ಮುಂಬಯಿ:ಪಾದಾಚಾರಿ ಮೇಲ್ಸೇತುವೆ ಕುಸಿದು 5 ಬಲಿ, ಹಲವರು ಗಂಭೀರ
Team Udayavani, Mar 14, 2019, 3:42 PM IST
ಮುಂಬಯಿ : ನಗರದ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ರೈಲ್ವೇ ನಿಲ್ದಾಣದ ಬಳಿ ಇರುವ ಪಾದಾಚಾರಿ ಮೇಲ್‌ಸೇತುವೆ ಗುರುವಾರ ರಾತ್ರಿ ಕುಸಿದು ಬಿದ್ದ ಪರಿಣಾಮ ಕನಿಷ್ಠ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಅವಘಡದಲ್ಲಿ 32 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.ಕೆಲ ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ರಾತ್ರಿ 7.30 ರ ವೇಳೆಗೆ ಈ ಭೀಕರ ಅವಘಡ ನಡೆದಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಎಲ್ಲಾ ಸಾಧ್ಯತೆಗಳಿವೆ.
ಘಟನೆ ನಡೆದ ತಕ್ಷಣ ಎನ್‌ಡಿಆರ್‌ಎಫ್, ಅಗ್ನಿ ಶಾಮಕ ದಳ, ಪೊಲೀಸರು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.
ಬಿಎಂಆರ್‌ಸಿ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಗಾಯಾಳುಗಳ ಚಿಕಿತ್ಸೆಗೆ ಎಲ್ಲಾ ರೀತಿಯ ನೆರವು ಲಭ್ಯವಾಗುವಲ್ಲಿ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.