿ:ಕೋವಿಡ್ ನ ಹೊಸ ರೂಪಾಂತರಿ ತಡೆಗೆ ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ :ಉಡುಪಿ ಜಿಲ್ಲಾಧಿಕಾರಿ
ಅದನ್ನು ನಂಬಿದ ನಟಿ, ಕ್ರೆಡಿಟ್ ಕಾರ್ಡ್ ಬಳಸಿ ನೋಂದಣಿ ಮಾಡಿಕೊಂಡಿದ್ದು, ಒಟಿಪಿಯನ್ನೂ ಹಂಚಿಕೊಂಡಿದ್ದಾರೆ. ಅವರ ಉಳಿತಾಯ ಖಾತೆಯಲ್ಲಿದ್ದ ಹಣವನ್ನೆಲ್ಲ ಡ್ರಾ ಮಾಡಿಕೊಂಡ ಕಳ್ಳರು, ಬಳಿಕ ಡೆಬಿಟ್ ಕಾರ್ಡ್ನಿಂದಲೂ ನೋಂದಣಿ ಮಾಡಿಸಿಕೊಂಡಿದ್ದು, ಒಟ್ಟು 3.05 ಲಕ್ಷ ರೂಪಾಯಿ ದೋಚಿದ್ದಾರೆ. ಈ ವಿಚಾರವಾಗಿ ನಟಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.