![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 19, 2022, 6:53 PM IST
ಮುಂಬಯಿ : ಗೋರೆಗಾಂವ್ ಪತ್ರಚಾಲ್ ಪ್ರಕರಣದಲ್ಲಿ ಬಂಧಿತರಾಗಿರುವ ಶಿವಸೇನೆ ಸಂಸದ ಸಂಜಯ್ ರಾವತ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಇನ್ನೂ 14 ದಿನಗಳ ಕಾಲ ವಿಸ್ತರಿಸಲಾಗಿದೆ. ಅವರ ನ್ಯಾಯಾಂಗ ಬಂಧನ ಇಂದು ಅಂತ್ಯಗೊಂಡಿದ್ದರಿಂದ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಗೋರೆಗಾಂವ್ ಪತ್ರಚಾಲ್ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಶಿವಸೇನಾ ಸಂಸದ ಸಂಜಯ್ ರಾವತ್ ಈ ಹಿಂದೆ ವಿಶೇಷ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ನಂತರ ರಾವುತ್ ಅವರನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನಂತರ ವಿಶೇಷ ನ್ಯಾಯಾಲಯವು ಅವರ ನ್ಯಾಯಾಂಗ ಬಂಧನವನ್ನು ಸೆ. 19 ರವರೆಗೆ ವಿಸ್ತರಿಸಿತು. ಅನಂತರ ಇಂದು ವಿಚಾರಣೆ ನಡೆಸಲಾಯಿತು,
ಮುಂಬಯಿ ಗೋರೆಗಾಂವ್ ಪ್ರದೇಶದಲ್ಲಿನ ಪತ್ರಚಾಲ್ ಪುನರಾಭಿವೃದ್ಧಿಯಲ್ಲಿ ಹಣಕಾಸು ಅವ್ಯವಹಾರ ನಡೆಸಿದ ಆರೋಪದಲ್ಲಿ ರಾವತ್ ಅವರನ್ನು ಜಾರಿ ನಿರ್ದೇಶನಾಲಯ ಆಗಸ್ಟ್ 1 ರಂದು ಬಂಧಿಸಿತ್ತು. ಪ್ರಕರಣದಲ್ಲಿ ರಾವತ್ ಅವರನ್ನು ಆರೋಪಿ ಎಂದು ಹೆಸರಿಸಿ ಇಡಿ ಕಳೆದ ವಾರ ಪೂರಕ ಚಾರ್ಜ್ ಶೀಟ್ ಸಲ್ಲಿಸಿತ್ತು. ರಾವುತ್ ಅವರು ಜಾಮೀನಿಗಾಗಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ವಿಶೇಷ ನ್ಯಾಯಾಧೀಶ ಎಂ.ಜಿ.ದೇಶಪಾಂಡೆ ಅವರು ಪ್ರಾಸಿಕ್ಯೂಷನ್ ದೂರನ್ನು ಪರಿಗಣನೆಗೆ ತೆಗೆದುಕೊಂಡ ನಂತರ ಶಿವಸೇನೆ ಸಂಸದರ ಸಹಾಯಕ ಪ್ರವೀಣ್ ರಾವತ್ ಸೇರಿದಂತೆ ಪ್ರಕರಣದ ಎಲ್ಲಾ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.