ಈ ಅಭ್ಯರ್ಥಿ ಆಸ್ತಿ 441 ಕೋಟಿ
Team Udayavani, Oct 3, 2019, 6:36 AM IST
ಹೊಸದಿಲ್ಲಿ/ಮುಂಬಯಿ: ಮುಂಬಯಿನ ಮಲಬಾರ್ ಹಿಲ್ ಕ್ಷೇತ್ರದಿಂದ ಆರನೇ ಬಾರಿಗೆ ಸ್ಪರ್ಧಿಸಲಿರುವ ಬಿಜೆಪಿಯ ಮಂಗಲ್ ಪ್ರಭಾತ್ ಲೋಧಾ 441 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ನಾಮಪತ್ರದ ಜತೆಗೆ ಅವರು ಸಲ್ಲಿಸಿರುವ ಆಸ್ತಿ ವಿವರಕ್ಕೆ ಸಂಬಂಧಿಸಿದ ಅಫಿದಾವಿತ್‌ನಲ್ಲಿ ಈ ಅಂಶ ಉಲ್ಲೇಖವಾಗಿದೆ. ಲೋಧಾ ಮತ್ತು ಪತ್ನಿ 252 ಕೋಟಿ ರೂ.ಮೌಲ್ಯದ ಸ್ಥಿರ ಆಸ್ತಿ ಮತ್ತು 189 ಕೋಟಿ ರೂ. ಮೌಲ್ಯದ ಚರ ಆಸ್ತಿ ಹೊಂದಿದ್ದಾರೆ ಎಂದು ಹೇಳಿಕೊಂಡಿದ್ದಾರೆ.
ಬಿಜೆಪಿ ಟಿಕೆಟ್‌ನಿಂದ ಸ್ಪರ್ಧೆ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ ಪುತ್ರ ನಿತೇಶ್ ರಾಣೆ ಬಿಜೆಪಿ ಟಿಕೆಟ್‌ನಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ನಡೆಸಲಿದ್ದಾರೆ. “ಪಿಟಿಐ’ ಸುದ್ದಿಸಂಸ್ಥೆ ಜತೆಗೆ ಮಾತನಾಡಿದ ನಾರಾಯಣ ರಾಣೆ ಈ ಅಂಶ ಖಚಿತಪಡಿಸಿದ್ದಾರೆ. ನಿತೇಶ್ ರಾಣೆ 2014ರ ಚುನಾವಣೆಯಲ್ಲಿ ಕಂಕವಳಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು.
ರಾಯಭಾರಿ: ಬಾಲಿವುಡ್ ನಟ ಅಮಿತಾಭ್ ಬಚ್ಚನ್ ನಡೆಸಿಕೊಡುವ “ಕೌನ್ ಬನೇಗಾ ಕರೋರ್ ಪತಿ’ ಕಾರ್ಯಕ್ರಮದಲ್ಲಿ 1 ಕೋಟಿ ರೂ. ಬಹುಮಾನ ಗೆದ್ದ ಬಬಿತಾ ತಾಡೆ ಚುನಾವಣಾ ಆಯೋಗದ ರಾಯಭಾರಿಯಾಗಲಿದ್ದಾರೆ. ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಚುನಾವಣೆಯ ಪ್ರಕ್ರಿಯೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಅವರು ವಿವಿಧ ಕಾರ್ಯ ಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಟಿಕೆಟ್ ಮಾರಾಟ: ಹರ್ಯಾಣ ಕಾಂಗ್ರೆಸ್‌ನಲ್ಲಿ ಟಿಕೆಟ್ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಪಕ್ಷದ ನಾಯಕ ಅಶೋಕ್ ತನ್ವರ್ ಆರೋಪಿಸಿದ್ದಾರೆ. ತಮ್ಮ ಬೆಂಬಲಿಗರ ಜತೆಗೆ ಹೊಸದಿಲ್ಲಿಯಲ್ಲಿ ಕಾಂಗ್ರೆಸ್ ಪ್ರಧಾನ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನೂ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.